Homeಕರ್ನಾಟಕಚುನಾವಣೆಗೆ ಕಾಂಗ್ರೆಸ್ ಸಿದ್ದತೆ: ರಾಜ್ಯದಲ್ಲಿ ಮಹಿಳಾ ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಪ್ರಿಯಾಂಕ ಗಾಂಧಿ

ಚುನಾವಣೆಗೆ ಕಾಂಗ್ರೆಸ್ ಸಿದ್ದತೆ: ರಾಜ್ಯದಲ್ಲಿ ಮಹಿಳಾ ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಪ್ರಿಯಾಂಕ ಗಾಂಧಿ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಪಕ್ಷವು ಭಾರಿ ಸಿದ್ದತೆಯನ್ನು ನಡೆಸುತ್ತಿದ್ದು, ಜನವರಿ 16 ರಂದು ಮಹಿಳಾ ಸಮಾವೇಶವನ್ನು ನಡೆಸಲಿದೆ. ಈ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಮಹಿಳಾ ಕಲ್ಯಾಣಕ್ಕಾಗಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಪಕ್ಷವೂ ಘೋಷಿಸಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ವಿವಿಧ ಪಂಚಾಯತ್ ಮತ್ತು ಸಹಕಾರಿ ಸಂಘಗಳ ಚುನಾವಣೆಗೆ ಸ್ಪರ್ಧಿಸಿದ್ದ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರತಿ ಬೂತ್ ಅಥವಾ ಪಂಚಾಯಿತಿಯಿಂದ 3-10 ಮಹಿಳೆಯರಿಗೆ ಕರೆ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂಬರುವ ಚುನಾವಣೆಗೆ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಹೊರತರಲು ಕಾಂಗ್ರೆಸ್ ನಿರ್ಧರಿಸಿದ್ದು, ಎಲ್ಲಾ ಮಹಿಳೆಯರು ಮತ್ತು ಮುಖಂಡರು ಜನವರಿ 15 ರೊಳಗೆ ಪ್ರಣಾಳಿಕೆಗೆ ತಮ್ಮ ಸಲಹೆಗಳನ್ನು ಸಲ್ಲಿಸಬಹುದು ಎಂದು ಡಿಕೆಶಿ ಹೇಳಿದ್ದಾರೆ.

ಮಹಿಳಾ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಮಹಿಳೆಯರ ಅಭ್ಯುದಯಕ್ಕಾಗಿ ಪಕ್ಷದ ಭರವಸೆಗಳನ್ನು ಪ್ರಿಯಾಂಕಾ ಗಾಂಧಿ ಘೋಷಿಸಲಿದ್ದಾರೆ ಎಂದು ಶಿವಕುಮಾರ್ ಹೇಳಿದ್ದಾರೆ.

ದೆಹಲಿಯ ಎಎಪಿ ಸರ್ಕಾರ ನೀಡಿದ ಮಾದರಿಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಉಚಿತ ಕೊಡುಗೆಗಳನ್ನು ಘೋಷಿಸುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕವು ಇಡೀ ದೇಶಕ್ಕೆ ಮಾದರಿಯಾಗಿದೆ. ಕರ್ನಾಟಕದ ಆರ್ಥಿಕ ಶಕ್ತಿ ಮತ್ತು ನೀತಿಗಳನ್ನು ದೆಹಲಿಯೊಂದಿಗೆ ಯಾರೂ ಹೋಲಿಸಲಾಗುವುದಿಲ್ಲ. ನಾವು ಮಹಿಳೆಯರಿಗಾಗಿ ಹಲವಾರು ಉತ್ತಮ ಯೋಜನೆಗಳನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಜೆಡಿಎಸ್ ಮುಖಂಡರನ್ನು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಳಿಸಿದ್ದಾರೆ. ಪಕ್ಷಕ್ಕೆ ಸೇರ್ಪಡೆಗೊಂಡವರಲ್ಲಿ ವಿಶ್ವನಾಥ್ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಕನಕಪುರದಿಂದ ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...