Homeಮುಖಪುಟನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ 'ಹೊಸ ವರ್ಷದ ಕ್ರೂರ ಉಡುಗೊರೆ' ಎಂದ...

ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

- Advertisement -
- Advertisement -

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ)ಯೋಜನೆಯಡಿಲ್ಲಿನ ಕಾರ್ಮಿಕರ ಪಾವತಿಯನ್ನು ಇನ್ನು ಮುಂದೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ( (ABPS)) ಮೂಲಕವೇ ಮಾಡಲು ನಿರ್ಧರಿಸಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರ ‘ಕ್ರೂರ ಹೊಸ ವರ್ಷದ ಉಡುಗೊರೆ’ ಎಂದು ಕಾಂಗ್ರೆಸ್ ಕರೆದಿದ್ದು, ಇದು ಕೋಟಿಗಟ್ಟಲೆ ಬಡವರನ್ನು ಮತ್ತು ಅಂಚಿನಲ್ಲಿರುವ ನಾಗರಿಕರನ್ನು ಮೂಲಭೂತ ಆದಾಯವನ್ನು ಗಳಿಸುವುದರಿಂದ ಹೊರಗಿಡುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು ಆಧಾರ್-ಆಧಾರಿತ ಪಾವತಿ ವ್ಯವಸ್ಥೆಯನ್ನು (ABPS) ಜಾರಿಗೊಳಿಸಲು ಡಿ.31ರ ಗಡುವನ್ನು ವಿಸ್ತರಿಸಿಲ್ಲ. ಕಾರ್ಮಿಕರ ಆಧಾರ್ ವಿವರಗಳನ್ನು ಉದ್ಯೋಗ ಕಾರ್ಡ್‌ಗಳಿಗೆ ಜೋಡನೆ ಮಾಡಬೇಕಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಜೈರಾಮ್ ರಮೇಶ್, ಮೋದಿ ಸರ್ಕಾರವು ತಂತ್ರಜ್ಞಾನದ ವಿನಾಶಕಾರಿ ಪ್ರಯೋಗಗಳನ್ನು ಮುಂದುವರೆಸುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಾರ್ವಜನಿಕ ಕೆಲಸಗಳ ಮೂಲಕ ಮೂಲ ಆದಾಯವನ್ನು ಗಳಿಸುವುದರಿಂದ ಕೋಟಿಗಟ್ಟಲೆ ಬಡ ಮತ್ತು ಅಂಚಿನಲ್ಲಿರುವ ಭಾರತೀಯರನ್ನು ಹೊರಗಿಡುವ ‘ಪ್ರಧಾನ ಮಂತ್ರಿಯ ಕ್ರೂರ ಹೊಸ ವರ್ಷದ ಉಡುಗೊರೆ’ಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2023ರ ಆ.30ರಿಂದ ತನ್ನ ಬೇಡಿಕೆಗಳನ್ನು ಪುನರುಚ್ಚರಿಸುತ್ತದೆ. ಮೋದಿ ಸರ್ಕಾರವು ತಂತ್ರಜ್ಞಾನವನ್ನು ಶಸ್ತ್ರಾಸ್ತ್ರಗೊಳಿಸುವುದನ್ನು ನಿಲ್ಲಿಸಬೇಕು. ವಿಶೇಷವಾಗಿ ಆಧಾರ್ ಹೆಸರಿನಲ್ಲಿ ದುರ್ಬಲ ಭಾರತೀಯರಿಗೆ ಸಾಮಾಜಿಕ ಕಲ್ಯಾಣ ಪ್ರಯೋಜನಗಳನ್ನು ನಿರಾಕರಿಸುವುದನ್ನು ನಿಲ್ಲಿಸಬೇಕು, ವಿಳಂಬಿತ ವೇತನ ಪಾವತಿಗಳನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

25.69 ಕೋಟಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿದ್ದು, ಅದರಲ್ಲಿ 14.33 ಕೋಟಿ ಸಕ್ರಿಯ ಕೆಲಸಗಾರರೆಂದು ಪರಿಗಣಿಸಲಾಗಿದೆ ಮತ್ತು ಇದರಲ್ಲಿ ಕ್ರಮವಾಗಿ ಶೇ.34.8 (8.9 ಕೋಟಿ) ಮತ್ತು ಶೇ.12.7 (1.8 ಕೋಟಿ) ಎಬಿಪಿಎಸ್‌ಗೆ ಅನರ್ಹರಾಗಿದ್ದಾರೆ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರು ಎಬಿಪಿಎಸ್‌ಗೆ ಅರ್ಹರಲ್ಲ ಎಂಬ ಕಾರಣಕ್ಕೆ ಯಾವುದೇ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗುವುದಿಲ್ಲ ಎಂಬ 2023ರ ಸಚಿವಾಲಯದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಜೈರಾಮ್ ರಮೇಶ್,  ಏಪ್ರಿಲ್ 2022ರಿಂದ 7.6 ಕೋಟಿ ಕಾರ್ಮಿಕರ ಉದ್ಯೋಗ ಕಾರ್ಡ್‌ಗಳನ್ನು ಅಳಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ 1.9 ಕೋಟಿ ಕಾರ್ಡ್‌ಗಳನ್ನು ಅಳಿಸಲಾಗಿದೆ ಎಂದು ಹೇಳಿದ್ದಾರೆ.

ಆಧಾರ್ ದೃಢೀಕರಣ ಮತ್ತು ಎಬಿಪಿಎಸ್‌ನ್ನು ಜಾರಿಗೊಳಿಸಲು ಮೋದಿ ಸರ್ಕಾರದ ಆತುರವು ಗಮನಾರ್ಹ ಸಂಖ್ಯೆಯ ಕಾರ್ಡ್‌ಗಳ ಅಳಿಸುವಿಕೆಗೆ ಕಾರಣವಾಗಿದೆ ಎಂದು ಪರಿಶೀಲನೆಯು ತೋರಿಸಿದೆ. ವಿವಿಧ ಪಾಲುದಾರರು ವೇತನ ಪಾವತಿಗೆ ಎಬಿಪಿಎಸ್‌ನ್ನು ಅತ್ಯುತ್ತಮ ಮಾರ್ಗವೆಂದು ಕಂಡುಕೊಂಡಿದ್ದಾರೆ ಎಂಬ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಮೇಶ್, ಈ ಪಾಲುದಾರರು ಯಾರು ಮತ್ತು ಯಾವಾಗ ಈ ಸಮಾಲೋಚನೆಗಳನ್ನು ನಡೆಸಲಾಯಿತು ಎಂಬುದನ್ನು ಸ್ಪಷ್ಟಪಡಿಸಲು ಸಚಿವಾಲಯವನ್ನು ಕೇಳಿದರು.  ಎಬಿಪಿಎಸ್‌ನಿಂದ ಪಾವತಿ ದಕ್ಷತೆಯ ಹೆಚ್ಚಳದ ಕುರಿತ ಸಚಿವಾಲಯದ ಸಮರ್ಥನೆಯು ಆಧಾರರಹಿತವಾಗಿ ಉಳಿದಿವೆ ಎಂದು ಹೇಳಿದ್ದಾರೆ.

ಹೊಸ ವರ್ಷದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯೋಜನೆಯಡಿಲ್ಲಿನ ಎಲ್ಲ ವೇತನಗಳನ್ನು ಆಧಾರ್ ಆಧರಿತ ಪಾವತಿ ವ್ಯವಸ್ಥೆ (ಎಬಿಪಿಎಸ್)ಯ ಮೂಲಕವೇ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಕಾರ್ಮಿಕರ ಆಧಾರ್ ವಿವರಗಳನ್ನು ಅವರ ಉದ್ಯೋಗ ಕಾರ್ಡ್‌ಗಳ ಜೊತೆಗೆ ಜೋಡಣೆಗೊಳಿಸುವುದು ಅಗತ್ಯವಾಗಿದೆ. ಎಬಿಪಿಎಸ್‌ನ್ನು ಕಡ್ಡಾಯಗೊಳಿಸಿದ 5ನೇ ಗಡುವು 2023ರ ಡಿ.31ರಂದು ಅಂತ್ಯಗೊಂಡಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...