Homeಕರ್ನಾಟಕಭರ್ಜರಿ ಗೆಲುವಿನತ್ತ ಕಾಂಗ್ರೆಸ್; ಭಾವುಕರಾದ ಡಿಕೆಶಿ, ಶುಭಾಶಯ ಕೋರಿದ ಎಚ್‌ಡಿಕೆ, ಸ್ಟಾಲಿನ್

ಭರ್ಜರಿ ಗೆಲುವಿನತ್ತ ಕಾಂಗ್ರೆಸ್; ಭಾವುಕರಾದ ಡಿಕೆಶಿ, ಶುಭಾಶಯ ಕೋರಿದ ಎಚ್‌ಡಿಕೆ, ಸ್ಟಾಲಿನ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಕೆಲವೆಡೆ ಈಗಾಗಲೆ ಹಲವು ಅಭ್ಯರ್ಥಿಗಳ ಗೆಲುವು ಘೋಷಣೆಯಾಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಸಧ್ಯದ ಚಿತ್ರಣ ನೋಡಿದರೆ ಕಾಂಗ್ರೆಸ್ ಪಕ್ಷ 130ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಕಾಣುತ್ತದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರು ಭಾವುಕರಾಗಿ ಮಾತನಾಡಿದ್ದು, ”ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಛಳ ಬಹುಮತ ನೀಡಿದ್ದಾರೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

”ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹೇಳಿದ್ದೆ, ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಯೂಡಿ ಕೆಲಸ ಮಾಡುವುದು ಯಶಸ್ಸು ಎಂದು. ಅದೇ ರೀತಿ ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಈ ಯಶಸ್ಸು ಸಿಕ್ಕಿದೆ’. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟ ಮಾತಿನಂತೆ ನಾನು ಪಕ್ಷವನ್ನು ಗೆಲುವಿನ ದಡ ಸೇರಿಸಿದ್ದೇನೆ” ಎಂದು ಹೇಳಿದ್ದಾರೆ.

”ನನ್ನ ಮೇಲೆ ಬಿಜೆಪಿ ಷಡ್ಯಂತ್ರ ರೂಪಿಸಿ ಬಿಜೆಪಿ ಸೇರಬೇಕು ಅಥವಾ ಜೈಲಿಗೆ ಹೋಗಬೇಕು ಎಂಬ ಆಯ್ಕೆ ಇಟ್ಟಾಗ ನಾನು ಜೈಲಿಗೆ ಹೋಗುವುದನ್ನು ಆರಿಸಿಕೊಂಡೆ. ಆಗ ಸೋನಿಯಾ ಗಾಂಧಿ ಅವರು ತಿಹಾರ್ ಜೈಲಿಗೆ ಬಂದು ನನ್ನನ್ನು ಭೇಟಿ ಮಾಡಿದ್ದರು. ಅವರು ನನ್ನ ಮೇಲೆ ಅಷ್ಟು ನಂಬಿಕೆ ಇಟ್ಟಿದ್ದರು” ಎಂದರು.

ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಸರ್ಕಾರ ರಚಿಸಲು ಸಿದ್ಧರಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ಕೋರಿದ್ದಾರೆ. ”ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ” ಎಂದಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ರಿಂದ ಅಭಿನಂದನೆ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ ಸ್ಟಾಲಿನ್ ಅವರು ಧನ್ಯವಾದ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

0
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಕೇಂದ್ರ ಗೃಹ ಇಲಾಖೆ ಪ್ರಾರಂಭಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ 300ಕ್ಕೂ ಅಧಿಕ...