Homeರಾಷ್ಟ್ರೀಯರಾಜೀವ್‌ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರಿಂನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲಿರುವ ಕಾಂಗ್ರೆಸ್!

ರಾಜೀವ್‌ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರಿಂನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲಿರುವ ಕಾಂಗ್ರೆಸ್!

- Advertisement -
- Advertisement -

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ.

ಈ ವಾರ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. “ಆದೇಶದಲ್ಲಿ ನಿಗದಿಪಡಿಸಿದ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೊಸ ಮರುಪರಿಶೀಲನಾ ಅರ್ಜಿಯನ್ನು ಮುಂದಿನ ಕೆಲವು ದಿನಗಳಲ್ಲಿ ಪಕ್ಷದ ಪರವಾಗಿ ಸಲ್ಲಿಸಲಾಗುವುದು” ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್‌ನಿಂದ ಟೀಕೆಗಳನ್ನು ಎದುರಿಸುತ್ತಿರುವ ಒಕ್ಕೂಟ ಸರ್ಕಾರವು ಕಳೆದ ವಾರ ಪ್ರಕರಣದಲ್ಲಿ ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ತನ್ನ ಆದೇಶವನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿತ್ತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ನವೆಂಬರ್ 11 ರಂದು ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಸೇರಿ ಆರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಆದೇಶ

1991ರಲ್ಲಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಆತ್ಮಹತ್ಯಾ ಬಾಂಬರ್‌ನಿಂದ ಕೊಲ್ಲಲ್ಪಟ್ಟರು.

ಈ ಪ್ರಕರಣದಲ್ಲಿ ಮುರುಗನ್ ಅಲಿಯಾಸ್ ಶ್ರೀಹರನ್, ನಳಿನಿ, ಎಜಿ ಪೆರಾರಿವಾಲನ್, ಸಂತನ್, ಜಯಕುಮಾರ್, ರಾಬರ್ಟ್ ಪಾಯಸ್ ಮತ್ತು ಪಿ. ರವಿಚಂದ್ರನ್ ಅವರನ್ನು ಪ್ರಕರಣ ನಡೆದ ವರ್ಷದಲ್ಲೆ ವಿಚಾರಣೆ ನಡೆಸಿ ದೋಷಿಗಳೆಂದು ಘೋಷಿಸಿ, ಅವರಿಗೆ ಮರಣದಂಡನೆ ವಿಧಿಸಲಾಯಿತು. ನಂತರದ ವರ್ಷಗಳಲ್ಲಿ ಇದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಯಿತ್ತು.

ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ. ಪೆರಾರಿವಾಲನ್ ಅವರನ್ನು 2022ರ ಮಾರ್ಚ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದಾಗಿ ಆರು ತಿಂಗಳ ನಂತರ, ಉಳಿದ ಆರು ಜನರನ್ನು ಕೂಡಾ ಬಿಡುಗಡೆ ಮಾಡಲಾಗಿದೆ. ಪೆರಿಯರಿವಾಲನ್ ಬಿಡುಗಡೆಯಾದಾಗ ಅಪರಾಧಿಗಳನ್ನು ಬಿಡುಗಡೆ ಮಾಡುವ ಕಾನೂನು ತರ್ಕವನ್ನು ಈಗಾಗಲೇ ಸ್ಥಾಪಿಸಲಾಗಿದೆ, ಅದೇ ವಾದಗಳು ಇತರರಿಗೂ ಅನ್ವಯಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ದೇಶಭಕ್ತನ ಮಗನಾಗಿರುವುದಕ್ಕೆ ಹೆಮ್ಮೆಯಿದೆ; ರಾಜೀವ್ ಗಾಂಧಿ ಪುಣ್ಯಸ್ಮರಣೆ ಮಾಡಿದ ರಾಹುಲ್

ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಅಪರಾಧಿಗಳೆಲ್ಲರೂ ಜೈಲಿನಲ್ಲಿ ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ್ದಾರೆ ಮತ್ತು ಜೈಲಿನಲ್ಲಿದ್ದಾಗ ಅವರು ಶೈಕ್ಷಣಿಕ ಅರ್ಹತೆಗಳನ್ನು ಸಹ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...