ಇಂದು ಒಂದು ಕಡೆ ಮಹಾರಾಷ್ಟ್ರದ ಸರ್ಕಾರ ರಚನೆಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಶಿವಸೇನೆ, ಎನ್‌ಸಿಪಿ, ಮತ್ತು ಕಾಂಗ್ರೆಸ್ ಮುಖಂಡರು ರಾಜ್ಯಪಾಲ ಭಗತ್ ಸಿಂಗ್ ಕೊಶಾರಿ ಅವರನ್ನು ಭೇಟಿಯಾಗಿ ಮೈತ್ರಿಕೂಟವನ್ನು ಬೆಂಬಲಿಸುವ ಶಾಸಕರ ಪಟ್ಟಿ ನಮ್ಮ ಬಳಿ ಇದೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
“ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿ ನಿಯೋಗವು ಆಯಾ ನಾಯಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ನಾವು ಭವಿಷ್ಯದಲ್ಲಿ ಸರ್ಕಾರವನ್ನು ರಚಿಸುವ ಹಕ್ಕನ್ನು ನೋಂದಾಯಿಸಿಕೊಳ್ಳಬೇಕು. ರಾಜ್ಯದಲ್ಲಿ ಮತ್ತೆ ರಾಷ್ಟ್ರಪತಿ ಆಡಳಿತವನ್ನು ಹೇರಬಾರದು” ಎಂದು ಒತ್ತಾಯಿಸಿದ್ದೇವೆ ಎಂದು ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಟ್ವೀಟ್ ಮಾಡಿದ್ದಾರೆ.
The @INCMaharashtra , @ShivSena and @NCPspeaks delegation with their respective leaders have called on Governor at Rajbhavan to register it's claim to form the govt in future as the incumbent govt is definitely going to fall. State must not get President Rule again.
— Sachin Sawant (@sachin_inc) November 25, 2019
ಕಳೆದ ತಿಂಗಳು ಚುನಾವಣಾ ಫಲಿತಾಂಶ ಪ್ರಕಟವಾದಾಗಿನಿಂದ ರಾಜಕೀಯ ಅನಿಶ್ಚಿತತೆಗೆ ಒಳಗಾಗಿರುವ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ತಮ್ಮಲ್ಲಿ ಅಗತ್ಯ ಬಹುಮತವಿದೆ ಎಂಬ ಅಂಶವನ್ನು ಮೂರು ಪಕ್ಷಗಳ ಒಕ್ಕೂಟವು ಒತ್ತಿ ಒತ್ತಿ ಹೇಳುತ್ತಿದೆ.
ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನ್ಯಾಯಾಲಯದಲ್ಲಿ ಕೂಡ ತಮ್ಮ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನಿಸಬೇಕು ಎಂದು ವಾದಿಸಿದೆ ಮತ್ತು ಅವರಿಗೆ 154 ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸಿದ್ದಾರೆ.


