Homeಕರ್ನಾಟಕಕಾಂಗ್ರೆಸ್‌ನಿಂದ 4ನೇ ಪಟ್ಟಿ ಬಿಡುಗಡೆ: ಹು-ಧಾ ಸೆಂಟ್ರಲ್‌ನಿಂದ ಶೆಟ್ಟರ್ ಸ್ಪರ್ಧೆ

ಕಾಂಗ್ರೆಸ್‌ನಿಂದ 4ನೇ ಪಟ್ಟಿ ಬಿಡುಗಡೆ: ಹು-ಧಾ ಸೆಂಟ್ರಲ್‌ನಿಂದ ಶೆಟ್ಟರ್ ಸ್ಪರ್ಧೆ

- Advertisement -
- Advertisement -

2023ರ ರಾಜ್ಯ ವಿಧಾನಸಭಾ ಚುನಾವಣೆಯ ನಾಲ್ಕನೇ ಪಟ್ಟಿ ಇದೀಗ ಬಿಡುಗಡೆಯಾಗಿದ್ದು, ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈಗಾಗಲೇ ಕಾಂಗ್ರೆಸ್ 224 ಅಭ್ಯರ್ಥಿಗಳ ಪೈಕಿ 209 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ – ಜಗದೀಶ್ ಶೆಟ್ಟರ್

ಹರಿಹರ – ನಂದಿಗಾವಿ ಶ್ರೀನಿವಾಸ್

ಶ್ರವಣಬೆಳಗೊಳ – ಎಂ. ಎಸ್. ಗೋಪಾಲಸ್ವಾಮಿ

ಹುಬ್ಬಳ್ಳಿ-ಧಾರವಾಡ ಪಶ್ಚಿಮ – ದೀಪಕ್ ಚಿಂಚೋರೆ

ಚಿಕ್ಕಮಗಳೂರು – ಹೆಚ್‌. ಡಿ. ತಮ್ಮಯ್ಯ

ಲಿಂಗಸಗೂರು – ದುರ್ಗಪ್ಪ ಎಸ್. ಹೂಲಗೇರಿ

ಶಿಗ್ಗಾಂವಿ – ಮೊಹಮ್ಮದ್ ಯೂಸೂಫ್

ಕಾಂಗ್ರೆಸ್ ಪಕ್ಷ ಈ ವರೆಗೂ ಅಭ್ಯರ್ಥಿಗಳು ನಾಲ್ಕು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಟಿಕೆಟ್ ನಿರಾಕರಣೆ ಹಿನ್ನೆಲೆ ಕಾಂಗ್ರೆಸ್ ಸೇರ್ಪಡೆಯಾದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.

ಜಗದೀಶ್ ಶೆಟ್ಟರ್ ಅವರು ಈ ಕ್ಷೇತ್ರದಿಂದ 6 ಬಾರಿ ಗೆಲುವು ಸಾಧಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ 75,794 ಮತಗಳನ್ನು ಪಡೆಯುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಮಹೇಶ್ ನಲ್ವಾಡ್ ಅವರು 54,488 ಮತಗಳನ್ನು ಪಡೆದು 2ನೇ ಸ್ಥಾನ ಪಡೆದಿದ್ದರು. ಈಗ ಕಾಂಗ್ರೆಸ್ ಪಕ್ಷದಿಂದ ಜಗದೀಶ್ ಶೆಟ್ಟರ್ ಅವರು ಸ್ಪರ್ಧೆ ಮಾಡಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...