Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ತಕ್ಷಣವೇ ದೇಶದಲ್ಲಿ ಜಾತಿ ಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಮುಂಬರುವ ಲೋಕಸಭೆ ಚುನಾವಣೆಯು ಸಂವಿಧಾನವನ್ನು ರಕ್ಷಿಸಲು ಬಯಸುವವರು ಮತ್ತು ಅದನ್ನು ನಾಶಮಾಡಲು ಹೊರಟಿರುವ ಎರಡು ಸಿದ್ಧಾಂತಗಳ ನಡುವಿನ ಹೋರಾಟ ಎಂದು ಬಣ್ಣಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗದವರಾಗಿರುವುದರಿಂದ ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆಗೆ ಹಾಜರಾಗದಂತೆ ಅವರನ್ನು ತಡೆಯಲಾಗಿದೆ ಮತ್ತು ಇದು ಭಾರತೀಯ ಜನತಾ ಪಕ್ಷದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರ ಬಸ್ತಾರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕವಾಸಿ ಲಖ್ಮಾ ಅವರನ್ನು ಬೆಂಬಲಿಸಿ ರ್ಯಾಲಿ ನಡೆದಿದೆ. ರ್ಯಾಲಿಯಲ್ಲಿ ಮೋದಿ ಜಿ ‘ಆದಿವಾಸಿ’ ಪದವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ನಿಮ್ಮನ್ನು (ಬುಡಕಟ್ಟು ಜನಾಂಗದವರು) ಆದಿವಾಸಿ ಎಂದು ಕರೆಯುತ್ತೇವೆ, ಆದರೆ ಅವರು ‘ವನವಾಸಿ’ ಪದವನ್ನು ಬಳಸುತ್ತಾರೆ. ವನವಾಸಿ ಮತ್ತು ಆದಿವಾಸಿ ಪದಗಳ ನಡುವೆ ಅಗಾಧ ವ್ಯತ್ಯಾಸವಿದೆ. ಆದಿವಾಸಿ ಎಂಬ ಪದವು ಆಳವಾದ ಅರ್ಥವನ್ನು ಹೊಂದಿದೆ. ಈ ಪದವು ಜಲ, ಕಾಡು, ಜಮೀನು ಮೇಲಿನ ನಿಮ್ಮ ಹಕ್ಕುಗಳನ್ನು ವ್ಯಕ್ತಪಡಿಸುತ್ತದೆ, ಆದರೆ ವನವಾಸಿ ಎಂದರೆ ಕಾಡಿನಲ್ಲಿ ವಾಸಿಸುವವರು ಎಂದು ಅರ್ಥ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್‌) ಧರ್ಮ, ಸಿದ್ಧಾಂತ ಮತ್ತು ಆದಿವಾಸಿಗಳ ಇತಿಹಾಸದ ಮೇಲೆ ದಾಳಿ ನಡೆಸುತ್ತಿದೆ. ಬಿಜೆಪಿಯವರು ನಿಮ್ಮ ಜಮೀನುಗಳನ್ನು ಕೋಟ್ಯಾಧಿಪತಿಗಳಿಗೆ ನೀಡುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳದಂತೆ ಭಾರತದ ರಾಷ್ಟ್ರಪತಿಗಳಿಗೆ ಬುಡಕಟ್ಟು ಜನಾಂಗದವರು ಎಂಬ ಕಾರಣಕ್ಕೆ ತಡೆಯಲಾಯಿತು. ಮೋದಿಜಿ ಈ ಸಂದೇಶವನ್ನು ದೇಶಕ್ಕೆ ನೀಡಿದರು ಮತ್ತು ಇದು ಅವರ ಚಿಂತನೆಯಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಚುನಾವಣಾ ಭರವಸೆಯನ್ನು ಎತ್ತಿ ಹಿಡಿದ ಗಾಂಧಿ, ನಾವು ಅಧಿಕಾರಕ್ಕೆ ಬಂದ ತಕ್ಷಣ ಜಾತಿ ಗಣತಿ ನಡೆಸುತ್ತೇವೆ. ನಾವು ಅಧಿಕಾರಕ್ಕೆ ಬಂದರೆ 30 ಲಕ್ಷ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡುತ್ತೇವೆ. ಪ್ರಧಾನಿ ಮೋದಿಯವರ ಆಡಳಿತದಲ್ಲಿ 22 ಉದ್ಯಮಿಗಳ ಆಸ್ತಿ 70 ಕೋಟಿ ಭಾರತೀಯರ ಸಂಪತ್ತಿಗೆ ಸಮನಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ರಾಜ್ಯದಲ್ಲಿ ‘ಆಪರೇಷನ್ ಕಮಲ’ಕ್ಕೆ ಯತ್ನ: ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ 50ಕೋಟಿ ರೂ. ಆಫರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...