Homeಮುಖಪುಟಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

- Advertisement -
- Advertisement -

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು) ಪುನಃಸ್ಥಾಪಿಸುವಂತೆ ಆಗ್ರಹಿಸಿ ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದ ನಿಲ್ಲಲಿದೆ ಎಂದು ಬುಧವಾರ (ಅ. 28) ತಿಳಿಸಿದೆ.

ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮಾತನಾಡಿ, 21ನೇ ಶತಮಾನದ ಭಾರತದಲ್ಲಿ ಚುನಾಯಿತ ವಿದ್ಯಾರ್ಥಿ ಸಂಘವನ್ನು ರಚಿಸುವ ತಮ್ಮ ಮೂಲಭೂತ ಹಕ್ಕನ್ನು ಮರಳಿ ಪಡೆಯಲು ಜಾಮಿಯಾ ವಿದ್ಯಾರ್ಥಿಗಳು ಎರಡು ವಾರಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನದ 19(1)(ಸಿ) ವಿಧಿಯು ಸಂಘಗಳನ್ನು ಅಥವಾ ಒಕ್ಕೂಟಗಳನ್ನು ರಚಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ. ಇಂತಹ ಮೂಲಭೂತ ಹಕ್ಕಿಗಾಗಿ ವಿದ್ಯಾರ್ಥಿಗಳು ಬೀದಿಗಿಳಿಯಬೇಕಾಗಿರುವುದು ದೇಶದ ಪ್ರಜಾಪ್ರಭುತ್ವದ ಸ್ಥಿತಿಗತಿಯ ಕುರಿತು, ವಿಶೇಷವಾಗಿ ಯುವಜನರ ದೃಷ್ಟಿಕೋನದಿಂದ, ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಇಸ್ಲಾಮಿಸ್ಟ್‌ ಘೋಷಣೆಗಳನ್ನು ಕೂಗಲಾಗಿದೆ ಎಂಬ ನಿರೂಪಣೆಯನ್ನು ಮುನ್ನೆಲೆಗೆ ತರುವ ಮೂಲಕ ಪ್ರತಿಭಟನೆಯನ್ನು ಅಪಖ್ಯಾತಿಗೀಡು ಮಾಡಲು ಮತ್ತು ವಿದ್ಯಾರ್ಥಿಗಳ ಹೆಸರಿಗೆ ಮಸಿ ಬಳಿಯಲು ವಿಶ್ವವಿದ್ಯಾಲಯದ ಆಡಳಿತ ಪ್ರಯತ್ನಿಸಿತು. ಆದರೆ, ತಪ್ಪಿತಸ್ಥರನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ಒಪ್ಪಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದಾಗ ಆಡಳಿತ ಮಂಡಳಿ ಹಿಂದೆ ಸರಿಯಿತು” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ‘ಶಿಕ್ಷಣ ಪಡೆಯಿರಿ, ಹೋರಾಡಿ, ಸಂಘಟಿತರಾಗಿ’ ಎಂಬ ಘೋಷಣೆಯನ್ನು ಸಾಕಾರಗೊಳಿಸುವಲ್ಲಿ ವಿದ್ಯಾರ್ಥಿ ಸಂಘವನ್ನು ರಚಿಸುವ ಹಕ್ಕು ಅತ್ಯಗತ್ಯವಾಗಿದೆ. ದೇಶದ ಇತರ ಭಾಗಗಳ ವಿದ್ಯಾರ್ಥಿಗಳಂತೆಯೇ ಜಾಮಿಯಾ ವಿದ್ಯಾರ್ಥಿಗಳಿಗೂ ಈ ಹಕ್ಕಿದೆ. ಅವರ ಹೋರಾಟಕ್ಕೆ ನಾವು ಬೆಂಬಲವಾಗಿ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

ಬಲವಂತವಾಗಿ ಕ್ಯಾಂಪಸ್ ಪ್ರವೇಶಿಸಿದ್ದಾರೆ: ವಿಶ್ವವಿದ್ಯಾಲಯದ ಆರೋಪ

ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನಡುವಿನ ಸಂಘರ್ಷ ಮುಂದುವರಿದಿರುವಂತೆಯೇ, ಕ್ಯಾಂಪಸ್‌ನ ಕೆಲವು ಭಾಗಗಳಲ್ಲಿ ಕಿಟಕಿ ಗಾಜುಗಳು ಒಡೆದಿರುವ ದೃಶ್ಯಗಳನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ಬುಧವಾರ ಹಂಚಿಕೊಂಡಿದ್ದಾರೆ.

ವಿದ್ಯಾರ್ಥಿಗಳು ಬಲವಂತವಾಗಿ ಕ್ಯಾಂಪಸ್‌ನ ಕೆಲವು ಭಾಗಗಳಿಗೆ ಪ್ರವೇಶಿಸಿ, ಕಣ್ಗಾವಲು ಕ್ಯಾಮೆರಾಗಳು ಸೇರಿದಂತೆ ವಿಶ್ವವಿದ್ಯಾಲಯದ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಆದರೆ, ಈ ಹಾನಿಗೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ.

ವಿದ್ಯಾರ್ಥಿ ಸಂಘದ ಸಂವಿಧಾನಕ್ಕೆ ಅನುಮೋದನೆ ದೊರೆತ 15 ದಿನಗಳೊಳಗೆ ಸಂಘದ ಚುನಾವಣೆ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯವು ಸೋಮವಾರ ಆದೇಶ ಹೊರಡಿಸಿತ್ತು. ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಅಮಾನತು ಆದೇಶಗಳು ಮತ್ತು ಕಾರಣ ಕೇಳಿ ಜಾರಿಗೊಳಿಸಿದ್ದ ನೋಟಿಸ್‌ಗಳನ್ನು ಕೂಡ ಈ ಆದೇಶದ ಮೂಲಕ ಹಿಂಪಡೆಯಲಾಗಿತ್ತು.

ಇದಲ್ಲದೆ, ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯ ವರ್ತನೆಯ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನೂ ರಚಿಸಲಾಗಿತ್ತು. ಆದರೆ, ವಿಶ್ವವಿದ್ಯಾಲಯದ ಈ ಕ್ರಮದ ಹೊರತಾಗಿಯೂ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹ ಮುಂದುವರಿದಿದೆ.

ಚುನಾವಣೆಗೆ ನಿರ್ದಿಷ್ಟ ದಿನಾಂಕ ಘೋಷಿಸುವಂತೆ ವಿದ್ಯಾರ್ಥಿಗಳ ಪಟ್ಟು

ವಿಶ್ವವಿದ್ಯಾಲಯದ ನಿರ್ಧಾರವು ತಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಹೇಳಿದ್ದಾರೆ. ವಿದ್ಯಾರ್ಥಿ ಸಂಘದ ಸಂವಿಧಾನಕ್ಕೆ ಯಾವಾಗ ಅನುಮೋದನೆ ನೀಡಲಾಗುತ್ತದೆ ಎಂಬುದಕ್ಕೆ ಗಡುವು ನಿಗದಿಪಡಿಸದಿರುವುದನ್ನು ಅವರು ಪ್ರಶ್ನಿಸಿದ್ದಾರೆ.

2006ರಿಂದ ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿಲ್ಲ. ಹೀಗಾಗಿ, ಆಡಳಿತ ಮಂಡಳಿಯು ಚುನಾವಣೆಗೆ ನಿಗದಿತ ದಿನಾಂಕವನ್ನು ಘೋಷಿಸಬೇಕು ಮತ್ತು ವಿದ್ಯಾರ್ಥಿ ಸಂಘದ ಸಂವಿಧಾನಕ್ಕೆ ಅನುಮೋದನೆ ನೀಡುವ ಪ್ರಕ್ರಿಯೆಗೆ ಕಾಲಮಿತಿಯನ್ನು ನಿಗದಿಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

“ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸಬೇಕು ಮತ್ತು ಚುನಾವಣೆಯ ದಿನಾಂಕಗಳನ್ನು ಘೋಷಿಸಬೇಕು ಎಂಬುದು ನಮ್ಮ ಮೊದಲ ಬೇಡಿಕೆಯಾಗಿತ್ತು” ಎಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿಗಳಲ್ಲಿ ಒಬ್ಬರಾದ ರೆಹಾನ್ ಖಾನ್ ಸೋಮವಾರ ಹೇಳಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆ ತಿಳಿಸಿದೆ.

ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಅಕ್ಟೋಬರ್ 24ರಿಂದ ಎಲ್ಲಾ ತರಗತಿಗಳನ್ನು ಆನ್‌ಲೈನ್‌ ಮೂಲಕ ನಡೆಸಲು ಜಾಮಿಯಾ ವಿಶ್ವವಿದ್ಯಾಲಯ ನಿರ್ಧರಿಸಿತ್ತು.

ಕಾಂಗ್ರೆಸ್ ಸಂಸದರ ವಿರುದ್ಧ ಎಫ್‌ಐಆರ್ ದಾಖಲು

ಜಾಮಿಯಾ ವಿಶ್ವವಿದ್ಯಾಲಯದ ಕುಲಸಚಿವ ಮೊಹಮ್ಮದ್ ಮಹತಾಬ್ ಆಲಂ ರಿಜ್ವಿ ಅವರು ನೀಡಿದ ದೂರಿನ ಆಧಾರದ ಮೇಲೆ, ದೆಹಲಿ ಪೊಲೀಸರು ಅಕ್ಟೋಬರ್ 25ರಂದು ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಸಂಸದರಾದ ಇಮ್ರಾನ್ ಮಸೂದ್ ಮತ್ತು ಇಮ್ರಾನ್ ಪ್ರತಾಪ್‌ಗಢಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ವಿಶ್ವವಿದ್ಯಾಲಯದ ಆವರಣಕ್ಕೆ ಅನುಮತಿಯಿಲ್ಲದೆ ಪ್ರವೇಶಿಸಿದ ಆರೋಪ ಅವರ ಮೇಲಿದೆ.

ದೂರಿನ ಪ್ರಕಾರ, ಅಕ್ಟೋಬರ್ 21ರಂದು ಇಮ್ರಾನ್ ಪ್ರತಾಪ್‌ಗಢಿ ಅವರು 4ಎ ಗೇಟ್‌ನ ಬೀಗ ಮುರಿದು ವಿಶ್ವವಿದ್ಯಾಲಯದ ಆವರಣ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇಮ್ರಾನ್ ಮಸೂದ್ ಅವರು ಅಕ್ಟೋಬರ್ 23ರಂದು ಗಫೂರ್ ನಗರದ ಸಮೀಪ ಏಣಿಯ ಸಹಾಯದಿಂದ ಆವರಣದ ಗೋಡೆ ಹತ್ತಿ ಒಳಗೆ ಪ್ರವೇಶಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಮಾಜವಾದಿ ಪಕ್ಷದ ಸಂಸದ ಮೊಹಿಬ್ಬುಲ್ಲಾ ನದ್ವಿ ಅವರ ಭೇಟಿಯ ಬಗ್ಗೆಯೂ ದೂರಿನಲ್ಲಿ ಪ್ರಸ್ತಾಪಿಸಲಾಗಿದೆ. ಅವರು ವಿಶ್ವವಿದ್ಯಾಲಯದ ಆವರಣಕ್ಕೆ ತೆರಳುತ್ತಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...

ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್  ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ...

ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ

ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ...

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...

ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ ಸೆರೆ

ತಮಿಳುನಾಡಿನ ಥೇಣಿ ಜಿಲ್ಲಾ ಜೈಲಿನಿಂದ 17 ಕೈದಿಗಳು ಪರಾರಿಯಾದ ಒಂದು ದಿನದೊಳಗೆ, ಮಂಗಳವಾರ ಸಂಜೆಯ ವೇಳೆಗೆ ತಮಿಳುನಾಡು ಪೊಲೀಸರು ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಅವರ ಪೈಕಿ 13 ಮಂದಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ವಲಯದ...

ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರು ಕಟ್‌: ಎಸ್‌ಐಆರ್‌ ಬಳಿಕ ಅರ್ಧದಷ್ಟು ಮತದಾರರು ಪಟ್ಟಿಯಿಂದ ಹೊರಕ್ಕೆ 

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಬರೋಬ್ಬರಿ 46.88 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಂದರೆ, ಎಸ್‌ಐಆರ್‌ ಆರಂಭಕ್ಕೂ ಮುನ್ನ ನಗರದಲ್ಲಿದ್ದ ಒಟ್ಟು...

ಉತ್ತರ ಪ್ರದೇಶ| ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಸಾವು ಪ್ರಕರಣ; ಎಫ್‌ಐಆರ್ ದಾಖಲು

ಅಕ್ಟೋಬರ್ 25 ರಂದು ಪ್ರತಾಪಗಢದ ಡಾ. ಸೋನೆಲಾಲ್ ಪಟೇಲ್ ವೈದ್ಯಕೀಯ ಕಾಲೇಜು ಆವರಣದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಕುಟುಂಬವು, ಸೋಮವಾರ ತಡರಾತ್ರಿ ಆತನ ಮೃತದೇಹವನ್ನು ಹೊತ್ತುಕೊಂಡು ತಮ್ಮ ಊರಾದ...