Homeಮುಖಪುಟಕೇರಳದ ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್‌, ಮುಸ್ಲಿಂ ಲೀಗ್

ಕೇರಳದ ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್‌, ಮುಸ್ಲಿಂ ಲೀಗ್

- Advertisement -
- Advertisement -

ಕೇರಳದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ತಕ್ಷಣವೇ ನಿಲ್ಲಿಸುವಂತೆ ಕೋರಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಭಾರತೀಯ ಚುನಾವಣಾ ಆಯೋಗವು (ಇಸಿಐ) ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜೊತೆಗೆ ಏಕಕಾಲದಲ್ಲಿ ಎಸ್‌ಐಆರ್ ನಡೆಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಕಣ್ಣೂರಿನಲ್ಲಿ ಬೂತ್ ಮಟ್ಟದ ಅಧಿಕಾರಿಯೊಬ್ಬರು ಎಸ್‌ಐಆರ್‌ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆಯ ನಂತರ, ಕೇರಳದಾದ್ಯಂತ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ತೀವ್ರಗೊಳ್ಳುತ್ತಿದೆ. ಈ ಘಟನೆಯು ರಾಜ್ಯವ್ಯಾಪಿ ಪ್ರತಿಭಟನೆಗೆ ಕಾರಣವಾಗಿದ್ದು, ಬಿಎಲ್‌ಒಗಳು ಸೋಮವಾರ ಕೆಲಸ ಬಹಿಷ್ಕಾರ ಘೋಷಿಸಿದ್ದಾರೆ. ಈ ನಡುವೆ ಕಾಂಗ್ರೆಸ್‌ ಮತ್ತು ಮುಸ್ಲಿಂ ಲೀಗ್ ಕೋರ್ಟ್ ಮೆಟ್ಟಿಲೇರಿದೆ.

ಮುಸ್ಲಿಂ ಲೀಗ್ ಪಕ್ಷ, ಅದರ ಪ್ರಧಾನ ಕಾರ್ಯದರ್ಶಿ ಪಿ.ಕೆ. ಕುಂಞಾಲಿಕುಟ್ಟಿ ಅವರ ಮೂಲಕ ಸಲ್ಲಿಸಲಾದ ರಿಟ್‌ ಅರ್ಜಿಯಲ್ಲಿ, ಚುನಾವಣಾ ಆಯೋಗ ಅಕ್ಟೋಬರ್ 27 ರಂದು ಎಸ್‌ಐಆರ್ ಕುರಿತು ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿದೆ. ಎಸ್‌ಐಆರ್‌ ಅನಿರೀಕ್ಷಿತ ಮತ್ತು ಅದಕ್ಕೆ ನಿಗದಿಪಡಿಸಲಾದ ಸಮಯ ಸರಿಯಾಗಿಲ್ಲ ಎಂದು ಹೇಳಿದೆ.

ಎಸ್‌ಐಆರ್ ಪ್ರಕ್ರಿಯ ಸರಿಯಾಗಿಲ್ಲ. ಪ್ರಜಾಪ್ರಭುತ್ವದಲ್ಲಿ, ಅಧಿಕಾರದಲ್ಲಿರುವವರು ನ್ಯಾಯ ಒದಗಿಸಲು ವಿಫಲರಾದಾಗ ನ್ಯಾಯಾಲಯದ ಮೊರೆ ಹೋಗುವುದು ಒಂದೇ ಮಾರ್ಗ ಎಂದು ಕುಂಞಾಲಿಕುಟ್ಟಿ ಹೇಳಿದ್ದಾರೆ.

ನಿಷ್ಪಕ್ಷಪಾತವಾಗಿ ಯೋಚಿಸುವ ಯಾರಿಗಾದರೂ, ಬಿಹಾರದ ಚುನಾವಣೆಯನ್ನು ವಂಚನೆಯ ಮೂಲಕ ನಡೆಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಈಗ ಕೇರಳದಲ್ಲಿ ಪರಿಸ್ಥಿತಿ ಹೇಗಿದೆಯೆಂದರೆ, ಎಸ್‌ಐಆರ್‌ಗೆ ದಾಖಲೆಗಳನ್ನು ಸಲ್ಲಿಸಲು ಕೂಡ ಸಾಕಷ್ಟು ಸಮಯವಿಲ್ಲ” ಎಂದು ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ಸೈಯದ್ ಸಾದಿಕಲೀ ತಂಙಳ್ ತಿಳಿಸಿದ್ದಾರೆ.

ಮುಸ್ಲಿಂ ಲೀಗ್ ಸಂಸದ ಹಾಗೂ ವಕೀಲ ಹ್ಯಾರಿಸ್ ಬೀರನ್ ಅವರು ರಿಟ್ ಅರ್ಜಿಯನ್ನು ಸಿದ್ಧಪಡಿಸಿದ್ದು, ವಕೀಲ ಆರ್.ಎಸ್. ಜೆನಾ ಮೂಲಕ ಸಲ್ಲಿಸಿದ್ದಾರೆ.

ಡಿಸೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿರುವ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೆ, ಕರಡು ಮತದಾರರ ಪಟ್ಟಿಯನ್ನು ಎಸ್‌ಐಆರ್ ನಂತರ ಡಿಸೆಂಬರ್ 4 ರಂದು ಪ್ರಕಟಿಸಲಾಗುವುದು ಎಂದು ಹೇಳಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಸಕ್ರಿಯ ಚುನಾವಣಾ ಪ್ರಕ್ರಿಯೆಯ ಜೊತೆಗೆ ಮತದಾರರ ಪಟ್ಟಿಯ ವ್ಯಾಪಕ ಪರಿಷ್ಕರಣೆ ನಡೆಸುವುದು ಚುನಾವಣಾ ವ್ಯವಸ್ಥೆಯ ಸ್ಥಿರತೆ ಮತ್ತು ಸಮಗ್ರತೆಯನ್ನು ಹಾಳು ಮಾಡುತ್ತದೆ ಎಂದು ಮುಸ್ಲಿಂ ಲೀಗ್ ವಾದಿಸಿದೆ.

ಕೇರಳದ ಮತದಾರರ ಪಟ್ಟಿಯಲ್ಲಿ ಯಾವುದೇ ವಂಚನೆ, ನಕಲು ಅಥವಾ ವ್ಯವಸ್ಥಿತ ಭ್ರಷ್ಟಾಚಾರ ಕಂಡುಬಂದಿಲ್ಲ, ಆದರೂ ಎಸ್‌ಐಆರ್‌ಗೆ ಆದೇಶಿಸಲಾಗಿದೆ. ಮಾನ್ಯವಾದ, ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯನ್ನು ತಿದ್ದಿ ಬರೆಯುವ ಮತ್ತು ವ್ಯಾಪಕವಾದ ಮರು-ಪರಿಶೀಲನಾ ಅವಶ್ಯಕತೆಗಳನ್ನು ವಿಧಿಸುವ ಚುನಾವಣಾ ಆಯೋಗದ ಪ್ರಯತ್ನ ಅಸಮಂಜಸ ಮತ್ತು ಅಸಮಾನವಾಗಿದೆ ಎಂದಿದೆ.

ಅರ್ಜಿಯ ಪ್ರಕಾರ, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯಲ್ಲಿ ದೋಷಗಳು ಅಥವಾ ಅನರ್ಹತೆಯ ಬಗ್ಗೆ ನಿರ್ದಿಷ್ಟ, ವೈಯಕ್ತಿಕ ದೂರುಗಳಿಲ್ಲದೆ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಅಳಿಸಲು ಅಥವಾ ತಟಸ್ಥಗೊಳಿಸಲು ಅಧಿಕಾರ ನೀಡುವ ಯಾವುದೇ ಅಂಶವಿಲ್ಲ ಎಂದು ಹೇಳಿದೆ.

ಅರ್ಜಿಯಲ್ಲಿ ಭಾನುವಾರ ಕಣ್ಣೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅನೀಶ್ ಜಾರ್ಜ್ ಅವರ ದುರಂತ ಸಾವನ್ನು ಉಲ್ಲೇಖಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯಿಂದ ಉಂಟಾದ ಅತಿಯಾದ ಕೆಲಸದ ಒತ್ತಡವೇ ಜಾರ್ಜ್ ಅವರ ಆತ್ಮಹತ್ಯೆಗೆ ಕಾರಣ ಎಂದು ಮುಸ್ಲಿಂ ಲೀಗ್ ಆರೋಪಿಸಿದೆ.

ಹಲವಾರು ಬಿಎಲ್‌ಒಗಳು ಅಸಾಧ್ಯವಾದ ಕೆಲಸದ ಹೊರೆಯ ಬಗ್ಗೆ ದೂರು ನೀಡಿದ್ದಾರೆ. ಅನೇಕರು ವಾರಾಂತ್ಯಗಳು ಸೇರಿದಂತೆ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಕೆಲಸ ಮಾಡುತ್ತಿದ್ದಾರೆ. ಇನ್ನೂ ಗಣತಿ ನಮೂನೆಗಳ ವಿತರಣೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿರುವಾಗ ಪರಿಷ್ಕರಣೆಗೆ ನೀಡಲಾದ ಒಂದು ತಿಂಗಳ ಅವಧಿಯು ಸಾಕಾಗುವುದಿಲ್ಲ. ಬಿಎಲ್‌ಒಗಳು ಮತ್ತು ಮತದಾರರು, ವಿಶೇಷವಾಗಿ ಎನ್‌ಆರ್‌ಐಗಳು ಇಬ್ಬರಿಗೂ ಅಪಾಯವನ್ನುಂಟುಮಾಡುತ್ತದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಸಮೀಪಿಸುತ್ತಿದೆ. ಅಧಿಕಾರಿಗಳು ಒತ್ತಡಕ್ಕೆ ಸಿಲುಕಿದ್ದಾರೆ. ಈ ನಡುವೆ ಎಸ್‌ಐಆರ್‌ಗೆ 30 ದಿನಗಳ ಸಮಯ ನಿಗದಿಪಡಿಸಲಾಗಿದೆ. ಇದರ ಹಿಂದಿನ ಏಕೈಕ ಉದ್ದೇಶವೆಂದರೆ ಸಾಧ್ಯವಾದಷ್ಟು ಮತದಾರರನ್ನು ಕರಡು ಪಟ್ಟಿಯಿಂದ ಹೊರಗಿಡುವುದು ಎಂದು ಮುಸ್ಲಿಂ ಲೀಗ್ ಹೇಳಿದೆ.

ಈ ಪ್ರಕ್ರಿಯೆಯು ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಸಂವಿಧಾನ ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳಿಗೆ ಅನುಗುಣವಾಗಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೆ ಎಸ್‌ಐಆರ್ ಅನ್ನು ಮುಂದೂಡಬೇಕೆಂದು ಕೋರಿ ಕೇರಳ ಸರ್ಕಾರ ಕಳೆದ ವಾರ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಆದರೆ, ಹೈಕೋರ್ಟ್ ಎಸ್‌ಐಆರ್‌ನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಆರ್‌ಗೆ ಸಂಬಂಧಿಸಿದ ವಿಷಯಗಳನ್ನು ಆಲಿಸುತ್ತಿರುವ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸುವಂತೆ ಸೂಚಿಸಿದೆ.

ಇದಕ್ಕೂ ಮೊದಲು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಎಸ್‌ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದರು. ಎಸ್‌ಐಆರ್ ನಮ್ಮ ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಅವಮಾನ ಎಂದಿದ್ದರು.

ಹಳೆಯ ಮತದಾರರ ಪಟ್ಟಿಯನ್ನು ಬಳಸಿಕೊಂಡು ಎಸ್‌ಐಆರ್‌ ನಡೆಸುವುದು ಮತ್ತು ನಿರ್ಣಾಯಕ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮುಂಚಿತವಾಗಿ ಅದನ್ನು ಮುಗಿಸಲು ಮುಂದಾಗಿರುವುದು ಗಂಭೀರ ಕಳವಳಗಳನ್ನು ಉಂಟುಮಾಡಿದೆ ಎಂದು ಎಂದು ಪಿಣರಾಯಿ ವಿಜಯನ್ ಹೇಳಿದ್ದರು.

ಕಳೆದ ಸೆಪ್ಟೆಂಬರ್‌ನಲ್ಲಿ, ಎಸ್‌ಐಆರ್ ಅನ್ನು ಮರುಪರಿಶೀಲಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಈ ಪ್ರಕ್ರಿಯೆ ಜನರ ಹಕ್ಕುಗಳಿಗೆ ಗಂಭೀರ ಹಾನಿಯನ್ನುಂಟುಮಾಡಬಹುದು ಎಂದು ಎಚ್ಚರಿಸಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕೂಡ ರಾಜ್ಯದಲ್ಲಿ ಎಸ್‌ಐಆರ್ ನಡೆಸುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಇದು ಸಾಂವಿಧಾನಿಕ ಅತಿಕ್ರಮಣ ಎಂದು ಕರೆದಿದೆ. ಇದು ದೊಡ್ಡ ಪ್ರಮಾಣದ ಹಕ್ಕು ನಿರಾಕರಣೆಗೆ ಕಾರಣವಾಗಬಹುದು ಎಂದು ಹೇಳಿದೆ.

ಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...