Homeಮುಖಪುಟಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬೆನ್ನಲ್ಲೇ ಇದೀಗ ರಾಜ್ಯ ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರ ಪಟ್ಟಿ:

ಮಲ್ಲಿಕಾರ್ಜುನ ಖರ್ಗೆ , ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ ವೇಣುಗೋಪಾಲ್‌ , ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌,  ಸುರ್ಜೆವಾಲ, ಜೈರಾಮ್‌ ರಮೇಶ್‌, ವೀರಪ್ಪ ಮೊಯ್ಲಿ, ಲಕ್ಷಣ ಸವದಿ, ಬಿವಿ ಶ್ರೀನಿವಾಸ್‌, ಕೆಜೆ ಜಾರ್ಜ್‌, ವಿನಯ್‌ ಕುಮಾರ್‌ ಸೊರಕೆ, ಬಿಕೆ ಹರಿಪ್ರಸಾದ್‌, ಆರ್.ವಿ ದೇಶಪಾಂಡೆ, ಜಿ.ಪರಮೇಶ್ವರ್‌, ಎಂ.ಬಿ ಪಾಟೀಲ್‌, ದಿನೇಶ್‌ ಗುಂಡೂರಾವ್‌, ಕೃಷ್ಣ ಭೈರೇಗೌಡ, ಎಚ್.ಎಂ ರೇವಣ್ಣ, ಪಿಜಿಆರ್ ಸಿಂಧ್ಯಾ, ಬಿ. ಶೋಮಶೇಖರ್‌, ಎಲ್‌. ಹನುಮಂತಯ್ಯ, ಜಿ.ಸಿ ಚಂದ್ರಶೇಖರ್‌, ನಸೀರ್‌ ಹುಸೈನ್‌ ಅಭಿಶೇಕ್‌ ದತ್‌, ರೋಜಿ ಜಾನ್‌, ಮಯೂರ್‌ ಜಯಕುಮಾರ್‌, ಝಮೀರ್‌ ಅಹ್ಮದ್‌ , ಮಧು ಬಂಗಾರಪ್ಪ, ಉಗ್ರಪ್ಪ, ಪಿ.ಟಿ ಪರಮೇಶ್ವರ್‌ ನಾಯಕ್‌, ಸತೀಶ್‌ ಜಾರಕಿಹೊಳಿ, ತನ್ವೀರ್‌ ಸೇಠ್‌, ಪುಷ್ಪಾ ಅಮರ್‌ ನಾಥ್‌, ಉಮಾಶ್ರಿ, ಅಂಬಣ್ಣ ಆರೋಲಿಕರ್ ​ಗೆ ಸ್ಟಾರ್ ​ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ದೇಶದ 543 ಲೋಕಸಭೆ ಸ್ಥಾನಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆದರೆ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಒಂದನೇ ಹಂತದಲ್ಲಿ, ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 26, ಶುಕ್ರವಾರದಂದು ನಡೆಯಲಿದ್ದು, ಎರಡನೇ ಹಂತದ ಚುನಾವಣೆ ಮೇ 7, ಮಂಗಳವಾರ ನಡೆಯಲಿದೆ.

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಏ.4 ಇರಲಿದೆ. ನಾಮಪತ್ರ ಹಿಂಪಡೆಯುವ ಕೊನೆ ದಿನ ಏ.8 ಆಗಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 20ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 22 ಕೊನೆಯ ದಿನವಾಗಿರುತ್ತದೆ. ಜೂನ್‌.4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಇದನ್ನು ಓದಿ: ದೆಹಲಿ: ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ‘ಲೋಕತಂತ್ರ ಬಚಾವೋ’ ರ್‍ಯಾಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...