Homeಮುಖಪುಟಕಂಗಾನಾ ಮುಂಬೈಗೆ ಮರಳಿದ್ದಾರೆಂದು ಎನ್‌‌ಸಿಬಿಗೆ ನೆನಪಿಸಿದ ಕಾಂಗ್ರೆಸ್- ಕಾರಣವೇನು ಗೊತ್ತೇ?

ಕಂಗಾನಾ ಮುಂಬೈಗೆ ಮರಳಿದ್ದಾರೆಂದು ಎನ್‌‌ಸಿಬಿಗೆ ನೆನಪಿಸಿದ ಕಾಂಗ್ರೆಸ್- ಕಾರಣವೇನು ಗೊತ್ತೇ?

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಮಾದಕವಸ್ತು ಸಂಬಂಧಿತ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ಎನ್‌ಸಿಬಿ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿತ್ತು.

- Advertisement -
- Advertisement -

ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಬಾಲಿವುಡ್‌ ಡ್ರಗ್‌ ಮಾಫಿಯಾ ಪ್ರಕರಣ ಕುರಿತು ಮಾದಕವಸ್ತು ವಿರೋಧಿ ನಿಯಂತ್ರಣ ವಿಭಾಗ(ಎನ್‌ಸಿಬಿ) ತನಿಖೆ ನಡೆಸುತ್ತಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಸಚಿನ್ ಸಾವಂತ್‌, ಕಂಗನಾ ರಾಣಾವತ್‌ ಮರಳಿ ಮುಂಬೈಗೆ ಬಂದಿದ್ದಾರೆಂದು ಎನ್‌ಸಿಬಿಗೆ ನೆನಪಿಸಿದ್ದು, ನಟಿ ಈ ಹಿಂದೆ ತನಗೆ ಚಲನಚಿತ್ರೋದ್ಯಮದಲ್ಲಿನ ಡ್ರಗ್ಸ್‌ ಬಗೆಗಿನ ಮಾಹಿತಿ ಇದೆ ಎಂದು ಹೇಳುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಸಚಿನ್ ಸಾವಂತ್, ಕಂಗನಾ ಅವರನ್ನು ವಿಚಾರಣೆಗೆ ಯಾವಾಗ ಕರೆಸಿಕೊಳ್ಳುತ್ತೀರಿ ಎಂದು ಎನ್‌ಸಿಬಿಯನ್ನು ಪ್ರಶ್ನಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಮಾದಕವಸ್ತು ಸಂಬಂಧಿತ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ಎನ್‌ಸಿಬಿ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿತ್ತು. ಅಲ್ಲದೆ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವಾರು ಜನರನ್ನು ಎನ್‌ಸಿಬಿ ಇದುವರೆಗೂ ವಿಚಾರಣೆಗೆ ಕರೆಸಿಕೊಂಡಿದೆ. ಸಚಿನ್ ಸಾವಂತ್‌ ಟ್ವೀಟ್ ಮಾಡಿರುವ ವಿಡಿಯೋ ಈ ಹಿಂದೆಯೆ ವೈರಲ್ ಆಗಿತ್ತು. ಅದರಲ್ಲಿ ನಟಿ ಕಂಗನಾ ರಾಣಾವತ್‌ ತಾನು “ಮಾದಕ ವ್ಯಸನಿ” ಆಗಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಸಚಿನ್ ಸಾವಂತ್‌ ತನ್ನ ಟ್ವೀಟ್‌ನಲ್ಲಿ, “ಆತ್ಮೀಯ ಎನ್‌ಸಿಬಿ, ಕಂಗನಾ ರಾಣಾವತ್‌ ಬಂದಿದ್ದಾರೆ. ಈ ವಿಡಿಯೋಗಾಗಿ ಅವರನ್ನು ನೀವು ಯಾವಾಗ ವಿಚಾರಣೆ ನಡೆಸುತ್ತೀರಿ?. ಬಾಲಿವುಡ್‌ನಲ್ಲಿರುವ ಡ್ರಗ್‌ ಮಾಫಿಯಾದ ಬಗ್ಗೆ ಮಾಹಿತಿ ನೀಡುತ್ತೇನೆ ಎಂದಾಗ ಮೋದಿ ಸರ್ಕಾರ ಅವರಿಗೆ ವೈ ಕೆಟಗಿರಿಯ ಭದ್ರತೆ ನೀಡಿತು. ಅದನ್ನು ಕಂಗನಾ ಇನ್ನೂ ಅನುಭವಿಸುತ್ತಿದ್ದಾರೆ. ಆದರೆ ಅವರು ಅಪರಾಧದ ಮಾಹಿತಿಯನ್ನು ಈಗಲೂ ಮರೆ ಮಾಚುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿ ಕಂಗಾನಾರನ್ನು ಝಾನ್ಸಿಯ ರಾಣಿ ಎಂದು ಕರೆದು, ಮಹಾರಾಷ್ಟ್ರ ಸರ್ಕಾರ ಅವರು ಪೊಲೀಸರಿಗೆ ಮಾಹಿತಿ ನೀಡಲು ಬಿಡುತ್ತಿಲ್ಲ ಎಂದು ಆರೋಪಿಸಿತ್ತು. ಈಗ ಅವರು ಆ ಮಾಹಿತಿಯನ್ನು ಎನ್‌ಸಿಬೆಗೆ ಮಾಹಿತಿ ನೀಡಲು ವಿನಂತಿಸುತ್ತಾರೆಯೆ? ಮಹಾರಾಷ್ಟ್ರವನ್ನು ದೂಷಿಸಿದ್ದಕ್ಕಾಗಿ ಬಿಜೆಪಿ ಕ್ಷಮೆಯಾಚಿಸುತ್ತದೆಯೆ?” ಎಂದು ಸಚಿನ್ ಸಾವಂತ್‌ ಪ್ರಶ್ನಿಸಿದ್ದಾರೆ.

ಕಂಗನಾ ರಾಣಾವತ್‌, ತಾನು ಮುಂಬೈಗೆ ಮರಳಿ ಮುಂಬಾ ದೇವಿ ಹಾಗೂ ಸಿದ್ದಿ ವಿನಾಯಕ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದನ್ನು ಫೋಟೋ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...