Homeಮುಖಪುಟಛತ್ತೀಸ್‌ಗಢದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಕೇಸರಿ ಭಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ...

ಛತ್ತೀಸ್‌ಗಢದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಕೇಸರಿ ಭಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ ಮಾಡಿದ ರಾಹುಲ್‌

- Advertisement -
- Advertisement -

ಛತ್ತೀಸ್‌ಗಢದ ಕೊರ್ಬಾದಿಂದ ಇಂದು ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದೆ. ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಸಾವಿರಾರು ಮಂದಿ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಯಾತ್ರೆ ವೇಳೆ ಮಾತನಾಡಿದ ರಾಹುಲ್‌ ಗಾಂಧಿ ರಾಮಮಂದಿರ ಪ್ರಾಣ ಪ್ರತಿಷ್ಠಾಪಣೆ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳಿಗೆ ಆಹ್ವಾನ ಕಳುಹಿಸಿರುವ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರ್ಬಾದಲ್ಲಿ ಯಾತ್ರೆಯ ವೇಳೆ ರಾಹುಲ್‌ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕೇಸರಿ ಭಾವುಟವನ್ನು ಪ್ರದರ್ಶಿಸಿ ಮೋದಿ-ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪ್ರೀತಿಯಿಂದ ತೆರೆದ ಜೀಪಿನಿಂದ ಇಳಿದು ಬಂದ ರಾಹುಲ್‌ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಹಸ್ತಲಾಘವ ಮಾಡಿದ್ದಾರೆ.

ಈ ಬಿಜೆಪಿ ಕಾರ್ಯಕರ್ತರನ್ನು ಯಾತ್ರೆಯ ವಿರುದ್ಧ ಪ್ರತಿಭಟಿಸಲು ಕಳುಹಿಸಲಾಗಿದೆ, ಆದರೆ ರಾಹುಲ್ ಗಾಂಧಿ ಅವರು ಪ್ರತಿಭಟನಾಕಾರರನ್ನು ಭೇಟಿಯಾದಾಗ ಅವರ ಮುಖದಲ್ಲಿನ ಸಂತೋಷವನ್ನು ನೋಡಬೇಕಾಗಿದೆ. ಪ್ರೀತಿಯ ಶಕ್ತಿಯನ್ನು ಈ ವಿಡಿಯೋದಲ್ಲಿ ನೋಡಿ ಎಂದು ಭಾರತ್‌ ಜೋಡೋ ನ್ಯಾಯ ಯಾತ್ರೆ ಕುರಿತ ಪೋಸ್ಟ್‌ನಲ್ಲಿ ಹೇಳಲಾಗಿದೆ.

ಎರಡು ದಿನಗಳ ವಿರಾಮದ ನಂತರ ಭಾನುವಾರ ಛತ್ತೀಸ್‌ಗಢದ ರಾಯಗಢ ಜಿಲ್ಲೆಯಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆ ಪುನರಾರಂಭವಾಗಿತ್ತು. ಗಾಂಧಿ ಚೌಕ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ರಾಹುಲ್‌ ಗಾಂಧಿ ಮಾಲಾರ್ಪಣೆ ಮಾಡಿದ್ದು, ನಂತರ ಯಾತ್ರೆಯು ಖಾರ್ಸಿಯಾ ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರಿದಿದೆ.

ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಗಾಂಧಿ ಚೌಕ್‌ನಲ್ಲಿ ಜಮಾಯಿಸಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿನ್ ಪೈಲಟ್, ಛತ್ತೀಸ್‌ಗಢ ಕಾಂಗ್ರೆಸ್‌ ಮುಖ್ಯಸ್ಥ ದೀಪಕ್ ಬೈಜ್ ಮತ್ತು ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಅವರು ತೆರೆದ ಜೀಪಿನಲ್ಲಿ ರಾಹುಲ್‌ ಗಾಂಧಿ ಜೊತೆ ಯಾತ್ರೆಯಲ್ಲಿ ಸಾಗಿದ್ದರು.

ಯಾತ್ರೆಯು ಒಡಿಶಾದಿಂದ ಗುರುವಾರ ರಾಯಗಢವನ್ನು ಪ್ರವೇಶಿಸಿತ್ತು ಮತ್ತು ಎರಡು ದಿನಗಳ ವಿರಾಮದ ನಂತರ ಭಾನುವಾರ ಮಧ್ಯಾಹ್ನ ಯಾತ್ರೆ ಪುನರಾರಂಭವಾಗಿದೆ. ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ರಾಯ್‌ಗಢ್ ಜಿಲ್ಲೆಯ ರೆಂಗಾರ್‌ಪಾಲಿ ಚೆಕ್‌ಪೋಸ್ಟ್‌ ಮೂಲಕ ಯಾತ್ರೆ ಛತ್ತೀಸ್‌ಗಢ ಪ್ರವೇಶಿಸಿದೆ. ಅಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಿದ್ದರು.

ನಿನ್ನೆ ಛತ್ತೀಸ್‌ಗಢದ ರಾಯ್‌ಗಢ್‌ನ ಕೆವದಬಾದಿ ಚೌಕ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪಕ್ಷವು ಭವಿಷ್ಯದ ಪೀಳಿಗೆಗೆ ದ್ವೇಷ ಮತ್ತು ಹಿಂಸೆ ಅಸ್ತಿತ್ವದಲ್ಲಿಲ್ಲದ ಹಿಂದೂಸ್ಥಾನವನ್ನು ನೀಡಲು ಬಯಸುತ್ತದೆ ಎಂದು ಹೇಳಿದ್ದರು.

ಸದ್ಯ ದೇಶದ ಮೂಲೆ ಮೂಲೆಗಳಲ್ಲಿ ದ್ವೇಷ, ಹಿಂಸಾಚಾರ ಹರಡುತ್ತಿದೆ. ಕೆಲವರು ಅವರ ಭಾಷೆಯ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಕೆಲವರು ರಾಜ್ಯಗಳ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಇಂತಹ ಚಿಂತನೆಗಳು ದೇಶವನ್ನು ದುರ್ಬಲಗೊಳಿಸುತ್ತವೆ. ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷವನ್ನು ಹರಡುತ್ತಿದೆ. ಆದರೆ, ಈ ದೇಶದ ಡಿಎನ್‌ಎಯಲ್ಲೇ ಪ್ರೀತಿ ಇದೆ. ದೇಶದಲ್ಲಿ, ವಿಭಿನ್ನ ನಂಬಿಕೆ ಮತ್ತು ಆಲೋಚನೆಗಳನ್ನು ಹೊಂದಿರುವ ಜನರು ಪ್ರೀತಿಯಿಂದ ಶಾಂತಿಯುತವಾಗಿ ಒಟ್ಟಿಗೆ ಬದುಕುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಅವಧಿ ಕಡಿತಕ್ಕೆ ನಿರ್ಧಾರ:

ಉತ್ತರಪ್ರದೇಶದಲ್ಲಿ 10-12ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅವಧಿಯನ್ನು ಕಡಿಮೆ ಮಾಡಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

ಉತ್ತರಪ್ರದೇಶದಲ್ಲಿ ಯಾತ್ರೆಯು ಫೆ.26ರವೆರೆಗೆ ಮುಂದುವರಿಯುವ ಬಗ್ಗೆ ಈ ಮೊದಲು ಮಾಹಿತಿಯನ್ನು ನೀಡಲಾಗಿತ್ತು. ಆದರೆ ಫೆಬ್ರವರಿ 22ರಿಂದ ಪ್ರಾರಂಭವಾಗುವ ಯುಪಿ ಬೋರ್ಡ್ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ್ ಜೋಡೋ ನ್ಯಾಯ್ ಯಾತ್ರೆಯು ಫೆಬ್ರವರಿ 16ರಿಂದ ಫೆಬ್ರವರಿ 21ರವರೆಗೆ ಉತ್ತರಪ್ರದೇಶದಲ್ಲಿ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಅಂಶು ಅವಸ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಿದ್ದಾರೆ. ಈ ಹಿಂದೆ ಕೋವಿಡ್ -19 ಅವಧಿಯಲ್ಲಿ ಜನರ ಬಗ್ಗೆ ಕಾಳಜಿ ವಹಿಸಿ ರಾಹುಲ್ ಗಾಂಧಿ ಬಂಗಾಳದಲ್ಲಿ ತಮ್ಮ ರ್ಯಾಲಿಗಳನ್ನು ರದ್ದುಗೊಳಿಸಿದ್ದರು ಎಂದು ಅವಸ್ಥಿ ಹೇಳಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಫೆಬ್ರವರಿ 16ರಂದು ವಾರಣಾಸಿ ಮೂಲಕ ರಾಜ್ಯವನ್ನು ಪ್ರವೇಶಿಸಲಿದೆ ಮತ್ತು ಫೆಬ್ರವರಿ 19ರಂದು ಭದೋಹಿ, ಪ್ರಯಾಗರಾಜ್ ಮತ್ತು ಪ್ರತಾಪಗಢ ಮೂಲಕ ಅಮೇಥಿ ತಲುಪಲಿದೆ. ಫೆಬ್ರವರಿ 19ರಂದು ಅಮೇಥಿ ಲೋಕಸಭಾ ಕ್ಷೇತ್ರದ ಗೌರಿಗಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಲಿದ್ದು, ಮರುದಿನ ಫೆಬ್ರವರಿ 20ರಂದು ಯಾತ್ರೆ ರಾಯ್ ಬರೇಲಿ ಮೂಲಕ ಲಕ್ನೋಗೆ ತೆರಳಲಿದೆ. ಫೆಬ್ರವರಿ 21ರಂದು ಯಾತ್ರೆಯು ಲಕ್ನೋದಿಂದ ಉನ್ನಾವ್ ತಲುಪಲಿದ್ದು, ಉನ್ನಾವೋ ನಗರ ಮತ್ತು ಶುಕ್ಲಗಂಜ್ ಮೂಲಕ ಕಾನ್ಪುರವನ್ನು ಯಾತ್ರೆ ಪ್ರವೇಶಿಸಲಿದೆ. ನಂತರ ಕಾನ್ಪುರ, ಝಾನ್ಸಿ ಮೂಲಕ ಯಾತ್ರೆ ಮಧ್ಯಪ್ರದೇಶ ಪ್ರವೇಶಿಸಲಿದೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...