Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಇತರ ಪಕ್ಷಗಳಿಗೂ ಮಾದರಿಯಾಗಲಿದೆ: ಮಧುಸೂದನ್ ಮಿಸ್ತ್ರಿ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಇತರ ಪಕ್ಷಗಳಿಗೂ ಮಾದರಿಯಾಗಲಿದೆ: ಮಧುಸೂದನ್ ಮಿಸ್ತ್ರಿ

- Advertisement -
- Advertisement -

ಇಂದು ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಪಾರದರ್ಶಕವಾಗಿ ನಡೆದಿದೆ. ಶೇ.96 ರಷ್ಟು ಮತ ಚಲಾವಣೆಯಾಗಿದ್ದು, ಇದು ಇತರ ಪಕ್ಷಗಳಿಗೂ ಮಾದರಿಯಾಗಲಿದೆ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ.

ದೇಶದ್ಯಾಂತ 9,500 ಕಾಂಗ್ರೆಸ್ ಪದಾಧಿಕಾರಿಗಳು ಮತ ಚಲಾಯಿಸಿದ್ದಾರೆ. ಅತಿ ಹೆಚ್ಚಿನ ಮತದಾನವಾಗಿದೆ. ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸೋನಿಯಾ ಗಾಂಧಿ ಸೇರಿದಂತೆ 87 ಜನರು ಮತ ಹಾಕಿದ್ದಾರೆ. ದೇಶದ್ಯಾಂತ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ಮತದಾನ ನಡೆದಿದೆ. ಎಲ್ಲಾ ಮತಪೆಟ್ಟಿಗೆಗಳನ್ನು ಸುರಕ್ಷಿತವಾಗಿಡಲಾಗಿದೆ. ಅಕ್ಟೋಬರ್ 19ರಂದು ಫಲಿತಾಂಶ ಘೋಷಣೆಯಾಗಲಿದೆ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್‌ರವರು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದ್ದರು. ಮತದಾನದ ಬಳಿಕ ವಿಡಿಯೋ ಸಂದೇಶ ನೀಡಿರುವ ಶಶಿ ತರೂರ್, “ಇಂದು ಚುನಾವಣೆಯಲ್ಲಿ ಭಾಗವಹಿಸಲು, ಪ್ರಚಾರ ಮಾಡಲು, ಕನಸು ನನಸು ಮಾಡಲು ಮತ್ತು ಮತ ಚಲಾಯಿಸಲು ಧೈರ್ಯ ತುಂಬಿದ ದೇಶಾದ್ಯಂತದ ಕಾಂಗ್ರೆಸ್ ಪ್ರತಿನಿಧಿಗಳು, ಸಹೋದ್ಯೋಗಿಗಳು, ಕಾರ್ಯಕರ್ತರಿಗೆ ಧನ್ಯವಾದಗಳು. ಈ ಚುನಾವಣೆಯ ಫಲಿತಾಂಶ ಏನೇ ಇರಲಿ, ಅದು ನಿಮ್ಮ ವಿಜಯವಾಗಿದೆ! ಜೈ ಹಿಂದ್, ಜೈ ಕಾಂಗ್ರೆಸ್!” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಈ ಕ್ಷಣಕ್ಕಾಗಿ ಬಹುದಿನದಿಂದ ಕಾಯುತ್ತಿದ್ದೆ – ಮತ ಚಲಾಯಿಸಿದ ನಂತರ ಸೋನಿಯಾ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...