Homeಮುಖಪುಟಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ ನೋಡಬೇಡಿ, ನಿರ್ಲಕ್ಷಿಸಿ - ಸುಪ್ರೀಂ ಕೋರ್ಟ್

ಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ ನೋಡಬೇಡಿ, ನಿರ್ಲಕ್ಷಿಸಿ – ಸುಪ್ರೀಂ ಕೋರ್ಟ್

- Advertisement -
- Advertisement -

ಕಾಂಗ್ರೆಸ್ ಟೂಲ್‌ಕಿಟ್ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಬೇಕೆಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವೇಳೆ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ಷುಲ್ಲಕ, ನಿಷ್ಪ್ರಯೋಜಕ ಅರ್ಜಿಗಳ ಬಗ್ಗೆ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ರಾಷ್ಟ್ರ ವಿರೋಧಿ ಕೃತ್ಯಗಳ” ಕುರಿತು ಕಾಂಗ್ರೆಸ್ ವಿರುದ್ಧದ ಆರೋಪಗಳು ನಿಜವೆಂದು ಕಂಡುಬಂದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೋಂದಣಿಯನ್ನು ಅಮಾನತುಗೊಳಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಗೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌, ’ಅರ್ಜಿದಾರರಿಗೆ ಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ, ಅದನ್ನು ನೋಡಬೇಡಿ, ನಿರ್ಲಕ್ಷಿಸಿ. ಇದು ರಾಜಕೀಯ ಪಕ್ಷದ ಯೋಜಿತ ಪ್ರಚಾರ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕಾಂಗ್ರೆಸ್ ಟೂಲ್‌ಕಿಟ್ ಪ್ರಕರಣದ ಅರ್ಜಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು, ಇಂತಹ ಕ್ಷುಲ್ಲಕ ಅರ್ಜಿಗಳನ್ನು ಆಲಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. “ಇಂತಹ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಏನಾದರೂ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ” ಎಂದು  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರನ್ನು ಪರ ವಾದಿಸುತ್ತಿದ್ದ ವಕೀಲ ಶಶಾಂಕ್ ಶೇಖರ್ ಜಾ, ಕೊರೊನಾ ವೈರಸ್ ರೂಪಾಂತರದ ರೂಪಕ್ಕೆ “ಇಂಡಿಯನ್ ವೆರಿಯಂಟ್” ಎಂಬ ಪದವನ್ನು ಬಳಸುವುದು ಸಹ ಯೋಜಿತ ಪ್ರಚಾರದ ವಿಷಯವಾಗಿದೆ ಎಂದು ವಾದಿಸಿದರು. ಇದೇ ವೇಳೆ ಸಿಂಗಾಪುರವು, “ಸಿಂಗಾಪುರ್ ರೂಪಾಂತರ” ದಂತಹ ಪದಗಳನ್ನು ಬಳಸಲು ಆಕ್ಷೇಪ ವ್ಯಕ್ತಪಡಿಸಿದೆ ಎಂದು ವಕೀಲ ಶಶಾಂಕ್ ಶೇಖರ್ ಜಾ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಚಂದ್ರಚೂಡ್, “ಭಾರತ ಪ್ರಜಾಪ್ರಭುತ್ವ, ನಿಮಗೆ ಗೊತ್ತಾ..?” ಎಂದು ಕಿಡಿಕಾರಿದ್ದಾರೆ. ’ನ್ಯಾಯಾಲಯವು ಎಂದಾದರೂ ವಿವಿಧ ರೀತಿಯ ರಾಜಕೀಯ ಪ್ರಚಾರವನ್ನು ನಿಯಂತ್ರಿಸಬಹುದೇ’ ಎಂದು ಮರು ಪ್ರಶ್ನೆ ಮಾಡಿದ್ದಾರೆ.

ದ್ವಿಸದಸ್ಯ ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಎಂ.ಆರ್.ಶಾ ಅವರು, ‘ಟೂಲ್‌ಕಿಟ್ ‘ ವಿಷಯದಲ್ಲಿ ಈಗಾಗಲೇ ಕ್ರಿಮಿನಲ್ ತನಿಖೆ ಬಾಕಿ ಉಳಿದಿದೆ. ಆರ್ಟಿಕಲ್ 32 ರ ಅಡಿಯಲ್ಲಿ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿತ್ತು. ಟ್ವಿಟ್ಟರ್ ಕೂಡ ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್‌ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಅನುಮೋದಿಸಿತ್ತು.


ಇದನ್ನೂ ಓದಿ: ‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...