Homeಮುಖಪುಟಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

ಪ್ರತಿಭಟನೆ ವೇಳೆ ಪೊಲೀಸರಿಂದ ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯ ಹಲ್ಲೆ-ಆರೋಪ

- Advertisement -

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ಪ್ರಶ್ನಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮೇಲೆ ದೆಹಲಿ ಪೊಲೀಸರು ಬೂಟು ಕಾಲಿನಿಂದ ಹೊಡೆದ ದೃಶ್ಯಗಳು ವೈರಲ್ ಆಗಿವೆ.

ಸಾಮಾಜಿಕ ಮಾಧ್ಯಮಗಳು, ಸುದ್ದಿ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಬಿ.ವಿ.ಶ್ರೀನಿವಾಸ್ ಅವರನ್ನು ಹಲವಾರು ಪೊಲೀಸ್ ಅಧಿಕಾರಿಗಳು ಎಳೆದೊಯ್ಯುತ್ತಿರುವುದು ಮತ್ತು ದಾರಿಯಲ್ಲಿ ಒಬ್ಬ ಅಧಿಕಾರಿಯಿಂದ ಓಡಿ ಬಂದು ತನ್ನ ಬೂಟು ಕಾಲಿನಿಂದ ಒದೆಯುವುದನ್ನು ಕಾಣಬಹುದಾಗಿದೆ.

ಇನ್ನು ಸೋಮವಾರದಿಂದ ಸುಮಾರು 800 ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯವು ಸತತ ಮೂರು ದಿನಗಳ ಕಾಲ, 30 ಗಂಟೆಗೂ ಹೆಚ್ಚು ಕಾಲ ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸಿರುವುದನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೇಡಿನ ರಾಜಕಾರಣಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ದ್ವೇಷ ರಾಜಕಾರಣವನ್ನು ಎಲ್ಲಾ ವಿಪಕ್ಷಗಳು ಒಟ್ಟಾಗಿ ಖಂಡಿಸಬೇಕು: ಸಿದ್ದರಾಮಯ್ಯ

- Advertisement -

ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ನಡೆದುಕೊಂಡ ರೀತಿಗೆ ಸಾಮಾಜಿಕ ಜಾಲತಾಣ ಬಳಕೆದಾರರು ಟೀಕಿಸಿದ್ದಾರೆ. ಕಳೆದ ವರ್ಷ ದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್‌ ಸಹಾಯ ಮಾಡಿ ಬಿ.ವಿ.ಶ್ರೀನಿವಾಸ್ ಜನಮನ್ನಣೆ ಗಳಿಸಿದ್ದರು.

ಬುಧವಾರ, ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಪಕ್ಷದ ಸಂಸದೆ ಜೋತಿಮಣಿ ಅವರ ವೀಡಿಯೊವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ದೆಹಲಿ ಪೊಲೀಸರು ಸಂಸದೆ ಮೇಲೆ “ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

’ಪೊಲೀಸರು ಕೂಡ ನೀರು ಕೊಡಲು ನಿರಾಕರಿಸಿದ್ದಾರೆ ಎಂದು ಜೋತಿಮಣಿ ವಿಡಿಯೋದಲ್ಲಿ ಹೇಳಿದ್ದಾರೆ. “ನಾವು ಹೊರಗಿನಿಂದ ನೀರು ಖರೀದಿಸಲು ಪ್ರಯತ್ನಿಸುತ್ತಿರುವಾಗ, ಅವರು ನಮಗೆ ನೀರು ಕೊಡಬೇಡಿ ಎಂದು ಮಾರಾಟಗಾರರಿಗೆ ಹೇಳುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದಲ್ಲದೆ, ದೆಹಲಿ ಪೊಲೀಸ್ ಸಿಬ್ಬಂದಿ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಗೆ ಬಲವಂತವಾಗಿ ಪ್ರವೇಶಿಸಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಥಳಿಸಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದ್ದು, ಪಕ್ಷದ ಆವರಣಕ್ಕೆ ನುಗ್ಗಿ ಯಾವುದೇ ಪ್ರಚೋದನೆಯಿಲ್ಲದೆ ಕಾರ್ಯಕರ್ತರನ್ನು ಥಳಿಸಿದ ಎಲ್ಲಾ ದೆಹಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯಿಸಿದೆ. ಜೊತೆಗೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಮಹಿಳಾ ಕಾರ್ಯಕರ್ತೆಯರ ಮೇಲೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹಲ್ಲೆ ನಡೆಸುತ್ತಿರುವ ಪೋಟೋ, ವಿಡಿಯೋಗಳು ಟೀಕೆಗೆ ಗುರಿಯಾಗಿವೆ.


ಇದನ್ನೂ ಓದಿ: ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...