Homeಮುಖಪುಟಕಾಂಗ್ರೆಸ್ ರ‍್ಯಾಲಿಗೆ ಹೋಗುವ ಮಹಿಳೆಯರ ಪೋಟೊ ತೆಗೆದಿಡಿ; ನಾವು ನೋಡಿಕೊಳ್ಳುತ್ತೇವೆ - ಬಿಜೆಪಿ ಸಂಸದ ಬೆದರಿಕೆ

ಕಾಂಗ್ರೆಸ್ ರ‍್ಯಾಲಿಗೆ ಹೋಗುವ ಮಹಿಳೆಯರ ಪೋಟೊ ತೆಗೆದಿಡಿ; ನಾವು ನೋಡಿಕೊಳ್ಳುತ್ತೇವೆ – ಬಿಜೆಪಿ ಸಂಸದ ಬೆದರಿಕೆ

- Advertisement -
- Advertisement -

ಕಾಂಗ್ರೆಸ್ ಚುನಾವಣಾ ರ‍್ಯಾಲಿಗಳಿಗೆ ತೆರಳುವ ಮಹಾರಾಷ್ಟ್ರ ಸರ್ಕಾರದ ‘ಲಡ್ಕಿ ಬಹಿನ್’ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಬಿಜೆಪಿ ಸಂಸದ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಯೋಜನೆಯ ಫಲಾನುಭವಿ ಮಹಿಳೆಯರು ಕಾಂಗ್ರೆಸ್ ರ‍್ಯಾಲಿಗಳಲ್ಲಿ ಕಂಡರೆ ಅಂತವರ ಫೋಟೊ ತೆಗೆದಿಡಿ, ಅವರನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಧನಂಜಯ್ ಮಹಾದಿಕ್ ಬೆದರಿಸಿದ್ದಾರೆ. ಅದಾಗ್ಯೂ, ನಂತರ ಅವರು ಈ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ರ‍್ಯಾಲಿಗೆ

ಮಹಾರಾಷ್ಟ್ರ ಸರ್ಕಾರವು ಲಡ್ಕಿ ಬಹಿನ್ ಯೋಜನೆಯಡಿ, ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ.ಗಿಂತ ಕಡಿಮೆಯಿರುವ 21 ರಿಂದ 65 ವರ್ಷ ವಯಸ್ಸಿನ ಮಹಿಳೆಯರಿಗೆ ನೇರ ಬ್ಯಾಂಕ್ ವರ್ಗಾವಣೆಯ ರೂಪದಲ್ಲಿ ತಿಂಗಳಿಗೆ 1,500 ರೂ. ನೀಡುತ್ತದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ರ‍್ಯಾಲಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶನಿವಾರ ಕೊಲ್ಹಾಪುರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಮಹಾದಿಕ್, “ಕಾಂಗ್ರೆಸ್ ರ‍್ಯಾಲಿಗಳಲ್ಲಿ ಲಡ್ಕಿ ಬಹಿನ್ ಯೋಜನೆಯಡಿ 1,500 ರೂ.ಗಳನ್ನು ಪಡೆದ ಮಹಿಳೆಯರನ್ನು ನೀವು ಕಂಡರೆ ಅವರ ಚಿತ್ರಗಳನ್ನು ತೆಗೆದುಕೊಳ್ಳಿ… ನಾವು ಅವರನ್ನು ನೋಡಿಕೊಳ್ಳುತ್ತೇವೆ. ನಮ್ಮ ಸರ್ಕಾರದಿಂದ ಲಾಭ ಪಡೆದು ಅವರ ಪರವಾಗಿ ಹಾಡು ಹಾಡಲು ನಾವು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಹೇಳಿಕೆ ವಿರುದ್ಧ ಕೊಲ್ಹಾಪುರ ದಕ್ಷಿಣದ ಚುನಾವಣಾಧಿಕಾರಿ ಮಹಾದಿಕ್‌ಗೆ ನೋಟೀಸ್ ನೀಡಿದ್ದಾರೆ. ಅವರ ಹೇಳಿಕೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಈ ಹೇಳಿಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಅವರನ್ನು ಕೇಳಿದ್ದಾರೆ. ಸೋಮವಾರ, ರಾಜ್ಯ ಚುನಾವಣಾ ಆಯೋಗವು ಮಹಾದಿಕ್ ವಿರುದ್ಧ ದೂರು ದಾಖಲಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತನ್ನ ಹೇಳಿಕೆಗೆ ಕ್ಷಮೆಯಾಚಿಸಿರುವ ಬಿಜೆಪಿ ನಾಯಕ “ನನ್ನ ಹೇಳಿಕೆಯು ಯಾವುದೇ ತಾಯಿ ಅಥವಾ ಸಹೋದರಿಯನ್ನು ಅವಮಾನಿಸುವ ಉದ್ದೇಶವನ್ನು ಹೊಂದಿಲ್ಲ” ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ತಾನು ಆಡಳಿತಾರೂಢ ಮಹಾಯುತಿ ಸರ್ಕಾರದಿಂದ ಮಾತ್ರ ಕಲ್ಯಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಲು ಈ ಹೇಳಿಕೆ ನೀಡಿದ್ದೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿಯವರು ಹರಡುತ್ತಿರುವ “ಸುಳ್ಳು ಪ್ರಚಾರ” ಕ್ಕೆ  ಪ್ರತಿಕ್ರಿಯಿಯೆಯಾಗಿ ಈ ಹೇಳಿಕೆ ನೀಡಿದ್ದಾಗಿ ಅವರು ಹೇಳಿದ್ದಾರೆ. “ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನದಲ್ಲಿ ನಾನು ಯಾವಾಗಲೂ ಮಹಿಳೆಯರನ್ನು ಗೌರವಿಸುತ್ತೇನೆ” ಎಂದು ಮಹಾದಿಕ್ ತಮ್ಮ ಕ್ಷಮೆಯಾಚನೆಯಲ್ಲಿ ಹೇಳಿದ್ದಾರೆ.

ಮಹಾದಿಕ್ ಅವರ ಹೇಳಿಕೆಯು ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿಯಿಂದ ಟೀಕೆಗೆ ಗುರಿಯಾಗಿತ್ತು. ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕಿ ಸುಪ್ರಿಯಾ ಸುಳೆ ಅವರು ರಾಜ್ಯ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡುತವಂತೆ ಒತ್ತಾಯಿಸಿದ್ದರು.

“ಲೋಕಸಭಾ ಚುನಾವಣೆಯ ನಂತರ, ಮತದಾರರಿಗೆ ಇಂತಹ ಬೆದರಿಕೆಗಳನ್ನು ನೀಡಲಾಗುತ್ತಿದೆ” ಎಂದು ಸುಲೆ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಮಹಾರಾಷ್ಟ್ರ ಸರ್ಕಾರ ಮಹಿಳೆಯರಿಗೆ ಹಣ ನೀಡುವ ಮೂಲಕ ಯಾವುದೇ ಉಪಕಾರ ಮಾಡುತ್ತಿಲ್ಲ ಅಥವಾ ಅವರು ಅದನ್ನು ಬಿಜೆಪಿಯ ಜೇಬಿನಿಂದ ನೀಡುತ್ತಿಲ್ಲ. ಈ ಹಣವು ನಾಗರಿಕರು ಪಾವತಿಸುವ ತೆರಿಗೆಯಿಂದ ಬರುತ್ತಿದೆ. ಸಂವಿಧಾನದ ಪ್ರಕಾರ, ಯಾವುದೇ ಮಹಿಳೆ ಯಾವುದೇ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ವತಂತ್ರಳು” ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳು ಆಯೋಜಿಸುವ ಚುನಾವಣಾ ರ‍್ಯಾಲಿಗಳಿಗೆ ಮಹಿಳೆಯರನ್ನು ತಡೆಯಲು ಪ್ರಯತ್ನಿಸುವ ಯಾವುದೇ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ಹೂಡುವುದಾಗಿ ಸುಳೆ ಎಚ್ಚರಿಸಿದ್ದಾರೆ. ಲಡ್ಕಿ ಬಹಿನ್ ಯೋಜನೆಯಡಿ ಮಹಿಳೆಯರಿಗೆ ಹಣ ಪಾವತಿಯನ್ನು ಸರ್ಕಾರ ಸ್ಥಗಿತಗೊಳಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

ಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...