Homeಮುಖಪುಟಮಧ್ಯಪ್ರದೇಶ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ, ರಾಜಸ್ಥಾನದಲ್ಲಿ ಪ್ರಬಲ ಪೈಪೋಟಿ: ರಾಹುಲ್ ಗಾಂಧಿ

ಮಧ್ಯಪ್ರದೇಶ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ, ರಾಜಸ್ಥಾನದಲ್ಲಿ ಪ್ರಬಲ ಪೈಪೋಟಿ: ರಾಹುಲ್ ಗಾಂಧಿ

- Advertisement -
- Advertisement -

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ”ತಮ್ಮ ಪಕ್ಷವು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢವನ್ನು ಗೆಲ್ಲುವುದು ನಿಶ್ಚಿತ, ಬಹುಶಃ ತೆಲಂಗಾಣವನ್ನೂ ಗೆಲ್ಲುತ್ತದೆ. ರಾಜಸ್ಥಾನದಲ್ಲಿ ಅತ್ಯಂತ ಪ್ರಬಲ ಪೈಪೋಟಿ ಸ್ಪರ್ಧೆ ಏರ್ಪಡಲಿದೆ” ಎಂದು ಹೇಳಿದರು.

ದೆಹಲಿಯಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ”2024 ರ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಕ್ಕೂಟ ‘INDIA’ ವಿಜಯಶಾಲಿಯಾಗಲಿದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿದೆ ಎಂದು ಹೇಳಿದರು.

ರಾಷ್ಟ್ರವ್ಯಾಪಿ ಜಾತಿ ಗಣತಿಗಾಗಿ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ ಮಾಜಿ ಕಾಂಗ್ರೆಸ್ ಮುಖ್ಯಸ್ಥರು, ಜಾತಿ ಜನಗಣತಿಯ ಬೇಡಿಕೆಯಿಂದ ಗಮನವನ್ನು ಸೆಳೆಯಲು ಬಿಜೆಪಿಯು ‘ವಿಭಿನ್ನ ತಂತ್ರ’ಗಳನ್ನು ನಡೆಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ಕಳೆದ ವಾರ ಲೋಕಸಭೆಯಲ್ಲಿ ಬಿಎಸ್‌ಪಿ ನಾಯಕ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ಗದ್ದಲವನ್ನು ಅವರು ಉಲ್ಲೇಖಿಸಿದರು.

ದೇಶವು ಸಂಪತ್ತಿನ ಕೇಂದ್ರೀಕರಣ, ಸಂಪತ್ತಿನಲ್ಲಿ ಅಸಮಾನತೆ, ಬೃಹತ್ ನಿರುದ್ಯೋಗ, ಕೆಳಜಾತಿ, ಒಬಿಸಿ ಮತ್ತು ಬುಡಕಟ್ಟು ಸಮುದಾಯಗಳಿಗೆ ಭಾರಿ ಅನ್ಯಾಯ ಮತ್ತು ಬೆಲೆ ಏರಿಕೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಅವರು ಹೇಳಿದರು.

”ನಮ್ಮ ನಿರೂಪಣೆಯನ್ನು ನಿರ್ಮಿಸಲು ನಮಗೆ ಅವಕಾಶ ನೀಡದೆ ಅಡ್ಡಿಪಡಿಸುವ ಮೂಲಕ ಬಿಜೆಪಿ ಚುನಾವಣೆಗಳನ್ನು ಗೆಲ್ಲುತ್ತದೆ. ಆದ್ದರಿಂದ ನಾವು ನಮ್ಮ ಪಕ್ಷದ ನಿರೂಪಣೆಯನ್ನು ನಿರ್ಮಿಸುವ ಮೂಲಕ ಚುನಾವಣೆಯನ್ನು ಎದುರಿಸಿದ್ದೇವೆ” ಎಂದು ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಮುಖ ಪಾಠವನ್ನು ಕಲಿತಿದೆ ಎಂದು ರಾಹುಲ್ ಹೇಳಿದರು.

ಈಗ ಕಾಂಗ್ರೆಸ್ ಪಕ್ಷವು ತೆಲಂಗಾಣ, ಛತ್ತೀಸ್‌ಗಢ ಮತ್ತು ಇತರ ರಾಜ್ಯಗಳಲ್ಲಿ ಸಕಾರಾತ್ಮಕ ಕಾರ್ಯಸೂಚಿಯೊಂದಿಗೆ ನಿರೂಪಣೆಯನ್ನು ನಿಯಂತ್ರಿಸುತ್ತಿದೆ ಮತ್ತು ಬಿಜೆಪಿ ಎಲ್ಲಿಯೂ ಕಾಣಿಸುತ್ತಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಬಿಲ್‌: ಮೋದಿ ಸರಕಾರದ ದ್ರೋಹ ಬಯಲುಗೊಳಿಸಲು 21 ನಗರಗಳಲ್ಲಿ ಪತ್ರಿಕಾಗೋಷ್ಟಿ; ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...