Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ...

ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಮಧ್ಯಪ್ರದೇಶದ ರಾಜ್‌ಗಢದಿಂದ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮತ್ತು ವಾರಣಾಸಿಯಿಂದ ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರನ್ನು ಕಣಕ್ಕಿಳಿಸಿದೆ.

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ್ ರೈ ಕಣಕ್ಕಿಳಿಯಲಿದ್ದಾರೆ. ಮಾಜಿ ಹಣಕಾಸು ಸಚಿವರ ಪುತ್ರ ಹಾಗೂ ಸಂಸದ ಕಾರ್ತಿ ಚಿದಂಬರಂ ಅವರನ್ನು ತಮಿಳುನಾಡಿನ ಶಿವಗಂಗಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಬಿಎಸ್‌ಪಿ ಮಾಜಿ ನಾಯಕ ಡ್ಯಾನಿಶ್ ಅಲಿ ಉತ್ತರಪ್ರದೇಶದ ಅಮ್ರೋಹಾದಿಂದ ಸ್ಪರ್ಧಿಸಲಿದ್ದಾರೆ. ಇಮ್ರಾನ್ ಮಸೂದ್ ಸಹರಾನ್‌ಪುರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಅಲೋಕ್ ಮಿಶ್ರಾ ಕಾನ್ಪುರದಿಂದ ಕಣಕ್ಕಿಳಿದಿದ್ದಾರೆ. ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ ಟಿಕೆಟ್ ನೀಡಲಾಗಿದೆ. ರಾಜಸ್ಥಾನದ ನಾಗೌರ್‌ ಕ್ಷೇತ್ರವನ್ನು ಮೈತ್ರಿಕೂಟದ ಲೋಕ ತಾಂತ್ರಿಕ್‌ ಪಾರ್ಟಿ (RLP) ಗೆ ನೀಡಲಾಗಿದೆ.

ಪಟ್ಟಿಯು ಅಸ್ಸಾಂ, ಅಂಡಮಾನ್, ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ, ಮಿಜೋರಾಂ, ರಾಜಸ್ಥಾನ, ಮಣಿಪುರ, ತಮಿಳುನಾಡು, ಉತ್ತರಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ಅಭ್ಯರ್ಥಿಗಳ ಹೆಸರನ್ನು ಒಳಗೊಂಡಿದೆ.

ಅಸ್ಸಾಂನ ಲಖೀಂಪುರದಿಂದ ಉದಯ್‌ ಶಂಖರ್‌, ಜಮ್ಮು ಮತ್ತು ಕಾಶ್ಮೀರದ ಉಧಂಪುರದಿಂದ ಹೊಸದಾಗಿ ಸೇರ್ಪಡೆಗೊಂಡ ನಾಯಕ ಲಾಲ್ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿದೆ. ವಿರುಧನಗರದಿಂದ ಮಾಣಿಕ್ಕಂ ಟ್ಯಾಗೋರ್ ಮತ್ತು ಕರೂರ್‌ನಿಂದ ಎಸ್‌ ಜೋತಿಮಣಿ ಅವರನ್ನು  ಕಾಂಗ್ರೆಸ್‌ ಕಣಕ್ಕಿಳಿಸಿದೆ.

ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಘೋಷಿಸಿಲ್ಲ. ಪ್ರಮುಖವಾಗಿ, ಸಮಾಜವಾದಿ ಪಕ್ಷದೊಂದಿಗೆ ಪಕ್ಷವು ಮೈತ್ರಿ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಎರಡು ದಿನಗಳ ಹಿಂದೆ ಗುರುವಾರ, ಕಾಂಗ್ರೆಸ್‌ ತನ್ನ 57 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಪಶ್ಚಿಮ ಬಂಗಾಳದ ಬಹರಂಪುರದಿಂದ ಅಧೀರ್ ರಂಜನ್ ಚೌಧರಿ, ಚಿಕ್ಕೋಡಿಯಿಂದ ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್‌ ನೀಡಲಾಗಿದೆ, ಗುಲ್ಬರ್ಗದಿಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮಾರ್ಚ್ 8ರಂದು ಬಿಡುಗಡೆಯಾದ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 39 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಿಸಿತ್ತು. ಅದರಲ್ಲಿ ರಾಹುಲ್ ಗಾಂಧಿ, ಡಿಕೆ ಸುರೇಶ್ ಮತ್ತು ಶಶಿ ತರೂರ್ ಟಿಕೆಟ್‌ ಪಡೆದುಕೊಂಡಿದ್ದರು. ಮಾರ್ಚ್ 12ರಂದು ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು. ಪಟ್ಟಿಯಲ್ಲಿ 43 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿತ್ತು.

 

 

ಇದನ್ನು ಓದಿ:ಲೋಕಸಭೆ ಚುನಾವಣೆ: ಜೆಡಿಎಸ್‌ಗೆ ಮೂರು ಕ್ಷೇತ್ರಗಳನ್ನು ಬಿಟ್ಟು ಕೊಟ್ಟ ಬಿಜೆಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪ| ತಾನು ನಿರ್ದೋಷಿ ಎಂದ ಬ್ರಿಜ್ ಭೂಷಣ್ ಸಿಂಗ್: ವಿಚಾರಣಾ ಹಂತ...

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ತಾನು ನಿರ್ದೋಷಿ ಎಂದು ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಂಗಳವಾರ...