Homeಕರ್ನಾಟಕಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

- Advertisement -
- Advertisement -

ಸರ್ಕಾರ ಉದ್ದೇಶಪೂರ್ವಕವಾಗಿ ಮತಾಂತರ ನಿಷೇಧ ಮಸೂದೆ ಜಾರಿಗೆ ಸಂಬಂಧಿಸಿದ ವಿಚಾರವನ್ನು ಅಂತಿಮ ಗಳಿಗೆಯಲ್ಲಿ ಚರ್ಚೆಗೆ ತರಲಿದ್ದಾರೆ. ನಾವು ಅದಕ್ಕೆ ಸಿದ್ಧವಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯದೇ ಇದನ್ನು ತರಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಚುನಾವಣೆ ಸಮೀಪಿಸುತ್ತಿದ್ದಂತೆ ವಿಚಾರ ತಿರುಚಲು ಈ ರೀತಿ ಮಾಡುತ್ತಾರೆ. ನಿನ್ನೆ ಕಾನೂನು ಸಚಿವರು ಇದರಲ್ಲಿ ಎಸ್ಸಿ, ಬೌದ್ಧ ಧರ್ಮ ಸೇರಿದಂತೆ ಇತರೆ ವಿಚಾರ ಬರುತ್ತದೆ ಎಂದಿದ್ದಾರೆ. ಹೀಗಾಗಿ ಅವರು ಕೊನೆ ಗಳಿಗೆಯಲ್ಲಿ ತೆಗೆದುಕೊಳ್ಳುತ್ತಾರೆ. ಅವರು ಯಾವಾಗ ಬೇಕಾದರೂ ತೆಗೆದುಕೊಳ್ಳಲಿ, ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ. ಸದನದ ಒಳಗೆ ಹಾಗೂ ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಕಾನೂನು ಈಗಾಗಲೇ ಇದೆ. ಅದನ್ನು ಪಾಲಿಸುವ ಬದಲು ಈ ವಿಚಾರವನ್ನು ಚುಚ್ಚಿ, ಚುಚ್ಚಿ ಹೇಳುತ್ತಿದ್ದಾರೆ. ಬೌದ್ಧ, ಸಿಖ್, ಜೈನ್, ಕ್ರೈಸ್ತ ಧರ್ಮಗಳಿದ್ದು, ಕೇವಲ ಒಂದನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿಯವರಲ್ಲೇ ಆಂತರಿಕ ಭಿನ್ನಮತ ಇದೆ. ಇದು ರಾಜ್ಯಕ್ಕೆ ಮುಂದೆ ಬರಲಿರುವ ಬಂಡವಾಳ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಕುರಿತು ಮಾತನಾಡಿದ ಅವರು, “ಮೇಕೆದಾಟು ಪಾದಯಾತ್ರೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಪಕ್ಷ, ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದಾರೆ.

ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಇಡೀ ದೇಶಕ್ಕೇ ಆಶ್ಚರ್ಯ ಮೂಡಿಸಿರುವ ಪತ್ರ. ಅದು ಕೂಡ ನಮ್ಮ ಹೋರಾಟದ ಆದ್ಯತೆ ವಿಷಯಗಳಲ್ಲಿ ಒಂದು. ಅಧಿವೇಶನದಲ್ಲಿ ನಾವು ಎಲ್ಲ ವಿಚಾರಗಳನ್ನು ಒಂದೇ ದಿನ ತೆಗೆದುಕೊಳ್ಳಲು ಆಗುವುದಿಲ್ಲ. ಭ್ರಷ್ಟಾಚಾರ ಕೂಡ ಒಂದು ಪ್ರಮುಖ ವಿಚಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಒಳಒಪ್ಪಂದವೋ ಅಥವಾ ಬೇರೆ ಏನೋ, ಸಿಎಂ ಏನು ಹೇಳಿದ್ದಾರೆ? ಅವರು ಕಾಂಗ್ರೆಸ್ ರೆಬಲ್ ಅಭ್ಯರ್ಥಿ ಎಂದಿದ್ದಾರೆ. ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಬೇಕಾದರೆ ಸಂಪುಟ ವಿಸ್ತರಣೆ ವೇಳೆ ಲಖನ್ ಅವರನ್ನೇ ಸಚಿವರನ್ನಾಗಿ ಮಾಡಿಕೊಳ್ಳಲಿ’ ಎಂದು ತಿಳಿಸಿದ್ದಾರೆ.

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಹಿಟ್ ಅಂಡ್ ರನ್ ನೀತಿ ಅನುಸರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಪ್ರಶ್ನೆಯೇ ಇಲ್ಲ. ನಾವು ಹಲವು ವಿಚಾರಗಳೊಂದಿಗೆ ಈ ವಿಷಯ ತರುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಮತಾಂತರ ನಿಷೇಧ ಚರ್ಚೆ ಬೆನ್ನಲ್ಲೇ ಹೆಚ್ಚಿದ ಕೋಮುದ್ವೇಷ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ (ಪಿಯುಸಿಎಲ್‌) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಅಂಗೀಕರಿಸಲ್ಪಟ್ಟಿರುವ, ಧರ್ಮವನ್ನು ಆಚರಿಸುವ, ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಹಕ್ಕಿನ ಮೇಲೆ ದಾಳಿ ನಡೆಸುವುದಕ್ಕೆ ಬಳಸಲಾಗುತ್ತಿರುವ ಮತಾಂತರವೆಂಬ ಸುಳ್ಳು ನೆಪವು ಮಿಥ್ಯೆಯೇ ಆಗಿದೆ ಎಂಬ ಅಂಶವನ್ನು ಈ ವರದಿ ಸಾರಿಹೇಳಿದೆ.

‘ಮತಾಂತರ’ ಎಂಬ ಪರಿಭಾಷೆಯನ್ನು ಬಳಸಿ, ಹೇಗೆ ಕ್ರಿಶ್ಚಿಯನ್ನರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರತಿಪಾದಿಸುವ ಸಾಂವಿಧಾನಿಕ ಹಕ್ಕನ್ನು ಇಂದಿನ ಕರ್ನಾಟಕದಲ್ಲಿ ಮೊಟಕುಗೊಳಿಸಲಾಗುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ವಿಸ್ತೃತವಾಗಿ ವರದಿ ಚರ್ಚಿಸಿದೆ.

ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಅಪರಾಧಗಳು, ಧಾರ್ಮಿಕಾಚರಣೆಯ ಬಗೆಗೆ ಆದೇಶಿಸಲಾಗಿರುವ ಸಮೀಕ್ಷೆಗಳ ಸರಣಿ, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನಿನ ನಿರೀಕ್ಷೆಯ ಸಂದರ್ಭದಲ್ಲಿ ವಿವಿಧ ಸ್ಥರಗಳಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಕೊಡಮಾಡಲಾಗುತ್ತಿರುವ ಕಿರುಕುಳವನ್ನು ದಾಖಲಿಸಲು ಈ ವರದಿಯನ್ನು ತಯಾರಿಸಲಾಗಿದೆ ಎಂದು ಪಿಯುಸಿಎಲ್‌ ಸಂಘಟಕರು ತಿಳಿಸಿದ್ದಾರೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...