Homeಕರ್ನಾಟಕಕೇಂದ್ರ ಸರಕಾರದ ವಿರುದ್ಧ 'ಖಾಲಿ ಚೊಂಬು' ಹಿಡಿದು ಪ್ರತಿಭಟನೆ

ಕೇಂದ್ರ ಸರಕಾರದ ವಿರುದ್ಧ ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆ

- Advertisement -
- Advertisement -

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕರು ಬೆಂಗಳೂರು ನಗರದ ಮೇಕ್ರಿ ಸರ್ಕಲ್ ಬಳಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದು, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿದ್ದಾರೆ.

ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಿಜ್ವಾನ್‌ ಹರ್ಷದ್ ಸೇರಿ ಹಲವು ಕಾಂಗ್ರೆಸ್‌ ಮುಖಂಡರು ಭಾಗಿಯಾಗಿದ್ದಾರೆ. ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮನದ ಹಿನ್ನೆಲೆ ಕಾಂಗ್ರೆಸ್ ಚೊಂಬಿನ ಪ್ರತಿಭಟನೆ ನಡೆಸಿದೆ. ಇದಲ್ಲದೆ ಉತ್ತರ ಕೊಡಿ ಮೋದಿ, ಬಿಜೆಪಿ ಬೊಂಬು ಸರ್ಕಾರ ಎಂದು ಅಭಿಯಾನ ಆರಂಭಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಕಿಡಿಕಾರಿದ್ದು, ಮೋದಿಯವರ ಅಚ್ಛೇದಿನ್ ಹೊರೆಯಾಗಿದೆ. ದೇಶದ ಪ್ರಗತಿಗಾಗಿ ನೀಡಿರುವ ಕೊಡುಗೆ ಏನು? ಬಿಜೆಪಿ ಸೋಲಿಸಿ ಎಂದು ಸುರ್ಜೇವಾಲ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಬರ ಪರಿಹಾರ ನೀಡಲು ರಾಜ್ಯ ಸರ್ಕಾರ ಹಲವಾರು ಬಾರಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿತ್ತು, ಆದರೆ ಕರ್ನಾಟಕ ವಿರೋಧಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನೀಡಿದ್ದು ಖಾಲಿ ಚೊಂಬು ಮಾತ್ರ, ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಬಿಜೆಪಿ ಸರ್ಕಾರಕ್ಕೆ ಮರಳಿ ಅದೇ ಖಾಲಿ ಚೊಂಬನ್ನೇ ನೀಡುವುದು ನ್ಯಾಯಯುತ ಪರಿಹಾರ ಎಂದು ಬರೆದುಕೊಂಡಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು, ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ಚೊಂಬು, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು, ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಹಾಕಿದ್ದು ಮಾತ್ರ ಚೊಂಬು, ನಾವು ಕಟ್ಟುವ ಪ್ರತಿ 100ರೂ. ತೆರಿಗೆಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು, ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ರಾಜ್ಯಕ್ಕೆ ನೀಡಿದ್ದು ಚೊಂಬು ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

 

 

ಇದನ್ನು ಓದಿ: ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾವೇರಿ| ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಪ್ರಕರಣ: ಆರೋಪಿಗಳ ಬಂಧನ

0
ಹಾವೇರಿ ಜಿಲ್ಲೆಯಲ್ಲಿ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆದಿದೆ. ಮಹಿಳೆಯ...