Homeಕರ್ನಾಟಕಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

- Advertisement -
- Advertisement -

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ ಮಗ ಸಮರ್ಥ್ ಮಲ್ಲಿಕಾರ್ಜುನ್ ಮತ್ತು ಬಾಗಲಕೋಟೆಯಲ್ಲಿ ಮಾಜಿ ಸಚಿವ ದಿವಂಗತ ಹೆಚ್‌.ವೈ ಮೇಟಿ ಅವರ ಮಗ ಉಮೇಶ್ ಮೇಟಿಗೆ ಟಿಕೆಟ್ ನೀಡಲಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ (ಮುಸ್ಲಿಮರಿಗೆ) ಟಿಕೆಟ್ ನೀಡುವಂತೆ ವಸತಿ ಸಚಿವ ಝಮೀರ್‌ ಅಹ್ಮದ್ ಖಾನ್‌ ಸೇರಿದಂತೆ ಹಲವು ಮುಖಂಡರು ಬಿಗಿಪಟ್ಟು ಹಿಡಿದಿದ್ದರು. ಮತ್ತೊಂದೆಡೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಸೇರಿ ಹಲವರು, ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ, ಅವರ ಮೊಮ್ಮಗ ತೋಟಗಾರಿಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ ಮಗ ಸಮರ್ಥ್‌ಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಿದ್ದರು. ಹೀಗಾಗಿ, ಈ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು.

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶನಿವಾರವೂ ಸರಣಿ ಸಭೆಗಳನ್ನು ನಡೆಸಿದ್ದು, ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವಲ್ಲಿ ಸಫಲರಾಗಿದ್ದಾರೆ.

ಬಾಗಲಕೋಟೆಯ ಟಿಕೆಟ್‌ಗಾಗಿ ಹೆಚ್‌.ವೈ ಮೇಟಿ ಅವರ ಕುಟುಂಬ ಸದಸ್ಯರು ಪೈಪೋಟಿ ನಡೆಸಿದ್ದರು ಎನ್ನಲಾಗಿದೆ. ಮೇಟಿಯವರ ಮಗಳು ಬಾಯಕ್ಕ ಅವರು ಟಿಕೆಟ್ ತನಗೆ ನೀಡುವಂತೆ ಹಠ ಹಿಡಿದಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮೇಟಿ ಅವರ ಮಕ್ಕಳ ಜೊತೆ ಸತತವಾಗಿ ಚರ್ಚೆ ನಡೆಸಿ, ಅಂತಿಮವಾಗಿ ಉಮೇಶ್‌ ಮೇಟಿಗೆ ಟಿಕೆಟ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅಥವಾ ಮುಸ್ಲಿಮರಿಗೆ ಟಿಕೆಟ್ ನೀಡದೆ, ಮತ್ತೆ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ 50 ಸಾವಿರ ಮತಗಳ ಅಂತರದಿಂದ ಸೋಲಿಸುತ್ತೇವೆ ಎಂದು ಮುಸ್ಲಿಂ ಮುಖಂಡರು ಈಗಾಗಲೇ ಮೀಸೆ ತಿರುವಿ, ತೊಡೆ ತಟ್ಟಿ ಸವಾಲು ಹಾಕಿದ್ದಾರೆ. ಅನೇಕ ಹಿರಿಯ ಮುಸ್ಲಿಂ ಕಾಂಗ್ರೆಸ್ ಮುಖಂಡರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಇವು ಯಾವುದನ್ನೂ ಲೆಕ್ಕಿಸದೆ ಮತ್ತೆ ಶಾಮನೂರು ಕುಟುಂಬಕ್ಕೇ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಇದು ಚುನಾವಣೆಯಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

ವರದಿಗಳ ಪ್ರಕಾರ, ಯಾವುದೇ ಶಾಸಕ ಮೃತಪಟ್ಟಾಗ ತೆರವಾಗುವ ಸ್ಥಾನಕ್ಕೆ ಉಪಚುನಾವಣೆ ನಡೆಯುವಾಗ, ಅವರ ಕುಟುಂಬಕ್ಕೆ ಟಿಕೆಟ್ ಕೊಡುವುದು ವಾಡಿಕೆ. ಅನುಕಂಪದ ಆಧಾರದ ಮೇಲೆ ಮತಗಳನ್ನು ಗಳಿಸುವುದು ಇದರ ಹಿಂದಿನ ಉದ್ದೇಶ. ಹಾಗಾಗಿ, ಶಾಮನೂರು ಶಿವಶಂಕರಪ್ಪ ಮತ್ತು ಹೆಚ್‌.ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಗಳ ಟಿಕೆಟ್‌ ಅನ್ನು ಅವರ ಕುಟುಂಬಕ್ಕೇ ನೀಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...