ಬೆಂಗಳೂರಿನಲ್ಲಿ ನೆರೆ ಬಂದು ಜನರು ಸಂಕಷ್ಟದಲ್ಲಿದ್ದಾಗ ನಗರದ ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್‌ನಲ್ಲಿ ಬೆಣ್ಣೆ ದೋಸೆ ಮತ್ತು ಉಪ್ಪಿಟ್ಟು ತಿಂದು ಅದರ ಪ್ರಚಾರ ಮಾಡುತ್ತಿದ್ದರು. ತೇಜಸ್ವಿ ಸೂರ್ಯ ಅವರು ಜನಪ್ರತಿನಿಧಿಯಾಗಿ ತನ್ನ ಬೇಜವಬ್ದಾರಿತನ ತೋರಿರುವುದನ್ನು ವಿರೋಧಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿಯು ಶನಿವಾರ ವಿನೂತನವಾಗಿ ಪ್ರತಿಭಟನೆ ನಡೆಸಿದೆ.
ಬಿಜೆಪಿ ಸಂಸದ ಉಪಾಹಾರ ಸೇವಿಸಲು ಮಾತ್ರ ಸೀಮಿತವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಸಂಸದರಿಗೆ ಉಚಿತ ದೋಸೆ ರವಾನೆ ಮಾಡಿ’ ಅವರ ಜನ ವಿರೋಧಿ ಸಂಸದರ ನಡೆಯನ್ನು ಖಂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಬೆಂಗಳೂರಿನಲ್ಲಿ ಜನರು ಮಳೆಯ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದರೆ, ತೇಜಸ್ವಿ ಸೂರ್ಯ ಜನರ ಸಂಕಷ್ಟಕ್ಕೆ ಸ್ಪಂದಿಸದೆ ಹೋಟೆಲ್‌ಗಳಿಗೆ ತೆರಳಿ ದೋಸೆ ಸವಿಯುತ್ತಿದ್ದಾರೆ. ಅಷ್ಟೆ ಅಲ್ಲದೆ ಅದನ್ನು ಇನ್ಸ್‌ಟಾಗ್ರಾಂನಲ್ಲಿ ಹಾಕಿ, ಸಂಕಷ್ಟದಲ್ಲಿ ಇರುವ ಜನರನ್ನು ಮತ್ತಷ್ಟು ಅಪಹಾಸ್ಯ ಮಾಡುತ್ತಿದ್ದಾರೆ. ಇಂತಹ ಬೇಜವಾಬ್ದಾರಿ ಸಂಸತ್ ಸದಸ್ಯ ಬೆಂಗಳೂರಿನಿಂದ ತೊಲಗಬೇಕು” ಎಂದು ಬೆಂಗಳೂರು ನಗರ ಕಾಂಗ್ರೆಸ್ ಹೇಳಿದೆ.
“ಬೆಂಗಳೂರಿನಿಂದ ಚುನಾಯಿತರಾಗಿರುವ ತೇಜಸ್ವಿ ಸೂರ್ಯ ಅವರಿಗೆ ಜನರ ಸಮಸ್ಯೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಜನರು ಮಳೆ ಪ್ರವಾಹದಿಂದ ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸದ ಹಾಗೂ ಜನರ ಸಮಸ್ಯೆಯನ್ನು ಆಲಿಸದ ಅವರು ತಮ್ಮ ಕರ್ತವ್ಯವನ್ನೇ ಮರೆತಿದ್ದಾರೆ” ಎಂದು ಕಾಂಗ್ರೆಸ್ ಕಿಡಿ ಕಾರಿದೆ.
ಇದನ್ನೂ ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!
“ಇಷ್ಟೆ ಅಲ್ಲದೆ, ಜನಸಾಮಾನ್ಯರ ಸಮಸ್ಯೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದರೆ ಉಡಾಫೆ ಉತ್ತರವನ್ನು ನೀಡಿದ್ದಾರೆ. ಹೀಗಾಗಿ ಅವರ ಬೇಜವಾಬ್ದಾರಿ ನಡವಳಿಕೆಯನ್ನು ಖಂಡಿಸಿ, ಅವರಿಗೆ ಉಚಿತವಾಗಿ ದೋಸೆ ರವಾನೆ ಮಾಡುತ್ತಿದ್ದೇವೆ” ಎಂದು ಕಾಂಗ್ರೆಸ್ ಹೇಳಿದೆ. ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.


