Homeಎಕಾನಮಿಆರ್ಥಿಕ ಕುಸಿತ: ಮೋದಿ ಸರ್ಕಾರದ ವಿರುದ್ಧದ 10 ದಿನಗಳ ಮಹಾಪ್ರತಿಭಟನೆಗೆ ಪ್ರತಿಪಕ್ಷಗಳ ಬೆಂಬಲಕೋರಿದ ಕಾಂಗ್ರೆಸ್

ಆರ್ಥಿಕ ಕುಸಿತ: ಮೋದಿ ಸರ್ಕಾರದ ವಿರುದ್ಧದ 10 ದಿನಗಳ ಮಹಾಪ್ರತಿಭಟನೆಗೆ ಪ್ರತಿಪಕ್ಷಗಳ ಬೆಂಬಲಕೋರಿದ ಕಾಂಗ್ರೆಸ್

- Advertisement -
- Advertisement -

“ಆರ್ಥಿಕ ಕುಸಿತ, ಕೃಷಿ ಸಂಕಟ, ನಿರುದ್ಯೋಗ ಮತ್ತು ಉದ್ದೇಶಿತ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದ”ಕ್ಕೆ ಕಾರಣವಾಗಿರುವ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ 10 ದಿನಗಳ ಕಾಲದ ಮಹಾಪ್ರತಿಭಟನೆ ನಡೆಸಲು ಉದ್ದೇಶಿಸಿದೆ. ಈ ಹೋರಾಟಕ್ಕೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಬೇಕೆಂದು ಕೋರಿ ನವೆಂಬರ್‌ 04ರಂದು ಪ್ರತಿಪಕ್ಷಗಳೊಂದಿಗೆ ಕಾಂಗ್ರೆಸ್‌ ಸಭೆ ನಡೆಸಲಿದೆ.

10 ದಿನಗಳ ಕಾಲ ನಿರಂತರವಾಗಿ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದ್ದು ಇದಕ್ಕೆ ಬೆಂಬಲ, ಒಗ್ಗಟ್ಟು ಮತ್ತು ಸಲಹೆ-ಸೂಚನೆ ಪಡೆಯಲು ನವೆಂಬರ್‌ 04 ಸಭೆಗೆ ವಿಪಕ್ಷಗಳಿಗೆ ಆಹ್ವಾನ ನೀಡಿದೆ.

ಆರ್ಥಿಕ ಕುಸಿತದಿಂದ ಜನತೆ ಕಂಗೆಟ್ಟಿದ್ದಾರೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಗಳಲ್ಲಿ ಈ ವಿಷಯವು ಕೆಲವು ಕ್ಷೇತ್ರಗಳಲ್ಲಿ ಪರಿಣಾಮ ಬೀರಿದೆ. ಇಂತಹ ಸಂದರ್ಭದಲ್ಲಿ ಆರ್‌ಸಿಇಪಿಯಂತಹ ಅಪಾಯಕಾರಿ ಒಪ್ಪಂದಕ್ಕೆ ಸಹಿ ಹಾಕುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಈ ಕುರಿತು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಲು ಪ್ರತಿಭಟನೆ ಆಯೋಜಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಥೈಲ್ಯಾಂಡ್‌ಗೆ ಆಗಮಿಸಿದ ದಿನವೇ ಆರ್ಥಿಕ ಕುಸಿತದ ವಿರೋಧಿಸಿ ಕಾಂಗ್ರೆಸ್ ಏಕತೆಯ ನಡೆ ಆಯೋಜಿಸುತ್ತಿದ್ದು, ಒಪ್ಪಂದಕ್ಕೆ ಸಹಿ ಹಾಕದಂತೆ ಒತ್ತಡ ತರಲು ಮುಂದಾಗಿದೆ.

ಆರ್‌ಸಿಇಪಿ ಒಪ್ಪಂದವು ನಮ್ಮ ಆರ್ಥಿಕತೆಗೆ ಹೊಸ ಬೆದರಿಕೆಯಾಗಿದೆ ಹಾಗಾಗಿ ಕಾಂಗ್ರೆಸ್ ಅದನ್ನು ವಿರೋಧಿಸುತ್ತದೆ. “ಆರ್‌ಸಿಇಪಿ 16 ದೇಶಗಳ ನಡುವಿನ ಮುಕ್ತ-ವ್ಯಾಪಾರದ ಪ್ರಯತ್ನವಾಗಿದೆ. ಈ ಒಪ್ಪಂದವನ್ನು ದೇಶೀಯ ಉದ್ಯಮ, ರೈತ ಗುಂಪುಗಳು, ನಾಗರಿಕ ಸಮಾಜ ಸಂಸ್ಥೆಗಳು ಮತ್ತು ವಿರೋಧ ಪಕ್ಷಗಳು ಬಲವಾಗಿ ವಿರೋಧಿಸುತ್ತಿವೆ. ಆರ್‌ಸಿಇಪಿ ಶಸ್ತ್ರಸಜ್ಜಿತವಾದ ಚೀನಾವು ಅಗ್ಗದ ಸರಕುಗಳನ್ನು ಭಾರತಕ್ಕೆ ತುರುಕುತ್ತದೆ ಎಂದು ಪಕ್ಷದ ವಕ್ತಾರ ಪ್ರೊ. ಗೌರವ್ ವಲ್ಲಭ್ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತಾವಿತ ಆರ್‌ಸಿಇಪಿ ಒಪ್ಪಂದದ ವಿರುದ್ಧ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಕೇಂದ್ರ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಅವರ ಮನೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಒಪ್ಪಂದವು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಂತಹ ದೇಶಗಳಿಂದ ಅಗ್ಗದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ ಅದು ‘ದೇಶದ 50 ದಶಲಕ್ಷಕ್ಕೂ ಹೆಚ್ಚು ದೇಶೀಯ ಹಾಲು ಉತ್ಪಾದಕರ ಜೀವನೋಪಾಯವನ್ನು ಕಿತ್ತುಕೊಳ್ಳಲ್ಲಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...