Homeಮುಖಪುಟಎರಡು ಭರವಸೆಗಳೊಂದಿಗೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಥತೆ

ಎರಡು ಭರವಸೆಗಳೊಂದಿಗೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಥತೆ

- Advertisement -
- Advertisement -

ಲೋಕಸಭೆ ಚುನಾವಣೆಗೆ ಧುಮುಕಲು ಪ್ರಮುಖವಾಗಿ ಎರಡು ಭರವಸೆಗಳೊಂದಿಗೆ ಕಾಂಗ್ರೆಸ್ ಸಿದ್ದತೆ ಮಾಡಿಕೊಳ್ಳುತ್ತಿದೆ. ಪಕ್ಷದ 139ನೇ ಸಂಸ್ಥಾಪನಾ ದಿನದ ಅಂಗವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಗುರುವಾರ ನಡೆದ ಮೆಗಾ ರ್‍ಯಾಲಿಯಲ್ಲಿ ‘ಜಾತಿ ಗಣತಿ ಮತ್ತು ಕನಿಷ್ಠ ಆದಾಯ ಖಾತರಿ’ ಈ ಎರಡು ವಿಷಯಗಳನ್ನು ಕೈ ನಾಯಕರು ತಮ್ಮ ಭಾಷಣಗಳಲ್ಲಿ ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.

ಆರೆಸ್ಸೆಸ್‌ನ ಭದ್ರಕೋಟೆ ನಾಗ್ಪುರದ ಆಜಾದ್ ಮೈದಾನದಲ್ಲಿ ನಡೆದ ಕಾಂಗ್ರೆಸ್‌ನ ‘ಹೈನ್ ತೈಯಾರ್ ಹಮ್’ ರ್‍ಯಾಲಿಯಲ್ಲಿ ದೇಶದ ವಿವಿಧ ಭಾಗಗಳಿಂದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಸೋಲಿನ ಕುರಿತು ಪರಾಮರ್ಶೆ ನಡೆಸಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಪಕ್ಷ ಮರುಚಿಂತನೆ ನಡೆಸಲಿದೆ ಎಂದು ಹೇಳಿದ್ದಾರೆ.

ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್‌ ಜಾತಿ ಗಣತಿಯನ್ನು ಪ್ರಮುಖ ವಿಷಯವಾಗಿ ಮುನ್ನಲೆಗೆ ತಂದಿತ್ತು. ಹಿಂದಿ ಭಾಷಿಕ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಇರುವ ಹಿಂದುಳಿದ ವರ್ಗಗಳ ಮತಗಳನ್ನು ಜಾತಿ ಗಣತಿ ಅಸ್ತ್ರದ ಮೂಲಕ ಸೆಳೆಯುವ ಪ್ರಯತ್ನ ನಡೆಸಿತ್ತು. ಆದರೆ, ಕಾಂಗ್ರೆಸ್ ಲೆಕ್ಕಾಚಾರಗಳು ತಲೆ ಕೆಳಗಾಗಿವೆ. ಹಿಂದಿ ಭಾಷಿಕ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಹಾಗಾಗಿ, ಕಾಂಗ್ರೆಸ್‌ನ ಜಾತಿ ಗಣತಿ ಅಸ್ತ್ರ ಲೋಕಸಭೆ ಚುನಾವಣೆಯಲ್ಲಿ ಸಹಕಾರಿಯಾಗುತ್ತಾ? ಎಂಬ ಅನುಮಾನ ಮೂಡಿದೆ.

ಆದರೆ, ಗುರುವಾರ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತುರ್ತಾಗಿ ಜಾತಿ ಗಣತಿ ನಡೆಸುವುದಾಗಿ ಘೋಷಿಸಿದ್ದಾರೆ. ಒಬಿಸಿ, ಪರಿಶಿಷ್ಟ ಜಾತಿ ಅಥವಾ ಬುಡಕಟ್ಟು ಸಮುದಾಯಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ, ಕಾನೂನು ರೂಪಿಸುವವರಲ್ಲಿ ಈ ಸಮುದಾಯದವರ ಪ್ರಾತಿನಿಧ್ಯ ಬಹಳ ಕಡಿಮೆಯಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೂ ಮುನ್ನ ‘ಜಿತ್ನಿ ಅಬಾದಿ, ಉತ್ನಾ ಹಕ್’ (ಪ್ರಮಾಣಾನುಗುಣ ಮೀಸಲಾತಿ) ಎಂಬ ಘೋಷಣೆಯನ್ನು ರಾಹುಲ್ ಗಾಂಧಿ ಮಾಡಿದ್ದರು. ಇದೇ ವಿಚಾರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಚಾರದ ಪ್ರಮುಖ ಅಂಶವಾಗಲಿದೆ ಎಂದು ವರದಿಗಳು ಹೇಳಿವೆ. ಪಂಚರಾಜ್ಯ ಚುನಾವಣೆಗಳ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲೂ ಜಾತಿಗಣತಿಯನ್ನು ಬಲವಾಗಿ ಬೆಂಬಲಿಸುವ ನಿರ್ಧಾರವನ್ನು ಕಾಂಗ್ರೆಸ್ ಕಾರ್ಯಕಾರಿಣಿ ತೆಗೆದುಕೊಂಡಿತ್ತು. ಈ ವಿಷಯವನ್ನು ಸಿಡಬ್ಲ್ಯುಸಿ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ತಿಳಿಸಿದ್ದರು.

ಗುರುವಾರದ ರ್‍ಯಾಲಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ನ್ಯಾಯ್ ಯೋಜನೆ’ ಅಥವಾ ಬಡವರಿಗೆ ಕನಿಷ್ಠ ಆದಾಯವನ್ನು ಒದಗಿಸುವ ಯೋಜನೆಯನ್ನು ಜಾರಿಗೆ ತರಲು ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನೀಡಿದ್ದ ಪಕ್ಷದ ಚುನಾವಣಾ ಭರವಸೆಯನ್ನು ನೆನಪಿಸಿಕೊಂಡ ಖರ್ಗೆ, ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಬಡ ಕುಟುಂಬಗಳ ಯಜಮಾನಿಗೆ ವಾರ್ಷಿಕವಾಗಿ ಕನಿಷ್ಠ 70,000 ರೂ.ಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಿಜೆಪಿಗೆ ದೊಡ್ಡ ಲಾಭವಾಗಿ ಮಾರ್ಪಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ವಿಚಾರವನ್ನು ಉಲ್ಲೇಖಿಸಿದ ಮಲ್ಲಿಕಾರ್ಜುನ ಖರ್ಗೆ, ದೇವಸ್ಥಾನದ ವಿಚಾರದಲ್ಲಿ ಬಿಜೆಪಿ ನಾಯಕರು ನಾಟಕವಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುವ ಬದಲು, ಸಂಪೂರ್ಣವಾಗಿ ದೇವರ ಭಕ್ತಿಯಲ್ಲಿ ಮುಳುಗಿದ್ದಾರೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಕಾಂಗ್ರೆಸ್‌ನ ಸಿದ್ದಾಂತದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದೆ ಎಂದು ಭಾರತ್ ಜೋಡೋ ಯಾತ್ರೆ ವೇಳೆ ಅವರು ಹೇಳಿದ್ದ ಘೋಷವಾಕ್ಯವನ್ನು ಮತ್ತೊಮ್ಮೆ ಉಲ್ಲೇಖಿಸಿ ವಿಶ್ಲೇಷಿಸಿದ್ದಾರೆ.

ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್ ಬಲವಾಗಿ ನಿಲ್ಲಲಿದೆ ಎಂದು ಈರ್ವರು ನಾಯಕರು ಪುನರುಚ್ಚರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...