Homeಕರ್ನಾಟಕಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

- Advertisement -
- Advertisement -

ಬೆಂಗಳೂರಿನಲ್ಲಿ ನೆರೆ ಬಂದು ಜನರು ಸಂಕಷ್ಟದಲ್ಲಿದ್ದಾಗ ನಗರದ ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್‌ನಲ್ಲಿ ಬೆಣ್ಣೆ ದೋಸೆ ಮತ್ತು ಉಪ್ಪಿಟ್ಟು ತಿಂದು ಅದರ ಪ್ರಚಾರ ಮಾಡುತ್ತಿದ್ದರು. ತೇಜಸ್ವಿ ಸೂರ್ಯ ಅವರು ಜನಪ್ರತಿನಿಧಿಯಾಗಿ ತನ್ನ ಬೇಜವಬ್ದಾರಿತನ ತೋರಿರುವುದನ್ನು ವಿರೋಧಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿಯು ಶನಿವಾರ ವಿನೂತನವಾಗಿ ಪ್ರತಿಭಟನೆ ನಡೆಸಿದೆ.

ಬಿಜೆಪಿ ಸಂಸದ ಉಪಾಹಾರ ಸೇವಿಸಲು ಮಾತ್ರ ಸೀಮಿತವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌, ‘ಸಂಸದರಿಗೆ ಉಚಿತ ದೋಸೆ ರವಾನೆ ಮಾಡಿ’ ಅವರ ಜನ ವಿರೋಧಿ ಸಂಸದರ ನಡೆಯನ್ನು ಖಂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೆಂಗಳೂರಿನಲ್ಲಿ ಜನರು ಮಳೆಯ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದರೆ, ತೇಜಸ್ವಿ ಸೂರ್ಯ ಜನರ ಸಂಕಷ್ಟಕ್ಕೆ ಸ್ಪಂದಿಸದೆ ಹೋಟೆಲ್‌ಗಳಿಗೆ ತೆರಳಿ ದೋಸೆ ಸವಿಯುತ್ತಿದ್ದಾರೆ. ಅಷ್ಟೆ ಅಲ್ಲದೆ ಅದನ್ನು ಇನ್ಸ್‌ಟಾಗ್ರಾಂನಲ್ಲಿ ಹಾಕಿ, ಸಂಕಷ್ಟದಲ್ಲಿ ಇರುವ ಜನರನ್ನು ಮತ್ತಷ್ಟು ಅಪಹಾಸ್ಯ ಮಾಡುತ್ತಿದ್ದಾರೆ. ಇಂತಹ ಬೇಜವಾಬ್ದಾರಿ ಸಂಸತ್ ಸದಸ್ಯ ಬೆಂಗಳೂರಿನಿಂದ ತೊಲಗಬೇಕು” ಎಂದು ಬೆಂಗಳೂರು ನಗರ ಕಾಂಗ್ರೆಸ್‌ ಹೇಳಿದೆ.

 

“ಬೆಂಗಳೂರಿನಿಂದ ಚುನಾಯಿತರಾಗಿರುವ ತೇಜಸ್ವಿ ಸೂರ್ಯ ಅವರಿಗೆ ಜನರ ಸಮಸ್ಯೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಜನರು ಮಳೆ ಪ್ರವಾಹದಿಂದ ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸದ ಹಾಗೂ ಜನರ ಸಮಸ್ಯೆಯನ್ನು ಆಲಿಸದ ಅವರು ತಮ್ಮ ಕರ್ತವ್ಯವನ್ನೇ ಮರೆತಿದ್ದಾರೆ” ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಇದನ್ನೂ ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

“ಇಷ್ಟೆ ಅಲ್ಲದೆ, ಜನಸಾಮಾನ್ಯರ ಸಮಸ್ಯೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದರೆ ಉಡಾಫೆ ಉತ್ತರವನ್ನು ನೀಡಿದ್ದಾರೆ. ಹೀಗಾಗಿ ಅವರ ಬೇಜವಾಬ್ದಾರಿ ನಡವಳಿಕೆಯನ್ನು ಖಂಡಿಸಿ, ಅವರಿಗೆ ಉಚಿತವಾಗಿ ದೋಸೆ ರವಾನೆ ಮಾಡುತ್ತಿದ್ದೇವೆ” ಎಂದು ಕಾಂಗ್ರೆಸ್ ಹೇಳಿದೆ. ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಸೇರಿದಂತೆ ಪಕ್ಷದ ಮುಖಂಡರು ಮತ್ತು  ಕಾರ್ಯಕರ್ತರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...