ವಕ್ಫ್ ತಿದ್ದುಪಡಿ ಮಸೂದೆಯ ಸಾಂವಿಧಾನಿಕತೆಯನ್ನು ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಜೈರಾಮ್ ರಮೇಶ್, “ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ, 2024ರ ಸಾಂವಿಧಾನಿಕತೆಯನ್ನು ಪ್ರಶ್ನಿಸಲಿದೆ. ಭಾರತದ ಸಂವಿಧಾನದಲ್ಲಿ ಒಳಗೊಂಡಿರುವ ತತ್ವಗಳು, ನಿಬಂಧನೆಗಳು ಮತ್ತು ಆಚರಣೆಗಳ ಮೇಲೆ ಮೋದಿ ಸರ್ಕಾರದ ಎಲ್ಲಾ ದಾಳಿಗಳನ್ನು ಪ್ರತಿರೋಧಿಸುವುದನ್ನು ಮುಂದುವರಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.
2019ರ ಸಿಎಎ ತಿದ್ದುಪಡಿಗಳ ಕುರಿತು ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. 2019ರ ಆರ್‌ಟಿಐ ಕಾಯ್ದೆ, 2005ರ ತಿದ್ದುಪಡಿಗಳ ಕುರಿತು ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಚುನಾವಣಾ ನಿಯಮಗಳ (2024) ತಿದ್ದುಪಡಿಗಳ ಸಿಂಧುತ್ವದ ಕುರಿತು ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. 1991 ರ ಪೂಜಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿಯಲು ಕೋರಿ ಕಾಂಗ್ರೆಸ್ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
The INC's challenge of the CAA, 2019 is being heard in the Supreme Court.
The INC's challenge of the 2019 amendments to the RTI Act, 2005 is being heard in the Supreme Court.
The INC’s challenge to the validity of the amendments to the Conduct of Election Rules (2024) is being…
— Jairam Ramesh (@Jairam_Ramesh) April 4, 2025
ಬುಧವಾರ (ಏ.2) ಲೋಕಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಅಂಗೀಕಾರಗೊಂಡಿದ್ದ ವಕ್ಫ್ ತಿದ್ದುಪಡಿ ಮಸೂದೆಯು, ಗುರುವಾರ ತಡರಾತ್ರಿ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. ಇದರ ವಿರುದ್ದ ಕಾನೂನು ಸಮರ ನಡೆಸುವುದಾಗಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಡಿಎಂಕೆ ಪಕ್ಷ ಈಗಾಗಲೇ ಹೇಳಿಕೊಂಡಿವೆ.


