Homeಮುಖಪುಟಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ...

ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

- Advertisement -
- Advertisement -

ಸೂರತ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರನ್ನು ಕಾಂಗ್ರೆಸ್‌ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ನೀಲೇಶ್ ಕುಂಭಾನಿ ಸೂರತ್‌ನಿಂದ ಲೋಕಸಭೆ ಸ್ಪರ್ಧೆಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಪಡೆದಿದ್ದರು. ಆದರೆ ಅವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ತಿರಸ್ಕರಿಸಿದ ಕಾರಣ ಭಾರತೀಯ ಜನತಾ ಪಕ್ಷದ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ನೀಲೇಶ್ ಕುಂಭಾನಿ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ನಿರ್ಲಕ್ಷ್ಯವಹಿಸಿದ್ದಾರೆ ಅಥವಾ ಬಿಜೆಪಿ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ನಿಮ್ಮ ನಾಮಪತ್ರದ ತಿರಸ್ಕಾರವು ನೀವು ಅತ್ಯಂತ ನಿರ್ಲಕ್ಷ್ಯವಹಿಸಿರುವುದು ಅಥವಾ ಬಿಜೆಪಿಯೊಂದಿಗೆ ಸಂಬಂಧವನ್ನು ಹೊಂದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಆದರೂ ನ್ಯಾಯದ ತತ್ವಗಳಿಗೆ ಅನುಸಾರವಾಗಿ, ಶಿಸ್ತು ಸಮಿತಿಯು ಅದರ ಮುಂದೆ ನಿಮ್ಮ ವಾದವನ್ನು ಮಂಡಿಸಲು ಸಾಕಷ್ಟು ಸಮಯವನ್ನು ಒದಗಿಸಿದೆ. ಪಕ್ಷಕ್ಕೆ ಯಾವುದೇ ವಿವರಣೆ ನೀಡದೆ ಏಕಾಏಕಿ ನಾಪತ್ತೆಯಾಗಿರುವುದು ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸುವ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಶಿಸ್ತು ಸಮಿತಿ ಸದಸ್ಯ ಬಾಲುಭಾಯ್ ಪಟೇಲ್ ಸಹಿ ಹಾಕಿರುವ ಅಮಾನತು ಆದೇಶದಲ್ಲಿ ಹೇಳಲಾಗಿದೆ.

ಸೂರತ್‌ಗೆ ಸ್ಥಳಾಂತರಗೊಂಡಿರುವ ಸೌರಾಷ್ಟ್ರದ ಪಾಟಿದಾರ್ ಸಮುದಾಯದ ಜನರನ್ನು ಅವರು ಪ್ರತಿನಿಧಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ನೀಲೇಶ್ ಕುಂಭಾಣಿ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಲಾಗಿದೆ. ನಾಮಪತ್ರದ ತಿರಸ್ಕಾರ ಬೆಳವಣಿಗೆಯಿಂದ ಸೂರತ್‌ನ ಜನರು ಮತ್ತು ಪಕ್ಷದ ಕಾರ್ಯಕರ್ತರು ಕೋಪಗೊಂಡಿದ್ದಾರೆ ಮತ್ತು ತಮ್ಮ ಕೋಪವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮನ್ನು ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಕಾಂಗ್ರೆಸ್‌ನ ಶಿಸ್ತು ಸಮಿತಿ ಹೇಳಿದೆ.

ಸೂರತ್‌ನ ಮಾಜಿ ಕಾರ್ಪೊರೇಟರ್ ಕುಂಭಾನಿ ಅವರು 2022ರ ವಿಧಾನಸಭಾ ಚುನಾವಣೆಯಲ್ಲಿ ಸೂರತ್ ನಗರದ ಕಾಮ್ರೇಜ್‌ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ ಕುಂಭಾನಿಯವರ ನಾಮಪತ್ರವನ್ನು ಮೂವರು ಅನುಮೋದಕರ ಸಹಿಗಳಲ್ಲಿ ವ್ಯತ್ಯಾಸದ ಕಾರಣದಿಂದ ಸೂರತ್ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಮತ್ತು ಜಿಲ್ಲಾಧಿಕಾರಿ ಸೌರಭ್ ಪರ್ಘಿ ಅವರು ತಿರಸ್ಕರಿಸಿದ್ದರು. ಇದೇ ರೀತಿ ಸೂರತ್‌ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನು ಕೂಡ ತಿರಸ್ಕರಿಸಲಾಗಿತ್ತು.

ಡಾಕ್ಯುಮೆಂಟ್‌ನಲ್ಲಿನ ಸಹಿಗಳು ತಮ್ಮದಲ್ಲ ಎಂದು ಆರೋಪಿಸಿ ಮೂವರು ಪ್ರಸ್ತಾವಕರು ಚುನಾವಣಾಧಿಕಾರಿಗೆ ಅಫಿಡವಿಟ್‌ಗಳನ್ನು ಸಲ್ಲಿಸಿದ ನಂತರ ಕುಂಭಾಣಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡ ನಂತರ, ಬಿಜೆಪಿಯು ಕಣದಲ್ಲಿದ್ದ ಉಳಿದ ಎಂಟು ಅಭ್ಯರ್ಥಿಗಳನ್ನು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸಿದೆ, ಇದರ ಪರಿಣಾಮವಾಗಿ ಬಾಲುಭಾಯ್ ಪಟೇಲ್ ಅವಿರೋಧವಾಗಿ ಆಯ್ಕೆಯಾಗಿದ್ದರು.

ವೀಡಿಯೊ ಸಂದೇಶವೊಂದರಲ್ಲಿ ಕುಂಭಣಿ ಅವರು ನಾಪತ್ತೆಯಾಗಿರುವುದನ್ನು ನಿರಾಕರಿಸಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಹಲವಾರು ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದರು. ನನ್ನ ನಾಮಪತ್ರ ರದ್ದತಿಯನ್ನು ಪ್ರಶ್ನಿಸಿ ನಾನು ಅರ್ಜಿಯನ್ನು ಸಿದ್ಧಪಡಿಸಿದ್ದೆ ಮತ್ತು ಅದಕ್ಕಾಗಿ ಅಹಮದಾಬಾದ್‌ಗೆ ತೆರಳುತ್ತಿದ್ದಾಗ ಕೆಲವು ನಾಯಕರ ಪಿತೂರಿ ಮೇರೆಗೆ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ನನ್ನ ನಿವಾಸದ ಬಳಿ ಪ್ರತಿಭಟನೆ ನಡೆಸಿದರು ಎಂದು ಹೇಳಿದ್ದಾರೆ. ಪ್ರಚಾರದ ವೇಳೆ ಕೆಲ ಕಾಂಗ್ರೆಸ್ ನಾಯಕರು ತನಗೆ ಸಹಾಯ ಮಾಡಲಿಲ್ಲ ಎಂದು ಆರೋಪಿಸಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ನಾನು ಬದ್ಧನಾಗಿದ್ದೇನೆ, ನಾನು ಕಾಂಗ್ರೆಸ್‌ನ ನಿಷ್ಠಾವಂತ ಸದಸ್ಯನಾಗಿದ್ದೇನೆ ಮತ್ತು ಪಕ್ಷದಲ್ಲೇ ಉಳಿಯುತ್ತೇನೆ. ಪಕ್ಷದ ಉನ್ನತ ನಾಯಕತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದರು.

ಇದನ್ನು ಓದಿ: 100 ಕೋಟಿ ದಾಟಿದ ಬಿಜೆಪಿಯ ಗೂಗಲ್‌ ಜಾಹೀರಾತು ವೆಚ್ಚ!; ಕರ್ನಾಟಕವೇ ಪ್ರಮುಖ ಟಾರ್ಗೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...