Homeಮುಖಪುಟಚುನಾವಣಾ ಆಯೋಗದ ಹೇಳಿಕೆಗೆ ಅಸಮಾಧಾನ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಚುನಾವಣಾ ಆಯೋಗದ ಹೇಳಿಕೆಗೆ ಅಸಮಾಧಾನ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೊಟ್ಟಿದ್ದ ದೂರಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಗೆ ಕಾಂಗ್ರೆಸ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್‌ ನೀಡಿದ್ದ ದೂರಿಗೆ ಮಂಗಳವಾರ (ಅ.29) ಉತ್ತರಿಸಿದ್ದ ಚುನಾವಣಾ ಆಯೋಗ, “ಪಕ್ಷವು ಚುನಾವಣಾ ಫಲಿತಾಂಶ ತನ್ನ ವಿರುದ್ಧ ಇರುವ ಕಾರಣಕ್ಕೆ ಆಧಾರರಹಿತ ಆರೋಪಗಳನ್ನು ಮಾಡಿದೆ” ಎಂದು ಟೀಕಿಸಿತ್ತು. ಅಲ್ಲದೆ, ಆಧಾರರಹಿತ ಆರೋಪಗಳನ್ನು ಮಾಡದಂತೆ ಎಚ್ಚರಿಕೆ ನೀಡಿತ್ತು.

“ಕಾಂಗ್ರೆಸ್ ಮಾಡಿದ್ದ ಆರೋಪಗಳನ್ನು ಬೇಜವಾಬ್ದಾರಿ ಎಂದಿತ್ತು. ಹರಿಯಾಣದಲ್ಲಿ ಚುನಾವಣಾ ಪ್ರಕ್ರಿಯೆಯು ದೋಷರಹಿತವಾಗಿ ನಡೆದಿದೆ. ಕ್ಷುಲ್ಲಕ ದೂರುಗಳ ಪ್ರವೃತ್ತಿಯನ್ನು ನಿಲ್ಲಿಸಿ” ಎಂದು ಹೇಳಿತ್ತು.

ಈ ಪ್ರತಿಕ್ರಿಯೆ ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕಾಂಗ್ರೆಸ್, “ಪಕ್ಷವು ಚುನಾವಣಾ ಆಯೋಗವನ್ನು ಗೌರವಿಸುತ್ತದೆ. ಪತ್ರ ಸಂವಹನವು ವಿಧಾನಸಭಾ ಚುನಾವಣೆಯಲ್ಲಿನ ಸಮಸ್ಯೆಗಳಿಗೆ ಸೀಮಿತವಾಗಿ ಮಾಡಲಾಗಿತ್ತು. ಪ್ರಸಕ್ತ ಚುನಾವಣಾ ಆಯೋಗದ ಹೇಳಿಕೆಗಳು, ಆಯೋಗವು ತನ್ನ ತಟಸ್ಥ ನಿಲುವಿನಿಂದ ದೂರ ಉಳಿದಿರುವಂತೆ ಕಂಡು ಬರುತ್ತಿದೆ. ಆ ಮೂಲಕ ತನ್ನ ಕರ್ತವ್ಯವನ್ನು ಆಯೋಗವು ಮರೆತಿದೆ” ಎಂದಿದೆ.

ಚುನಾವಣಾ ಆಯೋಗವು ನೀಡಿರುವ ಪ್ರತಿಕ್ರಿಯೆಯಲ್ಲಿ ಬಳಸಿರುವ ಭಾಷೆ ಮತ್ತು ಪಕ್ಷದ ವಿರುದ್ಧ ಮಾಡಿದ ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್, “ಈ ವಿಚಾರದಲ್ಲಿ ಚುನಾವಣಾ ಆಯೋಗ ತನಗೇ ತಾನೇ ಕ್ಲೀನ್ ಚಿಟ್ ನೀಡಿದರೂ ಆಶ್ಚರ್ಯವಿಲ್ಲ” ಎಂದು ವ್ಯಂಗ್ಯವಾಡಿದೆ. ಚುನಾವಣಾ ಆಯೋಗವು ಕಾನೂನಿನ ಮೂಲಕ ಸ್ಥಾಪಿತವಾದ ಒಂದು ಸ್ವತಂತ್ರ ಸಂಸ್ಥೆ ಎಂಬುವುದನ್ನು ಮರೆಯಬಾರದು. ಆಯೋಗಕ್ಕೆ ಯಾರು ನಿರ್ದೇಶನ ನೀಡುತ್ತಿದ್ದಾರೋ ಗೊತ್ತಿಲ್ಲ. ಆದರೆ, ಇತ್ತೀಚೆಗೆ ಪಕ್ಷದೊಂದಿಗೆ ಅದರ ಸಂವಹನ ಸರಿಯಾಗಿ ಇಲ್ಲ. ನಮಗೆ ಸರಿಯಾದ ಪ್ರತಿಕ್ರಿಯೆ ಸಿಗದಿದ್ದರೆ ಕಾನೂನು ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ಸಿಪಿಐ(ಎಂ) ಸಂಸದರಿಗೆ ‘ಫ್ಯಾಸಿಸಂ ವಿರೋಧಿ’ ಸಭೆಗೆ ತೆರಳಲು ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...