Homeಮುಖಪುಟಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ವಾಪಸ್ ಪಡೆದಿದ್ದಕ್ಕೆ ಕಾಂಗ್ರೆಸ್ ಆಕ್ರೋಶ, ಪ್ರತಿಭಟನೆ

ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ವಾಪಸ್ ಪಡೆದಿದ್ದಕ್ಕೆ ಕಾಂಗ್ರೆಸ್ ಆಕ್ರೋಶ, ಪ್ರತಿಭಟನೆ

- Advertisement -
- Advertisement -

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್ ಪಿ ಜಿ ( ವಿಶೇಷ ಭದ್ರತೆ)ಯನ್ನು ಹಿಂದಕ್ಕೆ ಪಡೆಯಲಾಗಿತ್ತು. ಲೋಕಸಭೆಯಲ್ಲಿ ಇಂದು ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್.ಪಿ.ಜಿ ಭದ್ರತೆಯನ್ನು ವಾಪಸ್ ಪಡೆದಿರುವುದನ್ನು ವಿರೋಧಿಸಿ, ಕಾಂಗ್ರೆಸ್ ನಾಯಕರು ಗದ್ದಲ ಎಬ್ಬಿಸಿದರು. ಬಿಜೆಪಿ ನಾಯಕರು ಮತ್ತು ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್.ಪಿ.ಜಿ ಭದ್ರತೆ ವಾಪಸ್ ತೆಗೆದುಕೊಂಡಿದ್ದು ಏಕೆ..? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.  ಅಲ್ಲದೇ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇದಕ್ಕೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿಯಿತು. ಕಾಂಗ್ರೆಸ್ ನಾಯಕರು ಗಲಾಟೆ ಮಾಡುತ್ತಿದ್ದಂತೆಯೇ, ಏನೊಂದು ಪ್ರತಿಕ್ರಿಯಿಸದೇ ಗೃಹ ಸಚಿವ ಅಮಿತ್ ಶಾ ಹೊರ ನಡೆದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ನೀಡಿದ್ದ ಎಸ್.ಪಿ.ಜಿ ಭದ್ರತೆಯನ್ನು ಹಿಂಪಡೆದಿದ್ದೇಕೆ ಎಂದು ಕಾಂಗ್ರೆಸ್ ಮುಖಂಡರು ಪ್ರಶ್ನಿಸಿ, ಆಕ್ರೋಶ ವ್ಯಕ್ತಪಡಿಸಿದರು. ಝಡ್ ಪ್ಲಸ್ ವಿಭಾಗದಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ 100 ಸಿಬ್ಬಂದಿಯಿಂದ ಭದ್ರತಾ ರಕ್ಷಣೆಯನ್ನು ಖಾತ್ರಿ ಮಾಡಿದೆ.

ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ, ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ, ನೋಟಿಸ್ ನೀಡಿದ್ದಾರೆ. ಇದನ್ನು ಪರಿಶೀಲಿಸುವಂತೆ ಮಾಡಿದ ಮನವಿಯನ್ನು ಸ್ಪೀಕರ್ ತಿರಸ್ಕರಿಸಿದರು.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸಾಮಾನ್ಯ ವ್ಯಕ್ತಿಗಳಲ್ಲ. 1991ರಲ್ಲಿ ಎನ್.ಡಿ.ಎ ಸರ್ಕಾರ ಜಾರಿಯಾದಾಗ ಮತ್ತು 2019ರವರೆಗೆ ಗಾಂಧಿ ಕುಟುಂಬಕ್ಕೆ ನೀಡಿದ ಎಸ್.ಪಿ.ಜಿ ಭದ್ರತೆಯನ್ನು ಹಿಂಪಡೆದಿರಲಿಲ್ಲ. ಆದರೆ ಈಗ ಯಾಕೆ ಭದ್ರತೆ ಹಿಂಪಡೆದಿದ್ದೀರಿ ಎಂದು ಪ್ರಶ್ನಿಸಿ 20ಕ್ಕೂ ಹೆಚ್ಚು ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಆಗ ಸ್ಪೀಕರ್ ಓಂ ಬಿರ್ಲಾ ತಮ್ಮ ಸ್ಥಾನಗಳಿಗೆ ಮರಳುವಂತೆ ನಾಯಕರಲ್ಲಿ ಮನವಿ ಮಾಡಿದರು. ಆದರೆ ನಾಯಕರು ಪ್ರತಿಭಟನೆ ಮುಂದುವರೆಸಿದರು.

ಪ್ರಧಾನಿ ಉತ್ತರ ನೀಡಲೇಬೇಕು. ದಯವಿಟ್ಟು ಪ್ರತೀಕಾರದ ರಾಜಕೀಯ ನಿಲ್ಲಿಸಿ. ಸರ್ವಾಧಿಕಾರತ್ವವನ್ನು ಕೊನೆಗೊಳಿಸಿ, ನಮಗೆ ನ್ಯಾಯ ಬೇಕು ಎಂದು ಕಾಂಗ್ರೆಸ್ ನಾಯಕರು ಘೋಷಣೆ ಕೂಗಿದರು ಎಂದು ಮೂಲಗಳು ತಿಳಿಸಿವೆ.

ಇನ್ನು 1991 ರ ಮೇ ತಿಂಗಳಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಾದ ನಂತರ ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ  ವ್ಯಾಪ್ತಿಗೆ ಒಳಪಡಿಸಿ, ಭದ್ರತೆ ನೀಡಲಾಗಿತ್ತು. 2019ರ ನವೆಂಬರ್ 8 ರಂದು ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ರಕ್ಷಣೆಯನ್ನು ತೆಗೆದುಹಾಕಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...