Homeಕರ್ನಾಟಕವಿಧಾನಸಭಾ ಅಧಿವೇಶನ: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ’ಎತ್ತಿನಗಾಡಿ ಚಲೋ’ ಪ್ರತಿಭಟನೆ

ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ’ಎತ್ತಿನಗಾಡಿ ಚಲೋ’ ಪ್ರತಿಭಟನೆ

- Advertisement -
- Advertisement -

ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ಇಂಧನ ಉತ್ಪನ್ನಗಳ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧಕ್ಕೆ ಇಂದು ಎತ್ತಿನಗಾಡಿಯಲ್ಲಿ ತೆರಳಿದ್ದಾರೆ. ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಕಾಂಗ್ರೆಸ್ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ನಡೆಸಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಮ್ಮ ನಿವಾಸಗಳಿಂದ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ತೆರಳುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸ್ವತಃ ಎತ್ತಿನಗಾಡಿಗಳನ್ನ ಚಲಾಯಿಸುವ ಮೂಲಕ ಬಿಜೆಪಿ ಸರ್ಕಾರದ ನೀತಿಗಳನ್ನು ಖಂಡಿಸಿದ್ದಾರೆ.

 ಇದನ್ನೂ ಓದಿ: ಸೆ.13 ರಿಂದ ವಿಧಾನ ಮಂಡಲ ಅಧಿವೇಶನ: ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಸಿದ್ದ

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಬೆಲೆ ಏರಿಕೆಯಿಂದ ಜನರು ಬದುಕಲು ಪರದಾಡುತ್ತಿದ್ದರೂ ಜನರ ನೋವಿಗೆ ಸ್ಪಂದಿಸದೆ ಹೊಣೆಗೇಡಿಗಳಂತೆ ಸಂವೇದನಾ ಶೂನ್ಯರಾಗಿ ಬಾಲಿಶ ಮಾತುಗಳನ್ನಾಡುತ್ತಿದ್ದಾರೆ ಬಿಜೆಪಿ ನಾಯಕರು. ಬೆಲೆ ಇಳಿಸಿ ಜನರ ನೆರವಿಗೆ ನಿಲ್ಲುವ ಬಗ್ಗೆ ಯಾವೊಬ್ಬ ಬಿಜೆಪಿ ನಾಯಕರೂ ತುಟಿ ಬಿಚ್ಚದಿರುವುದು ಅವರ ಜನ ವಿರೋಧಿ ಮನಸ್ಥಿತಿಗೆ ಸಾಕ್ಷಿ” ಎಂದಿದೆ. ಜೊತೆಗೆ #ಪಿಕ್‌ಪಾಕೆಟ್‌ಸರ್ಕಾರ ಎಂಬ ಹ್ಯಾಶ್‌ಟ್ಯಾಗ್ ಬಳಸಿದೆ.

 

ಕರ್ನಾಟಕ ವಿಧಾನ ಮಂಡಲ ಅಧಿವೇಶನ  ಇಂದಿನಿಂದ (ಸೆ. 13) ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಅಧಿವೇಶನ ಇದಾಗಿದೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ಲಸಿಕೆ ಕೊರತೆ ಸಹಿತ ಆಡಳಿತ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಕಾಂಗ್ರೆಸ್ ಈ ಮೊದಲೆ ಸಿದ್ಧವಾಗಿತ್ತು.

ಇಂದಿನ ಎತ್ತಿನಗಾಡಿ ಚಲೋ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ನೂರಾರು ಮಂದಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಸರ್ಕಾರಿ ದರೋಡೆಗೆ ತೆರಿಗೆ ಎಂದು ಹೆಸರು: ಬೆಲೆ ಏರಿಕೆಗೆ ಕಾಂಗ್ರೆಸ್‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...