Homeಮುಖಪುಟಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತದತ್ತ ತಲುಪಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಸಾಗಿದೆ. 127 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ಸನಿಹದಲ್ಲಿದ್ದು ನೂತನ ಸರ್ಕಾರ ರಚಿಸುವ ತವಕದಲ್ಲಿದೆ.

ಆಡಳಿತರೂಢ ಬಿಜೆಪಿ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ. 67 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು ತೀವ್ರ ಸೋಲಿನತ್ತ ಮುಖ ಮಾಡಿದೆ. ಬಿಜೆಪಿ ಸರ್ಕಾರದ ಹಲವಾರು ಸಚಿವರು ಹೀನಾಯ ಸೋಲು ಕಂಡಿದ್ದಾರೆ. ವಿ.ಸೋಮಣ್ಣ ಚಾಮರಾಜನಗರ ಮತ್ತು ವರುಣ ಎರಡೂ ಕಡೆ ಸೋಲಿನತ್ತ ಹೊರಟಿದ್ದಾರೆ.

ಜೆಡಿಎಸ್ ಪಕ್ಷವು ಕಳೆದ ಚುನಾವಣೆಗಿಂತಲೂ ಹೀನಾಯ ಸೋಲು ಕಂಡಿದೆ. ಕೇವಲ 23 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಅನುಭವಿಸಿದೆ. ಇತರ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಸ್ಪಷ್ಟ ಬಹುಮತ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷ ನಾಳೆ ಶಾಸಕಾಂಗ ಪಕ್ಷದ ಸಭೆ ಇಟ್ಟುಕೊಂಡಿದೆ.

ಇದನ್ನೂ ಓದಿ: ರಾಮನಗರ: ಸೋಲಿನತ್ತ ಮುಖ ಮಾಡಿದ ನಿಖಿಲ್ ಕುಮಾರ ಸ್ವಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಪುವಾ ನ್ಯೂಗಿನಿಯಾ ಭೂಕುಸಿತ: 670ಕ್ಕೂ ಹೆಚ್ಚು ಜನರು ಸಾವು

0
ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 670ಕ್ಕೂ ಹೆಚ್ಚು ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಭಾನುವಾರ ಅಂದಾಜಿಸಿದೆ. ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ...