Homeಮುಖಪುಟಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

ಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ನಡೆದಿರುವ ಹಲವು ಅಕ್ರಮಗಳ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿ ಹೇಳಿರುವುದನ್ನು ಉಲ್ಲೇಖಿಸಿ, ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ತರಾಟೆ ತಗೆದುಕೊಂಡಿದೆ.

ನೂರಾರು ಕೋಟಿ ಮೊತ್ತದ ಏಳು ಹಗರಣಗಳಲ್ಲಿ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ.

ಭಾರತ್‌ಮಾಲಾ ಯೋಜನೆಯಲ್ಲಿನ ಅಕ್ರಮಗಳಗಳ ಬಗ್ಗೆ ಸಿಎಜಿ ನೀಡಿದ ವರದಿಯನ್ನು ಎತ್ತಿ ತೋರಿಸಿರುವ ಕಾಂಗ್ರೆಸ್, ದ್ವಾರಕಾ ಎಕ್ಸ್‌ಪ್ರೆಸ್‌ವೇ ನಿರ್ಮಾಣ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ನಿಯಮಗಳ ಉಲ್ಲಂಘನೆ, ಆಯುಷ್ಮಾನ್ ಭಾರತ್ ಯೋಜನೆ ಮತ್ತು ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಅನಗತ್ಯ ಲಾಭ ಮಾಡಲಾಗಿದೆ ಎಂದು ಆರೋಪಿಸಿದೆ.

”ಸಿಎಜಿ ನಿಮ್ಮ ಮೂಗಿನ ನೇರಕ್ಕೆ ಬಯಲಿಗೆಳೆಯುತ್ತಿರುವ ಹಗರಣಗಳ ಬಗ್ಗೆ ನೀವು [ಮೋದಿ] ಮೌನ ಮುರಿಯುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಪ್ರಶ್ನಿಸಿದ್ದಾರೆ.

”ನೀವು CCEA [ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ] ಅಧ್ಯಕ್ಷರಾಗಿರುವಿರಿ, ನೀವು ಭಾರತಮಾಲಾ ಯೋಜನೆಯ ಬಗ್ಗೆ ನಿಮ್ಮ ಬಾಯಿ ಮುಚ್ಚಿಕೊಂಡಿದ್ದೀರಾ ಏಕೆ? ಅಲ್ಲಿ ನಿರ್ಮಾಣ ವೆಚ್ಚವು ಕಿಮೀಗೆ 15.37 ಕೋಟಿಯಿಂದ 32 ಕೋಟಿಗೆ ದ್ವಿಗುಣಗೊಂಡಿದೆ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆಯಾದ ಭಾರತಮಾಲಾ ಯೋಜನೆಯಲ್ಲಿ, ಟೆಂಡರ್ ಪ್ರಕ್ರಿಯೆಯೂ ದೋಷಪೂರಿತವಾಗಿದೆ ಎಂದು ಶ್ರೀನಾಟೆ ಆರೋಪಿಸಿದರು.

”ಸಲ್ಲಿಕೆಯಾದ ವಿವರವಾದ ಯೋಜನಾ ವರದಿ ಇಲ್ಲ.. ಎಸ್ಕ್ರೊ ಖಾತೆಯಿಂದ 3,500 ಕೋಟಿ ರೂಪಾಯಿಗಳ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಸುರಕ್ಷತಾ ಸಲಹೆಗಾರರನ್ನು ನೇಮಿಸಲಾಗಿಲ್ಲ” ಎಂದು ಹೇಳಿದ್ದಾರೆ.

ದೆಹಲಿ-ಗುರುಗ್ರಾಮ್ ಗಡಿಯಲ್ಲಿನ ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮಗಳು ನಡೆದಿವೆ. CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅವರು ಆರೋಪಿಸಿದರು.

ಸಿಎಜಿಯ ಎಕ್ಸ್‌ಪ್ರೆಸ್‌ವೇಯ ಆಡಿಟ್ ವರದಿಯಲ್ಲಿ, ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ತಿಳಿಸಿದೆ.

”500 ಕೋಟಿ ರೂ. ವೆಚ್ಚದಲ್ಲಿ ಮಂಗಳಯಾನ [ಮಾರ್ಸ್ ಆರ್ಬಿಟರ್ ಮಿಷನ್] ಹೋಗಬಹುದಿತ್ತು… NHAIನ [ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ] ಐದು ಟೋಲ್ ಪ್ಲಾಜಾಗಳನ್ನು ಮಾತ್ರ ಆಡಿಟ್ ಮಾಡಿದಾಗ ದೇಶದ ಸಾಮಾನ್ಯ ನಾಗರಿಕರನ್ನು 132 ಕೋಟಿ ರೂಪಾಯಿ ಲೂಟಿ ಮಾಡಿರುವುದು ಗೊತ್ತಾಗಿದೆ. ಒಂದು ವೇಳೆ ಇಡೀ ದೇಶದ ಪ್ರತಿಯೊಂದು ಟೋಲ್ ಪ್ಲಾಜಾವನ್ನು ಲೆಕ್ಕಪರಿಶೋಧನೆ ಮಾಡಿದರೆ, ಈ ಹಗರಣದ ಮೊತ್ತ ಎಷ್ಟಾಗಬಹುದು?” ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ ಸುಮಾರು 7.5 ಲಕ್ಷ ಫಲಾನುಭವಿಗಳು ಒಂದೇ ಸೆಲ್‌ಫೋನ್ ಸಂಖ್ಯೆ – 9999999999 ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿ ಹೇಳಿರುವುದನ್ನು ಕಾಂಗ್ರೆಸ್ ಉಲ್ಲೇಖಿಸಿದೆ.

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ಬಡ ಜನರಿಗೆ ಆರೋಗ್ಯ ವಿಮೆಗಾಗಿ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ.

”ಏಳೂವರೆ ಲಕ್ಷ ಫಲಾನುಭವಿಗಳು, ಒಂದು ಫೋನ್ ಸಂಖ್ಯೆಯೊಂದಿಗೆ ನೋಂದಾಯಿಸಲಾಗಿದೆ, ಆದರೆ ಅಷ್ಟೆ ಅಲ್ಲ, ಸಾವನ್ನಪ್ಪಿದ 88,000ಕ್ಕೂ ಹೆಚ್ಚು ಜನರಿಗೂ ಹಣ ನೀಡಲಾಗಿದೆ. ಹಾಗಾದರೆ ಆ ಹಣ ಯಾರಿಗೆ ಹೋಗಿದೆ..? ಇದೊಂದು ದೊಡ್ಡ ಪ್ರಶ್ನೆಯಾಗಿದೆ” ಎಂದು ಶ್ರೀನಾಟೆ ಹೇಳಿದ್ದಾರೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಉತ್ತರ ಪ್ರದೇಶದ ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಹೇಳುವುದಾದರೆ ಅಲ್ಲಿ ನೋಂದಾಯಿತವಲ್ಲದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ ಎಂದು ಹೇಳಿದೆ.

”ನೋಂದಣಿ ಮಾಡದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ. ಆ ಜನರು ಯಾರು? ಅವರು ಏನು ಮಾಡುತ್ತಿದ್ದಾರೆ? ಟೆಂಡರ್ ಪ್ರಕ್ರಿಯೆಯು ದೋಷಪೂರಿತವಾಗಿದ್ದು ಹೇಗೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು 19 ರಾಜ್ಯಗಳಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಪ್ರಚಾರ ಮಾಡುವ ಹೋರ್ಡಿಂಗ್‌ಗಳನ್ನು ಹಾಕಲು ಬಡವರು, ದೈಹಿಕವಾಗಿ ಅಂಗವಿಕಲರು, ವಿಧವೆಯರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ ಹಣವನ್ನು ಬಳಸಲಾಗಿದೆ ಎಂದು ಶ್ರೀನಾಟೆ ಹೇಳಿದ್ದಾರೆ.

”ದೋಷಪೂರಿತ ಎಂಜಿನ್ ವಿನ್ಯಾಸಕ್ಕಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅನ್ನು ಸಹ ಎಳೆಯಲಾಗಿದೆ, ಇದು ಸುಮಾರು 154 ಕೋಟಿ ರೂಪಾಯಿಗಳ ನಷ್ಟಕ್ಕೆ ಕಾರಣವಾಗಿದೆ” ಎಂದು ಅವರು ಹೇಳಿದರು.

”ಇದು ಬೊಕ್ಕಸವನ್ನು ಲೂಟಿ ಮಾಡುತ್ತಿದೆ; ಇದು ಭಾರತದ ಜನರನ್ನು ಲೂಟಿ ಮಾಡುತ್ತಿದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಆದರೆ ಕ್ರಮ ಕೈಗೊಳ್ಳುವ ಮೊದಲು, ಪ್ರಧಾನಿಯವರು ಈ ದೇಶಕ್ಕೆ ಹೇಳಬೇಕಾಗಿದೆ, ಬಡವರಿಗೆ, ದೈಹಿಕವಾಗಿ ವಿಕಲಚೇತನರಿಗೆ, ವೃದ್ಧರಿಗೆ ಮತ್ತು ವಿಧವೆಯರಿಗೆ ಉದ್ದೇಶಿಸಲಾದ ಯೋಜನೆಗಳ ಹಣವನ್ನು ಅನಗತ್ಯವಾಗಿ ಬಳಸಲು ಏಕೆ ಅನುಮತಿಸುತ್ತಿದ್ದಾರೆ?” ಎನ್ನುವುದನ್ನು ಎಂದು ಪ್ರಧಾನಿಗೆ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ತರಾಟೆ ತೆಗೆದುಕೊಮಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...