Homeಮುಖಪುಟಛತ್ತೀಸ್‌ಗಢ: ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 15,000ರೂ. ಘೋಷಿಸಿದ ಕಾಂಗ್ರೆಸ್

ಛತ್ತೀಸ್‌ಗಢ: ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 15,000ರೂ. ಘೋಷಿಸಿದ ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಗೃಹಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯ ಖಾತೆಗೆ ವರ್ಷಕ್ಕೆ 15,000 ರೂ.ಗಳನ್ನು ನೀಡುವುದಾಗಿ ಘೋಷಿಸಿದೆ.

ಈ ಕುರಿತು ಘೋಷಣೆಯನ್ನು ಮಾಡಿದ  ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ದೀಪಾವಳಿಯ ಶುಭ ಸಂದರ್ಭದಲ್ಲಿ ತಾಯಿ ಲಕ್ಷ್ಮಿ ದೇವಿಯ ಕೃಪೆ ಮತ್ತು ಛತ್ತೀಸ್‌ಗಢ ಮಹಾ ತಾಯಿಯಂದಿರ ಆಶೀರ್ವಾದದೊಂದಿಗೆ ರಾಜ್ಯದ ಸ್ತ್ರೀಗಳ ಬಲವರ್ಧನೆಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ರಾಜ್ಯದ ಮಹಿಳೆಯರಿಗೆ ಛತ್ತೀಸ್‌ಗಢ ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಅವರ ಖಾತೆಗಳಿಗೆ ನೇರವಾಗಿ ವರ್ಷಕ್ಕೆ 15,000ರೂ.ಗಳನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಸಾಮಾಜಿಕ ವೆಲ್ಪೇರ್‌ ಸ್ಕೀಂನ ಭಾಗವಾಗಿ ಛತ್ತೀಸ್‌ಗಢದ ಪ್ರತಿ ಮಹಿಳೆಗೆ ವರ್ಷಕ್ಕೆ 15,000ರೂಗಳನ್ನು ಛತ್ತೀಸ್‌ಗಢ ಗೃಹಲಕ್ಷ್ಮಿ ಯೋಜನೆಯ ಭಾಗವಾಗಿ ನೀಡಲಾಗುವುದು. ದೀಪಾವಳಿಯ ಸಂದರ್ಭದಲ್ಲಿ ನಾನು ಇದನ್ನು ಘೋಷಿಸಲು ಬಯಸುತ್ತೇನೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮತ್ತೆ ಸರಕಾರವನ್ನು ರಚಿಸಿದರೆ ಎಲ್ಲಾ ತಾಯಿಯಂದಿರು ಮತ್ತು ಸಹೋದರಿಯರಿಗೆ 15,000ರೂ. ವರ್ಷಕ್ಕೆ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಛತ್ತೀಸ್‌ಗಢದ ಸಿಎಂ ಭೂಪೇಶ್ ಬಘೇಲ್, ದೀಪಾವಳಿಯ ಸಂದರ್ಭದಲ್ಲಿ ರಾಜ್ಯದಲ್ಲಿ ಮಹಿಳೆಯರನ್ನು ಶಕ್ತಿಗೊಳಿಸಲು ಮಹತ್ವದ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ನ.5ರಂದು ಕಾಂಗ್ರೆಸ್‌ ಛತ್ತೀಸ್‌ಗಢ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಜಾತಿಗಣತಿ, ಕೃಷಿ ಸಾಲ ಮನ್ನಾ, ಭತ್ತದ ಖರೀದಿ ಬೆಲೆಯಲ್ಲಿ ಹೆಚ್ಚಳ, 200 ಯುನಿಟ್‌ವರೆಗೆ ಉಚಿತ ವಿದ್ಯುತ್‌, 400ರವರೆಗಿನ ವಿದ್ಯುತ್‌ ಬಿಲ್‌ಗಳಲ್ಲಿ 50% ರಿಯಾಯಿತಿ, ಗ್ಯಾಸ್‌ ಸಿಲಿಂಡರ್‌ಗಳಲ್ಲಿ 500ರೂ. ಸಬ್ಸಿಡಿ ಸೇರಿ ಹಲವು ಘೋಷಣೆಗಳನ್ನು ಮಾಡಿದೆ.

90 ವಿಧಾನಸಭಾ ಕ್ಷೇತ್ರಗಳಿರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತದ ಚುನಾವಣೆ ನ.7ರಂದು ನಡೆದಿದೆ. ಎರಡನೆ ಹಂತದ ಚುನಾವಣೆ ನ.17ರಂದು ನಡೆಯಲಿದೆ. ಡಿ.3ರಂದು ಇತರ ರಾಜ್ಯಗಳ ಜೊತೆ ಚುನಾವಣಾ ಫಲಿತಾಂಶ ಹೊರ ಬರಲಿದೆ.

ಇನ್ನು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಶುಕ್ರವಾರ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ಕಾಂಗ್ರೆಸ್ ‘ನಕಲು’ ಎಂದು ಕರೆದಿದೆ. ಕಾಂಗ್ರೆಸ್‌ನ ಚುನಾವಣಾ ಗ್ಯಾರೆಂಟಿಗಳನ್ನು ‘ಬಿಟ್ಟಿ’ ಎಂದು ಟೀಕಿಸುವವರು ಈಗ ಚುನಾವಣೆಯಲ್ಲಿ ಗೆಲ್ಲಲು ಗ್ಯಾರೆಂಟಿಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನು ಕಾಂಗ್ರೆಸ್‌ ಗ್ಯಾರೆಂಟಿ ಘೋಷಣೆ ಬೆನ್ನಲ್ಲೇ ಬಿಜೆಪಿಯು ಛತ್ತೀಸ್‌ಗಢದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದೆ. 2 ವರ್ಷಗಳಲ್ಲಿ ಛತ್ತೀಸ್‌ಗಢದಲ್ಲಿ ಖಾಲಿ ಇರುವ 1 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದು. ಬಡ ಕುಟುಂಬದ ಮಹಿಳೆಯರಿಗೆ ತಲಾ  500ರ ದರದಲ್ಲಿ ಅಡುಗೆ ಅನಿಲ ಸಿಲಿಂಡರ್ ನೀಡುವುದು, ಘರ್ ಘರ್ ನಿರ್ಮಲ್ ಜಲ ಅಭಿಯಾನ, ಭೂರಹಿತ ಕೃಷಿ ಕಾರ್ಮಿಕರಿಗೆ ವರ್ಷಕ್ಕೆ 10,000ರೂ. ಸೇರಿ ಹಲವು ಭರವಸೆಗಳನ್ನು ಘೋಷಿಸಿದೆ.

ಇದನ್ನು ಓದಿ:ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...