Homeಮುಖಪುಟಅಸ್ಸಾಂ ಪೊಲೀಸರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಬಂಧನ

ಅಸ್ಸಾಂ ಪೊಲೀಸರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಬಂಧನ

- Advertisement -
- Advertisement -

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಅಸ್ಸಾಂ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪವನ್ ಖೇರಾ ಅವರು ಪಕ್ಷದ ಇತರ ನಾಯಕರೊಂದಿಗೆ ಕಾಂಗ್ರೆಸ್‌ನ ಸರ್ವಸದಸ್ಯ ಅಧಿವೇಶನಕ್ಕಾಗಿ ಇಂಡಿಗೋ ವಿಮಾನದಲ್ಲಿ ರಾಯ್‌ಪುರಕ್ಕೆ ತೆರಳುತ್ತಿದ್ದಾಗ ಬಂಧನ ನಡೆದಿದೆ.

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ಪೊಲೀಸ್ ಠಾಣೆಯಲ್ಲಿ ಖೇರಾ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಪ್ರಶಾಂತ ಕುಮಾರ್ ಭುಯಾನ್ ಹೇಳಿದ್ದಾರೆ. ಆದರೆ ದೂರಿನ ವಿವರಗಳನ್ನು ಅವರು ಬಹಿರಂಗಪಡಿಸಿಲ್ಲ ಎಂದು ಎಎನ್‌ಐ ಹೇಳಿದೆ.

ಇದನ್ನೂ ಓದಿ: ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಂದೆಯನ್ನು ಅವಮಾನಿಸಿದ ಆರೋಪದ ಮೇಲೆ ಖೇರಾ ಅವರನ್ನು ಬಂಧಿಸುವಂತೆ ಭಾರತೀಯ ಜನತಾ ಪಕ್ಷದ ಸದಸ್ಯರು ಒತ್ತಾಯಿಸಿದ್ದರು.

ಫೆಬ್ರವರಿ 17ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿಯನ್ನು ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ “ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದರು.

ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯಿಂದ ಉಂಟಾದ ಬಿಕ್ಕಟ್ಟಿನ ಬಗ್ಗೆ ಮೋದಿ ಸರ್ಕಾರವನ್ನು ಟೀಕಿಸುವಾಗ ಖೇರಾ ಅವರು ಈ ಹೇಳಿಕೆಯನ್ನು ನೀಡಿದ್ದರು. ಗೌತಮ್ ಅದಾನಿ ಅವರ ಕಂಪನಿಯು ಹಗರಣ ನಡೆಸಿದೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಗೌತಮ್ ಅದಾನಿ ಮೇಲೆ ಹೆಚ್ಚಿನ ಒಲವು ಹಾಗಾಗಿ ಅವರ ವಿರುದ್ಧ ತನಿಖೆಗೆ ಆದೇಶ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಖೇರಾ ಬಂಧನದ ಬಳಿಕ ಸುಮಾರು 50 ಕಾಂಗ್ರೆಸ್ ನಾಯಕರು ವಿಮಾನ ನಿಲ್ದಾಣದಲ್ಲಿ ಡಾಂಬರ್ ಮೇಲೆ ಅಪರೂಪದ ಪ್ರತಿಭಟನೆ ನಡೆಸಿದರು. ಈ ಬಂಧನದ ವಿರುದ್ಧ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...