Homeಮುಖಪುಟರಾಜಸ್ಥಾನದಲ್ಲಿ ಮತ್ತೆ ಗೆದ್ದರೆ, ಮನೆ ಯಜಮಾನಿಗೆ ವರ್ಷಕ್ಕೆ 10 ಸಾವಿರ ರೂ.: ಕಾಂಗ್ರೆಸ್ ಭರವಸೆ

ರಾಜಸ್ಥಾನದಲ್ಲಿ ಮತ್ತೆ ಗೆದ್ದರೆ, ಮನೆ ಯಜಮಾನಿಗೆ ವರ್ಷಕ್ಕೆ 10 ಸಾವಿರ ರೂ.: ಕಾಂಗ್ರೆಸ್ ಭರವಸೆ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರದ “ಪೊಳ್ಳು” ಕಲ್ಯಾಣ ಯೋಜನೆಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ವಾಗ್ದಾಳಿ ನಡೆಸಿದರು.

ಪ್ರಿಯಾಂಕಾ ಗಾಂಧಿ ಅವರ ಸಾರ್ವಜನಿಕ ರ್ಯಾಲಿಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪುನರಾಯ್ಕೆಯಾದರೆ ಎರಡು ”ಖಾತರಿ” ಭರವಸೆ ನೀಡಿದರು. – ₹ 500 ರಿಂದ 1.05 ಕೋಟಿ ಕುಟುಂಬಗಳಿಗೆ ಅಡುಗೆ ಅನಿಲ ಸಿಲಿಂಡರ್ ಮತ್ತು ಮನೆ ಯಜಮಾನಿಗೆ ವಾರ್ಷಿಕ ₹ 10,000 ಗೌರವಧನ ನೀಡುವುದಾಗಿ ಘೋಷಿಸಿದರು.

ಜುಂಜುನು ಜಿಲ್ಲೆಯ ಅರ್ದಾವತಾ ಗ್ರಾಮದಲ್ಲಿ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಒಂದೇ ವಾರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಇದು ಎರಡನೇ ರ್ಯಾಲಿಯಾಗಿದೆ.

”ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ, ಆದರೆ ಅದನ್ನು ಜಾರಿಗೆ ತರಲು 10 ವರ್ಷಗಳು ಬೇಕಾಗುತ್ತದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

”ಪೂರ್ವ ರಾಜಸ್ಥಾನ ಕಾಲುವೆ ಯೋಜನೆ (ERCP) ಘೋಷಿಸಿ 10 ವರ್ಷಗಳು ಕಳೆದಿವೆ. ಇದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಸೌಲಭ್ಯಗಳನ್ನು ಹೆಚ್ಚಿಸಲು ಮತ್ತು ಪೂರ್ವ ರಾಜಸ್ಥಾನದ 13 ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ” ಆದರೆ ಕೇಂದ್ರ ಬಿಜೆಪಿ ಯೋಜನೆ ಜಾರಿ ಮಾಡುತ್ತಿಲ್ಲ” ಎಂದು ಹೇಳಿದರು.

”ಅವರ (ಕೇಂದ್ರದ) ಯೋಜನೆಗಳು ಪೊಳ್ಳಾಗಿವೆ, ಆದರೆ ಕಾಂಗ್ರೆಸ್ ಸರ್ಕಾರದ (ರಾಜಸ್ಥಾನದಲ್ಲಿ) ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ” ಎಂದು ಅವರು ಹೇಳಿದರು.

ಬಿಜೆಪಿ ಚುನಾವಣಾ ಸಮಯದಲ್ಲಿ ಧರ್ಮ ಮತ್ತು ಜಾತಿಗಳ ಬಗ್ಗೆ ಮಾತನಾಡಿದರೆ, ಮತಗಳು ಸಿಗುತ್ತವೆ ಎಂದು ಭಾವಿಸಿಕೊಂಡಿದೆ. ಕೇಂದ್ರವು ಜನರನ್ನು ನಿಗ್ರಹಿಸಲು ಪ್ರಯತ್ನಿಸುತ್ತದೆ. ಅದು ಅಧಿಕಾರದಲ್ಲಿರಲು ಮತ್ತು ತನ್ನ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಮಾತ್ರ ಬಯಸುತ್ತದೆ” ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

”ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಆಯ್ದ ಕೈಗಾರಿಕೋದ್ಯಮಿಗಳಿಗಾಗಿ ಇದೆ. ಈ ಸರ್ಕಾರದಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸುತ್ತಿಲ್ಲ” ಎಂದು ಅವರು ಆರೋಪಿಸಿದರು.

”ನಿಮಗೆ ಯಾವ ರೀತಿಯ ನಾಯಕರು ಮತ್ತು ಸರ್ಕಾರಗಳು ಬೇಕಾಗುತ್ತವೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು..” ಎಂದರು.

”ಇನ್ನಾದರೂ ಜನರು ಎಚ್ಚೆತ್ತುಕೊಳ್ಳಿ, ಇಲ್ಲದಿದ್ದರೆ ಈ ವ್ಯವಸ್ಥೆಗೆ ಕಡಿವಾಣ ಬೀಳುವುದಿಲ್ಲ. ನಾಯಕನು ಕೆಲಸ ಮಾಡಬೇಕು ಮತ್ತು ನಿರ್ವಹಿಸಬೇಕು. ನರೇಂದ್ರ ಮೋದಿ ಸರ್ಕಾರ ಮತ್ತು ಬಿಜೆಪಿಯ ಘೋಷಣೆಗಳು ಪೊಳ್ಳು ಮತ್ತು ಖಾಲಿಯಾಗಿದೆ” ಎಂದು ಅವರು ಹೇಳಿದರು.

ಗೆಹ್ಲೋಟ್ ಅವರು “ಗ್ರಾಹ್ ಲಕ್ಷ್ಮಿ ಗ್ಯಾರಂಟಿ” ಯೋಜನೆಯಡಿಯಲ್ಲಿ, ಕುಟುಂಬದ ಮಹಿಳೆಗೆ ವರ್ಷಕ್ಕೆ ₹ 10,000 ಕಂತುಗಳಲ್ಲಿ ನೀಡಲಾಗುವುದು ಎಂದು ಘೋಷಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದರೆ 1.05 ಕೋಟಿ ಕುಟುಂಬಗಳಿಗೆ ₹ 500ಕ್ಕೆ ಎಲ್‌ಪಿಜಿ ಸಿಲಿಂಡರ್‌ ನೀಡಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ BJP ನಾಯಕನ ಮೇಲೆ BRS ಶಾಸಕನಿಂದ ಹಲ್ಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...