Homeಮುಖಪುಟಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...

ಕೋಮುವಾದಿ ಸಂಹಿತೆ ಎಂಬ ಹೇಳಿಕೆ ಅಂಬೇಡ್ಕರ್‌ಗೆ ಮಾಡಿದ ಅವಮಾನ : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

- Advertisement -
- Advertisement -

“ದೇಶದಲ್ಲಿ ‘ಜಾತ್ಯತೀತ ನಾಗರಿಕ ಸಂಹಿತೆ’ ಜಾರಿಗೊಳಿಸುವ ಅಗತ್ಯವಿದೆ. ಈಗ ಇರುವ ನಾಗರಿಕ ಸಂಹಿತೆ ‘ಕೋಮುವಾದಿ ಮತ್ತು ತಾರತಮ್ಯ’ ಸ್ವರೂಪದಿಂದ ಕೂಡಿದೆ” ಎಂದು ಪ್ರಧಾನಿ ನರೇಂದ್ರ ಗುರುವಾರ ತನ್ನ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ್ದಾರೆ. ಈ ಮೂಲಕ ‘ಸಮಾನ ನಾಗರಿಕ ಸಂಹಿತೆ’ ಜಾರಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿಯ ಈ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಸಂವಿಧಾನ ಶಿಲ್ಪಿ ಡಾ.ಬಿಆರ್‌ ಅಂಬೇಡ್ಕರ್ ಅವರಿಗೆ ಮಾಡಿರುವ ದೊಡ್ಡ ಅವಮಾನ ಎಂದಿದೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ “ಜೈವಿಕವಲ್ಲದ ಪ್ರಧಾನಿಯ ಇತಿಹಾಸವನ್ನು ತಿರುಚುವ, ಕುಚೇಷ್ಟೆ ಮಾಡುವ ಹಾಗೂ ಕಳಂಕ ತರುವ ಸಾಮರ್ಥ್ಯಕ್ಕೆ ಗಡಿ ಎಂಬುವುದೇ ಇಲ್ಲ. ಅದು ಇಂದು ಕೆಂಪು ಕೋಟೆಯ ಮೇಲಿಂದ ಸಂಪೂರ್ಣವಾಗಿ ಅನಾವರಣಗೊಂಡಿದೆ. ನಾವು ಇಲ್ಲಿಯವರೆಗೆ ಕೋಮುವಾದಿ ನಾಗರಿಕ ಸಂಹಿತೆಯನ್ನು ಹೊಂದಿದ್ದೆವು ಎಂಬುವುದು ಅಂಬೇಡ್ಕರ್ ಅವರಿಗೆ ಮಾಡುವ ದೊಡ್ಡ ಅವಮಾನವಾಗಿದೆ. 1950ರ ಮಧ್ಯಭಾಗದಲ್ಲಿ ನೈಜವಾಗಿ ಹೊರ ಹೊಮ್ಮಿದ್ದ ಹಿಂದೂ ವೈಯಕ್ತಿಕ ಕಾನೂನುಗಳಲ್ಲಿ ಸುಧಾರಣೆ ತಂದ ಮಹಾನ್ ದಾರ್ಶನಿಕರವರು. ಈ ಸುಧಾರಣೆಗಳನ್ನು ಆರೆಸ್ಸೆಸ್ ಹಾಗೂ ಜನಸಂಘ ತೀವ್ರವಾಗಿ ವಿರೋಧಿಸಿದ್ದವು” ಎಂದು ಹೇಳಿದ್ದಾರೆ.

ಜೈರಮೇಶ್ ಆಗಸ್ಟ್ 31, 2018 ರ ಕೌಟುಂಬಿಕ ಕಾನೂನಿನ ಸುಧಾರಣೆಯ ಕುರಿತಾದ 21ನೇ ಕಾನೂನು ಆಯೋಗದ ಸಮಾಲೋಚನಾ ಪತ್ರವನ್ನು ಉಲ್ಲೇಖಿಸಿದ್ದು, ಆಯೋಗವು ಪೂರ್ಣಪ್ರಮಾಣದ ಸಮಾನ ನಾಗರಿಕ ಸಂಹಿತೆಯ ಜಾರಿಯ ವಿರುದ್ಧ ವಾದ ಮಂಡಿಸಿದೆ ಎಂಬುವುದರತ್ತ ಬೊಟ್ಟು ಮಾಡಿದ್ದಾರೆ.

“ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಆಚರಿಸಬಹುದು ಮತ್ತು ಆಚರಿಸಬೇಕು. ನಿರ್ದಿಷ್ಟ ಗುಂಪುಗಳು ಅಥವಾ ಸಮಾಜದ ದುರ್ಬಲ ವರ್ಗಗಳು ಈ ಪ್ರಕ್ರಿಯೆಯಲ್ಲಿ ಅನನುಕೂಲತೆಯನ್ನು ಹೊಂದಿರಬಾರದು. ಈ ಸಂಘರ್ಷದ ಪರಿಹಾರವು ಎಲ್ಲಾ ಭಿನ್ನಾಭಿಪ್ರಾಯಗಳ ನಿರ್ಮೂಲನೆ ಎಂದಲ್ಲ. ಆದ್ದರಿಂದ ಈ ಹಂತದಲ್ಲಿ ಅಗತ್ಯವೂ ಅಲ್ಲದ ಮತ್ತು ಅಪೇಕ್ಷಣೀಯವೂ ಅಲ್ಲದ ಏಕರೂಪದ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಬದಲು ತಾರತಮ್ಯದಿಂದ ಕೂಡಿರುವ ಕಾನೂನುಗಳನ್ನು ಸರಿಪಡಿಸಬೇಕು. ಹೆಚ್ಚಿನ ದೇಶಗಳು ಭಿನ್ನಾಭಿಪ್ರಾಯಗಳನ್ನು ಗುರುತಿಸುವತ್ತ ಸಾಗುತ್ತಿವೆ. ವಿವಿದತೆಯು ತಾರತಮ್ಯವನ್ನು ಸೂಚಿಸುವುದಿಲ್ಲ, ಅದು ದೃಢವಾದ ಪ್ರಜಾಪ್ರಭುತ್ವವನ್ನು ಸೂಚಿಸುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ 1989 ರಿಂದ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ. ಈ ಬಾರಿ ಅದನ್ನೂ ಜಾರಿಗೊಳಿಸಲು ಬಿಜೆಪಿ ಮುಂದಾಗಿದೆ. ಆದರೆ, ಕೇಂದ್ರದಲ್ಲಿ ಬಿಜೆಪಿ ಬಹುಮತದ ಕೊರತೆಯಿದ್ದು, ಟಿಡಿಪಿ ಮತ್ತು ಜೆಡಿಯು ಬಲದಿಂದ ಎನ್‌ಡಿಎ ಸರ್ಕಾರ ಕಟ್ಟಿದೆ. ಹಾಗಾಗಿ, ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಸಾಧ್ಯವಾಗುತದಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಸಿಎಎ ವಿರೋಧಿ ಪ್ರತಿಭಟನೆಗಳ ಕೇಂದ್ರಬಿಂದು ಅಸ್ಸಾಂನಲ್ಲಿ ಪೌರತ್ವ ಪಡೆದ ಮೊದಲನೇ ಅರ್ಜಿದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...