Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದು ಬದಲಿಗೆ ತಮ್ಮ ಹಿರಿಯ ಸಹೋದ್ಯೋಗಿ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ತಾನು ಜೀವನದುದ್ದಕ್ಕೂ ಕಾಂಗ್ರೆಸ್‌ಗಾಗಿ ದುಡಿದಿದ್ದು, ಅದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹೊರ ಸರಿಯುವುದರೊಂದಿಗೆ ಕೇರಳ ಸಂಸದ ಶಶಿ ತರೂರ್‌ ಮತ್ತು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜು ಖರ್ಗೆ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಖಾಮುಖಿಯಾಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರಾಗಿದ್ದು, ನನ್ನ ಸೀನಿಯರ್‌ ಆಗಿದ್ದಾರೆ. ನೀವು ಸ್ಪರ್ಧಿಸಲು ಬಯಸುತ್ತೀರಾ ಎಂದು ನಿನ್ನೆಯೇ ಕೇಳಿದ್ದೆ. ಇಲ್ಲ ಎಂದರು. ನಾನು ಇಂದು ಅವರನ್ನು ಮತ್ತೆ ಭೇಟಿಯಾದೆ. ನೀವು ಸ್ಪರ್ಧಿಸುವುದಾದರೆ ನಾನು ಸಂಪೂರ್ಣವಾಗಿ ನಿಮ್ಮೊಂದಿಗಿದ್ದೇನೆ ಎಂದು ತಿಳಿಸಿದ್ದೇನೆ” ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

“ನಾನು ಅವರ ವಿರುದ್ಧ ಸ್ಪರ್ಧಿಸುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ. ಅವರು ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ನಾನು ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುತ್ತೇನೆ” ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

“ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನಾನು ರಾಜಿ ಮಾಡಿಕೊಳ್ಳುವುದಿಲ್ಲ; ಕೋಮು ಸೌಹಾರ್ದವನ್ನು ಹಾಳು ಮಾಡುವವರೊಂದಿಗೆ ನಾನು ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಗಾಂಧಿ ಕುಟುಂಬಕ್ಕೆ ನನ್ನ ಬದ್ಧತೆಯನ್ನು ನಾನು ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದ ನಂತರ ದಿಗ್ವಿಜಯ್ ಸಿಂಗ್ ಅವರು ಪಕ್ಷದ ಉನ್ನತ ಹುದ್ದೆಗೆ ಸ್ಪರ್ಧಿಸುವ ಒಲವನ್ನು ವ್ಯಕ್ತಪಡಿಸಿದ್ದರು.

ಶುಕ್ರವಾರ ತಿರುವನಂತಪುರಂ ಸಂಸದ ಶಶಿ ತರೂರ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ತರೂರ್ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. “21 ನೇ ಶತಮಾನಕ್ಕೆ ಭಾರತದ ಸೇತುವೆಯನ್ನು ನಿರ್ಮಿಸಿದ ವ್ಯಕ್ತಿಗೆ ಇಂದು ಬೆಳಿಗ್ಗೆ ಗೌರವ ಸಲ್ಲಿಸಿದೆ” ಎಂದು ತರೂರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

ರಾಜ್ಯಸಭಾದ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಕೂಡ ಮಧ್ಯಾಹ್ನದ ಸುಮಾರಿಗೆ ಪಕ್ಷದ ಉನ್ನತ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಖರ್ಗೆ ಅವರನ್ನು ಕಣಕ್ಕಿಳಿಸಲು ಪಕ್ಷದ ನಾಯಕಿ ಸೋನಿಯಾ ಗಾಂಧಿ ಉತ್ಸುಕರಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಯ ನೈತಿಕ ಹೊಣೆಗಾರಿಕೆಯನ್ನು ಒಪ್ಪಿಕೊಂಡ ನಂತರ ರಾಹುಲ್ ಗಾಂಧಿ ಪಕ್ಷ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಅವರ ಹೆಸರು ಕೇಳಿಬರುತ್ತಲೆ ಇತ್ತು.

ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...