Homeಮುಖಪುಟಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ - ಸಿದ್ದರಾಮಯ್ಯ

ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ – ಸಿದ್ದರಾಮಯ್ಯ

ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದ ರೈತರಿಗಷ್ಟೇ ಅಲ್ಲ ಗ್ರಾಹಕರಿಗೂ ಭವಿಷ್ಯದಲ್ಲಿ ದೊಡ್ಡ ನಷ್ಟ ಕಾದಿದೆ. ಖಾಸಗಿ ಕಂಪನಿಗಳು ರೈತರಿಂದ ಕಡಿಮೆ ಬೆಲೆಗೆ ಕೃಷಿ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚು ಬೆಲೆಗೆ ಮಾರಿ ಜನರ ಸುಲಿಗೆಗೆ ಇಳಿಯಲಿವೆ.

- Advertisement -
- Advertisement -

ರಾಜ್ಯ ಸರ್ಕಾರ ನಿಜವಾಗಿ ರೈತರು, ಕಾರ್ಮಿಕರು, ಬಡವರ ಪರವಾಗಿದ್ದರೆ ಎಪಿಎಂಸಿ ಕಾಯಿದೆ, ಭೂ ಸುಧಾರಣಾ ಕಾಯಿದೆ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರುವ ತಪ್ಪನ್ನು ಮಾಡುತ್ತಲೇ ಇರಲಿಲ್ಲ. ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ “ಢೋಂಗಿ ರೈತನಾಯಕ” ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್‌ ಹೋರಾಟ ಬೆಂಬಲಿಸಿ ಪಕ್ಷದ ವತಿಯಿಂದ ಬೆಂಗಳೂರಿನ ಕಾಂಗ್ರೆಸ್ ಭವನದ ಆವರಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದ ರೈತರಿಗಷ್ಟೇ ಅಲ್ಲ ಗ್ರಾಹಕರಿಗೂ ಭವಿಷ್ಯದಲ್ಲಿ ದೊಡ್ಡ ನಷ್ಟ ಕಾದಿದೆ. ಖಾಸಗಿ ಕಂಪನಿಗಳು ರೈತರಿಂದ ಕಡಿಮೆ ಬೆಲೆಗೆ ಕೃಷಿ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚು ಬೆಲೆಗೆ ಮಾರಿ ಜನರ ಸುಲಿಗೆಗೆ ಇಳಿಯಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಉಳುವವನನ್ನು ಭೂಮಿಯ ಒಡೆಯನಾಗಿಸಿದ್ದು ದೇವರಾಜ ಅರಸು ಅವರ ನಾಯಕತ್ವದ ಕಾಂಗ್ರೆಸ್ ಸರ್ಕಾರ. ಈಗ ಬಡವರ ಭೂಮಿಯನ್ನು ಉಳ್ಳವರ ಪಾಲು ಮಾಡಲು ಹೊರಟಿರುವುದು ಬಿಜೆಪಿ ಸರ್ಕಾರ. ಹಾಗಾದರೆ ನಿಜವಾಗಿ ಯಾರು ರೈತರ ಪರ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಭೂ ಸುಧಾರಣಾ ಕಾಯಿದೆ ತಿದ್ದುಪಡಿಯಿಂದ ಕೃಷಿಕನಲ್ಲದವನು ಕೃಷಿ ಭೂಮಿ ಖರೀದಿಸುವಂತಿಲ್ಲ ಎಂಬ ನಿಯಮ ಹೋಗಿ, ಧನಿಕರು ಕೂಡ ಕೃಷಿ ಭೂಮಿ ಖರೀದಿ ಮಾಡಲಿದ್ದಾರೆ. ನಂತರ ಆ ಭೂಮಿಯಲ್ಲಿ ಫಾರ್ಮ್‌ಹೌಸ್‌ಗಳು, ಕಾರ್ಖಾನೆಗಳು ತಲೆಯೆತ್ತಲಿವೆ. ಅಲ್ಲಿಗೆ ಕೃಷಿ ಕ್ಷೇತ್ರ ಸರ್ವನಾಶವಾಗಲಿದೆ. ದೇಶದ ಒಟ್ಟು ರೈತರಲ್ಲಿ ಸಣ್ಣ ಹಿಡುವಳಿದಾರರ ಪ್ರಮಾಣ ಶೇ.86 ಇದೆ. ಈ ರೈತರೆಲ್ಲಾ ಧನಿಕರಿಗೆ ತಮ್ಮ ಭೂಮಿ ಮಾರಿ, ದುಡಿಮೆಗಾಗಿ ಪಟ್ಟಣ ಸೇರುತ್ತಾರೆ. ಕೃಷಿ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲದ ಅಮಾಯಕ ಮಂದಿ ನಗರಗಳಲ್ಲಿ ಕೂಲಿ ಮಾಡಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಈ ಕಾಯಿದೆಗಳ ಜಾರಿ ಹಿಂದೆ ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಯಿದೆ. ಆತ್ಮಸಾಕ್ಷಿ ಇಲ್ಲದ ಯಡಿಯೂರಪ್ಪನವರು ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ನಾಡನ್ನು ಗುಲಾಮಗಿರಿಗೆ ತಳ್ಳಲು ಹೊರಟಿದ್ದಾರೆ. ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಸಿದ್ದು ಕಿಡಿಕಾರಿದ್ದಾರೆ.

ಧರಣಿಯಲ್ಲಿ ಕರ್ನಾಟಕದ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಅಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ರಾಜ್ಯಾದ್ಯಂತ ಸಿಡಿದೆದ್ದ ರೈತರು: ಕರ್ನಾಟಕ ಬಂದ್ ಯಶಸ್ವಿ. ಹಲವು ಜಿಲ್ಲೆ ತಾಲ್ಲೂಕುಗಳಲ್ಲಿ ನಡೆದ ಹೋರಾಟದ ಫೋಟೊ ಗ್ಯಾಲರಿ ಇಲ್ಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...