Homeಕರ್ನಾಟಕಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ

ಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದೆ.

ನಮ್ಮ ಸರಕಾರ ನೀಡುತಿದ್ದ 7 ಕೆ.ಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆ.ಜಿಗೆ ಇಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯವನ್ನು ಹಸಿವು ಮುಕ್ತವನ್ನಾಗಿ ಮಾಡಬೇಕು ಎಂದು ನಮ್ಮ ಮೂರನೇ ಗ್ಯಾರಂಟಿ ಯೋಜನೆಯಾಗಿ 10 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ದುಡ್ಡು ಎಂಬ ಪ್ರಶ್ನೆಗೆ ಉತ್ತಿರಿಸಿದ ಡಿ.ಕೆ ಶಿವಕುಮಾರ್, “ರಾಜ್ಯಪಾಲರ ಭಾಷಣದಲ್ಲಿ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಹೆಚ್ಚುವರಿ ವಿದ್ಯುತ್ ಅನ್ನು ಬೇರೆ ರಾಜ್ಯಕ್ಕೆ ಮಾರಿ 4 ಸಾವಿರ ಕೋಟಿ ಲಾಭ ಮಾಡಿದ್ದೇವೆ ಎಂದು ಹೇಳಿದ್ದಾರೆ. ದೇಶದ ಇಂಧನ ಉತ್ಪಾದನೆ ಇತಿಹಾಸದಲ್ಲೇ ರಾಜ್ಯವೊಂದು ಹೆಚ್ಚುವರಿ ವಿದ್ಯುತ್ ಮಾರಾಟ ಮಾಡುತ್ತಿರುವುದು ಇದೇ ಮೊದಲು. ನಾವು ಸಾಧಿಸಿದ್ದನ್ನು ಅವರು ರೈತರಿಗೆ ನೀಡಲು ಆಗುತ್ತಿಲ್ಲ. ನಾವು ಇಂಧನ ಸರಬರಾಜಿನಲ್ಲಿ ಆಗುವ ನಷ್ಟ ತಡೆಯಲು ಪ್ರತಿ ತಾಲೂಕಿನಲ್ಲಿ 20-40 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲು ವ್ಯವಸ್ಥೆ ಕಲ್ಪಿಸಿದ್ದೇವೆ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಜಗಳವಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಸಿದ್ದರಾಮಯ್ಯ ಕೈಕೈ ಮಿಲಾಯಿಸಿ ಜಗಳವಾಡಲು ಕುಸ್ತಿ ಅಖಾಡದಲ್ಲಿ ಇದ್ದೇವಾ? ಜಗಳ, ಕುಸ್ತಿಗಳು ಏನಿದ್ದರೂ ಬಿಜೆಪಿಯಲ್ಲಿದೆ. ಯುದ್ಧ, ಹೇಳಿಕೆ ಸಮರ ನಡೆಯುತ್ತಿರುವುದು ಬಿಜೆಪಿ ಪಕ್ಷದಲ್ಲಿ. ಅವರು ಯಡಿಯೂರಪ್ಪನವರ ಕಣ್ಣಲ್ಲಿ ನೀರು ಹಾಕಿಸಿದ್ದು ಯಾಕೆ? ನಿರಾಣಿ ವಿಚಾರವಾಗಿ ಯತ್ನಾಳ್ ಏನು ಹೇಳಿದರು? ಸರ್ಕಾರದ ಬಗ್ಗೆ ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಏನು ಹೇಳಿದ್ದಾರೆ? ವಿಧಾನಸೌಧ ಕಾರಿಡಾರ್ ನಲ್ಲಿ ಬಿಜೆಪಿ ಶಾಸಕರು ಏನು ಮಾತನಾಡುತ್ತಿದ್ದಾರೆ? ಯೋಗೇಶ್ವರ್ ಏನು ಹೇಳಿದ್ದಾರೆ? ಮಂಚದ ಮೇಲಿದ್ದ ಮಂತ್ರಿ ಯಾರು ಭ್ರಷ್ಟ ಎಂದು ಹೇಳಿದ? ಎಂಟಿಬಿ ನಾಗರಾಜ್ ಅವರು ಏನು ಹೇಳಿದರು? ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುವ ಆಸಕ್ತಿ ಇದ್ದರೆ ಅಧಿವೇಶನ ವಿಸ್ತರಣೆ ಮಾಡಿ, ಚರ್ಚೆಗೆ ಅವಕಾಶ ನೀಡಲಿ” ಎಂದರು.

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ ಉಳಿತಾಯ ಮಾಡಲು ಸಹಕಾರಿಯಾಗುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನವನ್ನು ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ; ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...