Homeಮುಖಪುಟಚಂದ್ರಯಾನ–3ರ ವಿಜ್ಞಾನಿಗಳಿಗೆ  17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ-ಕಾಂಗ್ರೆಸ್ ಆರೋಪ

ಚಂದ್ರಯಾನ–3ರ ವಿಜ್ಞಾನಿಗಳಿಗೆ  17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ-ಕಾಂಗ್ರೆಸ್ ಆರೋಪ

- Advertisement -
- Advertisement -

ಚಂದ್ರಯಾನ–3ರ ವಿಜ್ಞಾನಿಗಳಿಗೆ  ಕಳೆದ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಈ ಕುರಿತು ‍X(ಟ್ವಿಟರ್) ನಲ್ಲಿ ಬರೆದುಕೊಂಡಿದ್ದು,  ರಾಂಚಿ ಮೂಲದ ಹಿಂದೂಸ್ತಾನ್ ಎಂಜಿನಿಯರಿಂಗ್ ಕಾರ್ಪೊರೇಷನ್ (ಎಚ್‌ಇಸಿ) ಚಂದ್ರಯಾನ–3ರ ಉಡ್ಡಯನ ವಾಹನ ತಯಾರಿಸಿದ್ದು, ಇದರ ಎಂಜಿನಿಯರ್‌ಗಳಿಗೆ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್ ಮುಂದಾಳತ್ವದಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದೇವೆ. ಸೋಮನಾಥ್ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.ಆದರೆ ಕಪಟತನ ತೋರಿರುವ ಬಗ್ಗೆ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಲ್ಯಾಂಡಿಂಗ್ ನಂತರ ನೀವು ಪರದೆಯ ಮೇಲೆ ತ್ವರಿತವಾಗಿ ಬಂದು ಕ್ರೆಡಿಟ್ ತೆಗೆದುಕೊಂಡಿದ್ದೀರಿ. ಆದರೆ ವಿಜ್ಞಾನಿಗಳು ಮತ್ತು ಇಸ್ರೋವನ್ನು ಬೆಂಬಲಿಸುವಲ್ಲಿ ನಿಮ್ಮ ಸರ್ಕಾರವು ಏಕೆ ವಿಫಲವಾಗಿದೆ ಎಂದು ಪ್ರಶ್ನಿಸಿದ್ದಾರೆ.

ಚಂದ್ರಯಾನ 3ರಲ್ಲಿ ಕೆಲಸ ಮಾಡಿದ HEC ಇಂಜಿನಿಯರ್‌ಗಳು ಕಳೆದ 17 ತಿಂಗಳಿನಿಂದ ಸಂಬಳವನ್ನು ಏಕೆ ಸ್ವೀಕರಿಸಲಿಲ್ಲ ಎಂದು ವೇಣುಗೋಪಾಲ್ ಪ್ರಶ್ನಿಸಿದ್ದಾರೆ.

ಚಂದ್ರಯಾನ–3ರ ಬಜೆಟ್‌ನ್ನು ಶೇ. 32ರಷ್ಟು ಕಡಿತಗೊಳಿಸಿದ್ದೇಕೆ ಎಂದು ಪ್ರಶ್ನಿಸಿರುವ ಅವರು, ಇವರೆಲ್ಲಾ ದೇಶದ ಹೀರೋಗಳು. ಅವರು ವಿಶ್ವದರ್ಜೆಯ ಬಾಹ್ಯಾಕಾಶ ಯೋಜನೆಯನ್ನು ಮಾಡಿದ್ದಾರೆ. ಆದರೆ ಅವರ ಪ್ರತಿಭೆ ಮತ್ತು ಶ್ರಮದ ಬಗ್ಗೆ ನಿಮಗೆ ಯಾವುದೇ ಗೌರವವಿಲ್ಲ ಎಂದು ಪ್ರಧಾನಿ ಮೋದಿಯವರನ್ನು ವೇಣುಗೋಪಲ್ ಪ್ರಶ್ನಿಸಿದ್ದಾರೆ.

ಇದಲ್ಲದೆ ನಿನ್ನೆ ಇಸ್ರೋ ವಿಜ್ಞಾನಿಗಳು 17 ತಿಂಗಳಿನಿಂದ ತಮ್ಮ ಸಂಬಳವನ್ನು ಪಡೆದಿಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರೋಪಿಸಿದ್ದರು. ಇಸ್ರೋ ವಿಜ್ಞಾನಿಗಳ ವೇತನದ ಬಗ್ಗೆ  ಪ್ರಧಾನಿ ಗಮನಿಸಬೇಕು ಎಂದು ಹೇಳಿದ್ದಾರೆ.

 

ಇದನ್ನು ಓದಿ: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಟ್ರಾನ್ಸ್‌ಜಂಡರ್‌ಗಳಿಗೆ ಮೀಸಲಾತಿ ಒದಗಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...