Homeಮುಖಪುಟಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹಿಸಿ ರಾಷ್ಟ್ರವ್ಯಾಪಿ LIC, SBI ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹಿಸಿ ರಾಷ್ಟ್ರವ್ಯಾಪಿ LIC, SBI ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

- Advertisement -
- Advertisement -

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗುಂಪಿನ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅಥವಾ ಜಂಟಿ ಸಂಸದೀಯ ಸಮಿತಿ (JPC) ಅವರ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಎಲ್‌ಐಸಿ, ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಲು ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ನೀಡಿತ್ತು. ಅದರಂತೆ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರವ್ಯಾಪಿ ಎಲ್‌ಐಸಿ, ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಹೈದರಾಬಾದ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಮ್ಮುನಲ್ಲಿ ಪಕ್ಷದ ಹಿರಿಯ ನಾಯಕ ವಿಕಾರ್ ರಸೂಲ್ ಮತ್ತು ಕಾರ್ಯಾಧ್ಯಕ್ಷ ರಾಮನ್ ಭಲ್ಲಾ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ರ್ಯಾಲಿ ನಡೆಸಿದರು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದು, ಅವರಲ್ಲಿ ಕೆಲವರು ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನ್ ಭಲ್ಲಾ ”ಇಂದು, ನಾವು ಅದಾನಿ ವಿಷಯದ ಕುರಿತು ಸಂಸತ್ತಿನ ಒಳಗೆ ಮತ್ತು ಅದರ ಹೊರಗೆ ಪ್ರತಿಭಟಿಸಿದ್ದೇವೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅಥವಾ ಜಂಟಿ ಸಂಸದೀಯ ಸಮಿತಿ (JPC)ಯಲ್ಲಿ ಅದಾನಿ ಕಂಪನಿ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಹೇಳಿದರು.

ಎಲ್‌ಐಸಿ ಮತ್ತು ಎಸ್‌ಬಿಐ ಹಣವನ್ನು ಅದಾನಿ ಗ್ರೂಪ್‌ಗೆ “ಹೂಡಿಕೆ” ಮಾಡಿದ್ದಕ್ಕಾಗಿ ಕೇಂದ್ರದ ವಿರುದ್ಧ ಭಲ್ಲಾ ಮತ್ತಷ್ಟು ಕಿಡಿಕಾರಿದರು.

ಇದನ್ನೂ ಓದಿ: ಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

ಶ್ರೀನಗರದಲ್ಲಿ ಪಕ್ಷದ ಹಿರಿಯ ಮುಖಂಡ ಮೊಹಮ್ಮದ್ ಅನ್ವರ್ ಭಟ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಅದಾನಿ ಗ್ರೂಪ್ ವಿರುದ್ಧ ಬಂದಿರುವ ವಂಚನೆ ಆರೋಪಗಳ ಮೇಲೆ ಭಾರತದ ಮುಖ್ಯ ನ್ಯಾಯಮೂರ್ತಿಯವರಿಂದ ತನಿಖೆ ನಡೆಸಬೇಕು ಎಂದು ಘೋಷಣೆಗಳನ್ನು ಕೂಗಿದರು. ಅದಾನಿ ಸಮೂಹದಲ್ಲಿ ಎಲ್‌ಐಸಿ ಸಾವಿರಾರು ಕೋಟಿ ಹೂಡಿಕೆ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ಕೂಡ 250 ಕೋಟಿ ರೂಪಾಯಿ ಕಳೆದುಕೊಂಡಿದೆ ಎಂದು ಭಟ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಎಲ್‌ಐಸಿ ಮತ್ತು ಎಸ್‌ಬಿಐ ನ ಸಾರ್ವಜನಿಕ ಹಣವನ್ನು ಅದಾನಿ ಗ್ರೂಪ್‌ಗೆ “ಹೂಡಿಕೆ” ಮಾಡುವ ವಿಷಯವು ಗಂಭೀರವಾದದ್ದು ಮತ್ತೆ ಕಳವಳಕಾರಿಯಾದ ವಿಷಯವಾಗಿದೆ. ಮೋದಿ ಸರ್ಕಾರವು ಸಂಸತ್ತಿನಲ್ಲಿ ಪ್ರಶ್ನೆಗಳಿಂದ “ನುಣುಚಿಕೊಳ್ಳುತ್ತಿದೆ” ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರವೀಂದರ್ ಶರ್ಮಾ ವಾಗ್ಧಾಳಿ ನಡೆಸಿದರು.

ಅದಾನಿ ಸಮೂಹವು ಮಾಡಿರುವ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ನೇತೃತ್ವದಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ದೆಹಲಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅದಾನಿ ಹಗರಣವನ್ನು ಮುಚ್ಚಿ ಹಾಕಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಜಂತರ್‌ ಮಂತರ್‌ನಿಂದ ಎಸ್‌ಬಿಐವರೆಗೆ ಸಾಗಿದರು. ಎಲ್‌ಐಸಿ, ಎಸ್‌ಬಿಐ ಉಳಿಸಿ ಎಂದು ಘೋಷಣೆ ಕೂಗಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ತಡೆದರು. ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಹತ್ತಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದರು.

”ಆಪ್ತ ಮಿತ್ರ ಗೌತಮ್‌ ಅದಾನಿ ಅವರನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅದಕ್ಕಾಗಿ ಸಂಸತ್‌ನಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಲಕ್ಷ ಕೋಟಿಗಳ ಮೊತ್ತದ ಬಹು ದೊಡ್ಡ ಹಗರಣ ನಡೆದಿದೆ. ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ” ಎಂದು ಬಿ.ವಿ.ಶ್ರೀನಿವಾಸ್‌ ಹೇಳಿದರು.

”ಅದಾನಿ ಸಮೂಹದ ಆಸ್ತಿ ₹ 8,000 ಕೋಟಿಯಿಂದ ₹9.90 ಲಕ್ಷ ಕೋಟಿ ಆಗಲು ಕಾರಣ ಏನು ಎಂಬುದು ಬಹಿರಂಗವಾಗಬೇಕಿದೆ. ಅದಾನಿಯಂತಹ ಉದ್ಯಮ ಸಮೂಹ ರಕ್ಷಿಸಲು ಪ್ರಧಾನಿ ಅವರು ಮುಂದಾಗಿರುವುದು ದೇಶದ ಇತಿಹಾಸದಲ್ಲೇ ಮೊದಲು” ಎಂದು ಕಿಡಿಕಾರಿದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರು ಫಲಕಗಳನ್ನು ಹಿಡಿದುಕೊಂಡು ಪೊಲೀಸರ ಬ್ಯಾರಿಕೇಡ್‌ಗಳ ಮೇಲೆ ನಿಂತು ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಪ್ರತಿಭಟನಾಕಾರರು ಎಸ್‌ಬಿಐ ಲಾಂಛನವಿರುವ ಸೂಟ್‌ಕೇಸ್‌ನ್ನು ಸುಟ್ಟು ಹಾಕಿದರು.

ಅದಾನಿ ಮೇಲಿನ ಆರೋಪಗಳ ತನಿಖೆಗಾಗಿ ಮೋದಿ ಸರ್ಕಾರದ ಮೇಲೆ ಒತ್ತಡ ತರುವುದನ್ನು ಮುಂದುವರೆಸಲು 16 ರಾಜಕೀಯ ಪಕ್ಷಗಳ ನಾಯಕರು ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದ್ದರು. ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಭಾರತ್ ರಾಷ್ಟ್ರ ಸಮಿತಿ, ಜನತಾ ದಳ ಯುನೈಟೆಡ್, ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಸಿಪಿಐ, ಕೇರಳ ಕಾಂಗ್ರೆಸ್ (ಜೋಸ್ ಮಣಿ), ಜಾರ್ಖಂಡ್ ಮುಕ್ತಿ ಮೋರ್ಚಾ, ರಾಷ್ಟ್ರೀಯ ಲೋಕದ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ರಾಷ್ಟ್ರೀಯ ಜನತಾ ದಳ ಮತ್ತು ಶಿವಸೇನೆ ಈ ಸಭೆಯಲ್ಲಿ ಪಾಲ್ಗೊಂಡಿದ್ದವು.

ಸಭೆಯಲ್ಲಿ ಭಾಗವಹಿಸಿದ ಪಕ್ಷಗಳ ಸಂಸದರು, ಲೋಕಸಭೆ ಮತ್ತು ರಾಜ್ಯಸಭೆಯ ಒಳಗೆ, ಹೊರಗೆ ಈ ವಿಷಯದ ಬಗ್ಗೆ ಮತ್ತೊಮ್ಮೆ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ನಂತರ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷಗಳ ಸಂಸದರು ಜಮಾಯಿಸಿದರು. ಕಾಂಗ್ರೆಸ್ ನಾಯಕರಾದ ಖರ್ಗೆ, ಅಧೀರ್ ರಂಜನ್ ಚೌಧರಿ, ಶಿವಸೇನೆಯ (ಯುಬಿಟಿ) ಸಂಜಯ್ ರಾವುತ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

”ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸಲು ಸಿದ್ಧವಾಗಿವೆ. ಆದರೆ ಮೊದಲು ಅದಾನಿ ಗ್ರೂಪಿನ ವಿಷಯದ ಬಗ್ಗೆ ಮೋದಿಯವರಿಂದ ಉತ್ತರವನ್ನು ಬಯಸುತ್ತೇವೆ” ಎಂದು ಖರ್ಗೆ ಹೇಳಿದರು.

”ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸಲು ಸಿದ್ಧವಾಗಿವೆ. ಆದರೆ ಮೊದಲು ಅದಾನಿ ಗ್ರೂಪಿನ ವಿಷಯದ ಬಗ್ಗೆ ಮೋದಿಯವರಿಂದ ಉತ್ತರವನ್ನು ಬಯಸುತ್ತೇವೆ” ಎಂದು ಖರ್ಗೆ ಹೇಳಿದರು.

ದೇಶದ ನಾನಾ ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ:-

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಗ್ನಿಪಥ ಯೋಜನೆ ಬಗ್ಗೆ ಮಾತನಾಡದಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನಿರ್ದೇಶನ ನೀಡಿದ್ದು ತಪ್ಪು: ಚಿದಂಬರಂ

0
ಅಗ್ನಿಪಥ ಯೋಜನೆಯನ್ನು ರಾಜಕೀಯಗೊಳಿಸದಂತೆ ಚುನಾವಣಾ ಆಯೋಗವು ತನ್ನ ಪಕ್ಷಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ತಪ್ಪು, ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪ್ರತಿಪಾದಿಸಿದರು. ಚುನಾವಣಾ...