Homeಮುಖಪುಟಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು  26 ವಿರೋಧ ಪಕ್ಷಗಳ ಪ್ರಮುಖ ನಾಯಕರು ರೂಪರೇಷಗಳನ್ನು ರೂಪಿಸಲು ಬೆಂಗಳೂರಿನಲ್ಲಿ ಸಭೆ ಸೇರಿದ್ದಾರೆ. ಇಂದು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಔಪಚಾರಿಕ ಮಾತುಕತೆ ನಡೆಯುತ್ತಿದೆ.

ಪ್ರತಿಪಕ್ಷಗಳ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ತಮ್ಮ ಪಕ್ಷಕ್ಕೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ. ಬಿಜೆಪಿಯನ್ನು ಗುರಿಯಾಗಿಟ್ಟುಕೊಂಡು, ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡಬೇಕಿದೆ. ನಾವು 26 ಪಕ್ಷಗಳು ಇಲ್ಲಿ ಸೇರಿದ್ದೇವೆ 11 ರಾಜ್ಯಗಳಲ್ಲಿ ಸರ್ಕಾರವಿದೆ ಎಂದು ಹೇಳಿದರು.

ಬಿಜೆಪಿ ತಮ್ಮ ಮಿತ್ರಪಕ್ಷಗಳ ಮತಗಳನ್ನು ಬಳಸಿಕೊಂಡು ನಂತರ ಅವುಗಳನ್ನು ತಿರಸ್ಕರಿಸಿತ್ತು. ಆದರೆ ಈಗ ಬಿಜೆಪಿ ಅಧ್ಯಕ್ಷರು ಮತ್ತು ಪಕ್ಷದ ನಾಯಕರು ಹಳೆಯ ಮಿತ್ರ ಪಕ್ಷದ ನಾಯಕರನ್ನು ಸೆಳೆಯಲು ”ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ.” ಎಂದು ಅವರು ಸಭೆಯಲ್ಲಿ ಟೀಕಿಸಿದರು.

ಸಭೆಯಲ್ಲಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಎಂಕೆ ಸ್ಟಾಲಿನ್, ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್, ಹೇಮಂತ್ ಸೊರೆನ್, ಮಮತಾ ಬ್ಯಾನರ್ಜಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಎರಡು ದಿನಗಳ ಸಭೆಯಲ್ಲಿ ಭಾಗವಹಿಸಿದ್ದಾರೆ. ಅಜಿತ್ ಪವಾರ್ ಅವರ ಬಂಡಾಯದಿಂದ ಈ ತಿಂಗಳ ಆರಂಭದಲ್ಲಿ ಪಕ್ಷ ವಿಭಜನೆಗೆ ಒಳಗಾಗಿದ್ದ ಶರದ್ ಪವಾರ್ ಇಂದು ಭಾಗಿಯಾಗಿದ್ದಾರೆ.

”ಸಾಮಾಜಿಕ ನ್ಯಾಯ, ಅಂತರ್ಗತ ಅಭಿವೃದ್ಧಿ ಮತ್ತು ರಾಷ್ಟ್ರೀಯ ಕಲ್ಯಾಣದ ಕಾರ್ಯಸೂಚಿಯನ್ನು ಉತ್ತೇಜಿಸಲು ಸಮಾನ ಮನಸ್ಕ ವಿರೋಧ ಪಕ್ಷಗಳು ನಿಕಟವಾಗಿ ಒಟ್ಟಾಗಿ ಕೆಲಸ ಮಾಡುತ್ತವೆ. ನಾವು ದ್ವೇಷ, ವಿಭಜನೆ, ಆರ್ಥಿಕ ಅಸಮಾನತೆ ಮತ್ತು ಲೂಟಿಯ ನಿರಂಕುಶ ಮತ್ತು ಜನವಿರೋಧಿ ರಾಜಕೀಯದಿಂದ ಭಾರತದ ಜನರನ್ನು ಮುಕ್ತಗೊಳಿಸಲು ಬಯಸುತ್ತೇವೆ… ಈ ಭಾರತಕ್ಕಾಗಿ ಒಗ್ಗಟ್ಟಾಗುತ್ತಿದ್ದೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಮಾಜಿ ಮಿತ್ರ ಪಕ್ಷ ಜನತಾದಳವು ಒಕ್ಕೂಟದಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂಬ ಪ್ರಶ್ನೆಗೆ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಉತ್ತರಿಸಿ, ”ಬಿಜೆಪಿ ವಿರುದ್ಧ ಹೋರಾಡಲು ಇಚ್ಛಾಶಕ್ತಿ ಮತ್ತು ಧೈರ್ಯ ಹೊಂದಿರುವ ಎಲ್ಲಾ ಪಕ್ಷಗಳಿಗೆ ಸ್ವಾಗತ” ಎಂದು ಹೇಳಿದರು.

”ಮೊದಲ ಸಭೆ ಪಟ್ನಾದಲ್ಲಿ, ಎರಡನೇ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಈ ವಿರೋಧವು ಹೀಗೆ  ಮುಂದುವರೆಯುತ್ತದೆ… ನಾವು ಇನ್ನೂ ಅನೇಕ ಸಭೆಗಳನ್ನು ನಡೆಸುತ್ತೇವೆ. ಈಗ ನಾವು ಸಮಸ್ಯೆಗಳ ಬಗ್ಗೆ ಚರ್ಚಿಸುತ್ತವೆ, ಆನಂತರ ನಾವು ನಾಯಕರನ್ನು ಆಯ್ಕೆ ಮಾಡುತ್ತೇವೆ” ಎಂದು ಖೇರಾ ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...