HomeಮುಖಪುಟEIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ಮಾಜಿ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ರ ಅಧಿಸೂಚನೆಯ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ತೀವ್ರ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ಬರೆದಿರುವ ಪತ್ರಕ್ಕೆ, ನಿಮ್ಮ ಆರೋಪ ಮತ್ತು ಸಲಹೆಗಳು ಆಧಾರರಹಿತ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಉತ್ತರಿಸಿದ್ದಾರೆ.

ಮಾಜಿ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಕರಡು ಅಧಿಸೂಚನೆಯು, ಸಾರ್ವಜನಿಕ ವಿಚಾರಣೆಗೆ ಸೂಚನೆ ಅವಧಿಯನ್ನು ಕಡಿಮೆ ಮಾಡಿ ಮತ್ತು ದೊಡ್ಡ ವರ್ಗದ ಜನರಿಂದ ದೂರವಿಡುತ್ತಾರೆ. ಇದು ಪರಿಸರ ತೆರವು ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ ಎಂದು ರಮೆಶ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಇದು ಪರಿಸರ ಅನುಮತಿಗಳ ಮಾನ್ಯತೆಯನ್ನು ಹೆಚ್ಚಿಸುತ್ತದೆ, ಯೋಜನೆಗಳು ನಿರ್ಮಾಣವಾಗದಿದ್ದರೂ ಸಹ ದೀರ್ಘಾವಧಿಯವರೆಗೆ ಭೂಮಿಯನ್ನು ಭದ್ರಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದು ಭೂ ಕಬಳಿಕೆಯನ್ನು ಉತ್ತೇಜಿಸುತ್ತದೆಯೇ ಹೊರತು ಅಭಿವೃದ್ಧಿಯನ್ನಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದು ರಾಜ್ಯ EIA ಅಧಿಕಾರಿಗಳನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವನ್ನು ನೀಡುತ್ತದೆ. EIA ಕರಡು, ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಮತ್ತೊಂದು ಹೊಡೆತ ಎಂದು ರಮೇಶ್ ಹೇಳಿದ್ದಾರೆ.

ಈ ಕರಡು, ಪರಿಸರ ನಿಯಂತ್ರಣವನ್ನು “ಅನಗತ್ಯ ನಿಯಂತ್ರಕ ಹೊರೆ”ಯಾಗಿ ನೋಡುವ ಮನೋಭಾವದ ಪರಿಣಾಮವಾಗಿದೆ. ಆದರೆ ಜನರ ಕಲ್ಯಾಣ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಸಾಧನವಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ಜಾವಡೇಕರ್ “ಕರಡು ಅಧಿಸೂಚನೆಯನ್ನು ಸೂಚನೆ ಮತ್ತು ಸಲಹೆಗಳಿಗಾಗಿ ಸಾರ್ವಜನಿಕ ವಲಯದಲ್ಲಿ ಇರಿಸಲಾಗಿದೆ. ನಿಮ್ಮ ಅವಲೋಕನಗಳನ್ನು ಗುರುತಿಸಲಾಗಿದೆ. ಸಲಹೆಗಳಿಗಾಗಿ ಇನ್ನೂ 15 ದಿನಗಳಿವೆ. ನಿಮ್ಮ ಎಲ್ಲಾ ಸಲಹೆಗಳು ಮತ್ತು ಆರೋಪಗಳು ಆಧಾರರಹಿತ ಮತ್ತು ತಪ್ಪು ವ್ಯಾಖ್ಯಾನವನ್ನು ಹೊಂದಿವೆ. ನಾನು ನಿಮಗೆ ವಿವರವಾಗಿ ಉತ್ತರಿಸುತ್ತೇನೆ” ಎಂದಿದ್ದಾರೆ.

ಕರಡನ್ನು ಅಂತಿಮಗೊಳಿಸುವ ಮೊದಲು ಕೇಂದ್ರವು ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಸರ್ಕಾರದ ನಿರ್ಧಾರಗಳನ್ನು ಸಂಸತ್ತು ಮತ್ತು ಸ್ಥಾಯಿ ಸಮಿತಿಗಳು ಪರಿಶೀಲಿಸಬಹುದು ಎಂದು ಪರಿಸರ ಸಚಿವರು ಹೇಳಿದರು.

ಏನಿದು EIA-2020;

ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಮಾಹಿತಿ ಹಕ್ಕು ಕಾಯ್ದೆ ಅರ್ಜಿದಾರರು ನೀಡಿದ ದಾಖಲೆಗಳು, ಕರಡು ಕುರಿತು ಸಾರ್ವಜನಿಕ ಪ್ರತಿಕ್ರಿಯೆಗಾಗಿ ನೀಡಿರುವ ಸಮಯದ ಅವಧಿಯನ್ನು ವಿಸ್ತರಿಸುವ ಸಚಿವಾಲಯದ ಹಿರಿಯ ಅಧಿಕಾರಿಯ ಶಿಫಾರಸುಗಳನ್ನು ಜಾವಡೇಕರ್ ರದ್ದುಪಡಿಸಿದ್ದಾರೆ ಎನ್ನಲಾಗಿದೆ.

ಪರಿಸರ ಸಚಿವಾಲಯವು ಕರಡು ಕಾನೂನನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯದಲ್ಲಿ ಇರಿಸಿತ್ತು.

ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ಕ್ಕೆ ವಿಸ್ತರಿಸಿದೆ. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.


ಇದನ್ನೂ ಓದಿ: ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...