Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

- Advertisement -
- Advertisement -

ಅಕ್ಟೋಬರ್ 17 ರಂದು ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಾ ಸ್ಪರ್ಧಿಸುತ್ತಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಇಷ್ಟೆ ಅಲ್ಲದೆ, ಅವರೊಂದಿಗೆ ದಿಗ್ವಿಜಯ ಸಿಂಗ್ ಮತ್ತು ಶಶಿ ತರೂರ್‌ ಕೂಡಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿವೆ.

ಶಶಿ ತರೂರ್ ಮತ್ತು ದಿಗ್ವಿಜಯ್‌ ಸಿಂಗ್ ಕೂಡ ಅರ್ಜಿಗಳ ಕೊನೆಯ ದಿನವಾದ ಇಂದು ತಮ್ಮ ನಾಮಪತ್ರವನ್ನು ಸಲ್ಲಿಸುವ ನಿರೀಕ್ಷೆಯಿದೆ. ಮಧ್ಯಾಹ್ನ 3 ಗಂಟೆ ವರೆಗೆ ಸ್ಪರ್ಧೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವರ್ಷದ ಆರಂಭದಲ್ಲಿ ಪಕ್ಷವು ನಿರ್ಧರಿಸಿದ ‘ಒಬ್ಬ ವ್ಯಕ್ತಿ ಒಂದು ಹುದ್ದೆ’ ನಿಯಮದ ಪ್ರಕಾರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಸ್ಪರ್ಧೆಯಿಂದ ಹೊರಗುಳಿದಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೂ ಇದೇ ನಿಯಮ ಅನ್ವಯಿಸಲಾಗಿದೆ.

ಕಾಂಗ್ರೆಸ್ ನಾಯಕರ ಒಂದು ವಿಭಾಗವು ಕಿರಿಯ ನಾಯಕನನ್ನು ಚುನಾವಣೆಗೆ ಒತ್ತಾಯಿಸಿದ್ದರಿಂದ ನಿನ್ನೆ ರಾತ್ರಿಯವರೆಗೂ ಇನ್ನೊಬ್ಬ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಅವರನ್ನು ಸ್ಪರ್ಧೆಗೆ ಪರಿಗಣಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ನ ಆಂತರಿಕ ಟೀಕಾಕಾರರಾಗಿರುವ ‘ಜಿ-23’ ನಾಯಕರಲ್ಲಿ ಒಬ್ಬರಾದ ಮುಕುಲ್ ವಾಸ್ನಿಕ್ ಕೂಡ ಅಧ್ಯಕ್ಷೀಯ ಚುನಾವಣೆಯ ಭಾಗವಾಗಬಹುದು ಎಂದು ಅವರು ಸೂಚಿಸಿದ್ದಾರೆ.

ನಿನ್ನೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಅಶೋಕ್ ಗೆಹ್ಲೋಟ್ ಅವರು ಸ್ಪರ್ಧೆಯಿಂದ ಹೊರಗುಳಿಯುವುದಾಗಿ ತೀರ್ಮಾನಿಸಿದ್ದಾರೆ. ಇದರ ನಂತರ ಹೊಸ ಹೆಸರುಗಳು ಹೊರಹೊಮ್ಮಿವೆ.

ಇದನ್ನೂ ಓದಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

ರಾಜಸ್ಥಾನ ಸರ್ಕಾರದಲ್ಲಿ ತನ್ನ ನಿಷ್ಠಾವಂತರಿಂದ ನಡೆದ ದಂಗೆಗಾಗಿ ಸೋನಿಯಾ ಗಾಂಧಿಯವರಲ್ಲಿ ತಾನು ಕ್ಷಮೆಯಾಚಿಸಿದ್ದಾಗಿ ಗೆಹ್ಲೋಟ್‌‌ ಅವರು ಹೇಳಿದ್ದಾರೆ. ಅವರ ಸಾಂಪ್ರದಾಯಿಕ ಎದುರಾಳಿ ಸಚಿನ್ ಪೈಲಟ್ ಕೂಡ ಸೋನಿಯಾ ಗಾಂಧಿ ಅವರನ್ನು ನಿನ್ನೆ ಭೇಟಿಯಾಗಿದ್ದಾರೆ. 2020 ರಲ್ಲಿ ತನ್ನ ವಿರುದ್ಧ ಬಂಡಾಯವೆದ್ದಿದ್ದ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿಯಾಗಿ ಸ್ವೀಕರಿಸುವುದಿಲ್ಲ ಎಂದು ಗೆಹ್ಲೋಟ್‌ ನಿಷ್ಠಾವಂತರು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...