Homeಮುಖಪುಟ'ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ' : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

- Advertisement -
- Advertisement -

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ನಿರ್ಲಜ್ಜ ಸಮರ್ಥನೆ’ ಎಂದಿದೆ.

ಇಸ್ರೇಲ್ ರಾಷ್ಟ್ರದ ರಚನೆಯ ಬಗ್ಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಹೊಂದಿದ್ದ ಅಭಿಪ್ರಾಯಗಳನ್ನು ಉಲ್ಲೇಖಿಸಿದ ಕಾಂಗ್ರೆಸ್, ಈ ಸಂಬಂಧ ಭೌತವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೈನ್ ಅವರೊಂದಿಗೆ ನೆಹರೂ ನಡೆಸಿದ್ದ ಪತ್ರವ್ಯವಹಾರವನ್ನೂ ಕೂಡ ನೆನಪಿಸಿದೆ.

ಬುಧವಾರ (ಫೆ.25) ನೆಸೆಟ್‌ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಗಾಝಾ ಶಾಂತಿ ಉಪಕ್ರಮವು ಈ ಪ್ರದೇಶದಲ್ಲಿ ನ್ಯಾಯಯುತ ಮತ್ತು ಸುಸ್ಥಿರ ಶಾಂತಿಯತ್ತ ಸಾಗುವ ಒಂದು ಹಾದಿಯಾಗಿದೆ ಎಂದು ಹೇಳಿದ್ದಾರೆ. ಇಸ್ರೇಲ್‌ನೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಮೋದಿ, ಭಯೋತ್ಪಾದನೆಯ ವಿರುದ್ಧದ ಭಾರತದ ದೃಢ ನಿಲುವನ್ನು ಒತ್ತಿ ಹೇಳಿದ್ದಾರೆ.

“2023ರ ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರಿಗಾಗಿ ಮತ್ತು ಜೀವನವನ್ನೇ ಕಳೆದುಕೊಂಡು ಕಂಗಾಲಾದ ಪ್ರತಿ ಕುಟುಂಬಕ್ಕಾಗಿ ಭಾರತದ ಜನರ ಪರವಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ತಿಳಿಸಿದ್ದಾರೆ.

“ನಾವು ನಿಮ್ಮ ನೋವನ್ನು ಅನುಭವಿಸುತ್ತಿದ್ದೇವೆ. ನಾವು ನಿಮ್ಮ ದುಃಖದಲ್ಲಿ ಭಾಗಿಗಳಾಗಿದ್ದೇವೆ. ಭಾರತವು ಇಸ್ರೇಲ್ ಜೊತೆಗೆ ಈ ಕ್ಷಣದಲ್ಲಿ ಮತ್ತು ಮುಂದೆಯೂ ಪೂರ್ಣ ದೃಢತೆಯೊಂದಿಗೆ ಮತ್ತು ನಂಬಿಕೆಯೊಂದಿಗೆ ನಿಲ್ಲುತ್ತದೆ. ಯಾವುದೇ ಕಾರಣವೂ ನಾಗರಿಕರ ಹತ್ಯೆಯನ್ನು ಸಮರ್ಥಿಸಲು ಸಾಧ್ಯವಿಲ್ಲ. ಯಾವುದೂ ಭಯೋತ್ಪಾದನೆಯನ್ನು ಸಮರ್ಥಿಸಲಾರದು” ಎಂದು ಹೇಳಿದ್ದಾರೆ.

ಮೋದಿಯವರ ಭಾಷಣಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ ವಿಭಾಗದ ಉಸ್ತುವಾರಿ) ಜೈರಾಮ್ ರಮೇಶ್ ಅವರು ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ.

“ನಿನ್ನೆ ನೆಸೆಟ್‌ನಲ್ಲಿ ಮಾಡಿದ ಭಾಷಣವು ತಮ್ಮ ಆತಿಥೇಯರ ನಿರ್ಲಜ್ಜ ಸಮರ್ಥನೆಯಾಗಿತ್ತು. ಅದರಲ್ಲಿ ಪ್ರಧಾನಿ ಮೋದಿ ಅವರು ತಾವು ಜನಿಸಿದ ದಿನದಂದೇ ಭಾರತವು ಇಸ್ರೇಲ್ ಎಂಬ ಹೊಸ ರಾಷ್ಟ್ರವನ್ನು ಅಂಗೀಕರಿಸಿತು ಎಂಬ ವಿಷಯದ ಕಡೆಗೆ ಗಮನ ಸೆಳೆದಿದ್ದಾರೆ” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಜೈರಾಮ್ ರಮೇಶ್ ಅವರು, ಇಸ್ರೇಲ್ ರಚನೆಯ ವಿಷಯದ ಕುರಿತು ಐನ್‌ಸ್ಟೈನ್‌ಗೆ ನೆಹರೂ ನೀಡಿದ್ದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ್ದಾರೆ. ನವೆಂಬರ್ 5,1949 ರಂದು ಪ್ರಿನ್ಸ್ಟನ್‌ನಲ್ಲಿರುವ ಐನ್‌ಸ್ಟೈನ್ ಅವರ ಮನೆಯಲ್ಲಿ ಇಬ್ಬರು ಪರಸ್ಪರ ಭೇಟಿಯಾಗಿದ್ದರು ಎಂದು ಗಮನ ಸೆಳೆದಿದ್ದಾರೆ. ನವೆಂಬರ್ 1952ರಲ್ಲಿ ಇಸ್ರೇಲ್‌ನ ಅಧ್ಯಕ್ಷರಾಗುವ ಪ್ರಸ್ತಾಪವನ್ನು ಐನ್‌ಸ್ಟೈನ್ ನಿರಾಕರಿಸಿದ್ದನ್ನು ಮತ್ತು ಏಪ್ರಿಲ್ 1955ರಲ್ಲಿ ತಮ್ಮ ನಿಧನಕ್ಕೆ ಸ್ವಲ್ಪ ಮೊದಲು ಪರಮಾಣು ಶಸ್ತ್ರಾಸ್ತ್ರಗಳ ಕುರಿತು ನೆಹರೂ ಅವರೊಂದಿಗೆ ಪತ್ರವ್ಯವಹಾರ ನಡೆಸಿದ್ದನ್ನು ಸಹ ಜೈರಾಮ್ ರಮೇಶ್ ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...