Homeಮುಖಪುಟಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರಿಕೆಟ್ ತಂಡದಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತದೆ: ಮತ್ತೆ ದ್ವೇಷ ಬಿತ್ತಿದ ಮೋದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರಿಕೆಟ್ ತಂಡದಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತದೆ: ಮತ್ತೆ ದ್ವೇಷ ಬಿತ್ತಿದ ಮೋದಿ

- Advertisement -
- Advertisement -

ಧರ್ಮದ ಆಧಾರದ ಮೇಲೆ ಕ್ರೀಡೆಗಳಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲು ಕಾಂಗ್ರೆಸ್ ಪಕ್ಷ ಬಯಸಿದೆ, ಕ್ರಿಕೆಟ್ ತಂಡದಲ್ಲಿ ಯಾರು ಉಳಿಯುತ್ತಾರೆ ಮತ್ತು ಯಾರು ಉಳಿಯುವುದಿಲ್ಲ ಎಂಬುದನ್ನು ಕಾಂಗ್ರೆಸ್‌ ಧರ್ಮದ ಆಧಾರದಲ್ಲಿ ನಿರ್ಧರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್‌ ವಿರುದ್ಧ ಆರೋಪವನ್ನು ಮಾಡಿದ್ದಾರೆ.

ಮಧ್ಯಪ್ರದೇಶದ ಧಾರ್‌ನಲ್ಲಿ ಲೋಕಸಭೆ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಧರ್ಮದ ಆಧಾರದ ಮೇಲೆ ಕ್ರೀಡೆಗಳಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲು ಕಾಂಗ್ರೆಸ್ ಪಕ್ಷ ಬಯಸಿದೆ, ಕ್ರಿಕೆಟ್ ತಂಡದಲ್ಲಿ ಯಾರು ಉಳಿಯುತ್ತಾರೆ ಮತ್ತು ಯಾರು ಉಳಿಯುವುದಿಲ್ಲ ಎಂಬುದನ್ನು ಕಾಂಗ್ರೆಸ್‌ ಧರ್ಮದ ಆಧಾರದಲ್ಲಿ ನಿರ್ಧರಿಸುತ್ತದೆ, ನಾನು ಕಾಂಗ್ರೆಸ್‌ನ್ನು ಕೇಳಲು ಬಯಸಿದ್ದೆ, ಹಾಗೆ ಮಾಡಲು ಬಯಸಿದರೆ, ಅದು 1947ರಲ್ಲಿ ದೇಶವನ್ನು ಏಕೆ ಮೂರು ಭಾಗಗಳಾಗಿ ವಿಭಜಿಸಿತು ಎಂದು ನಾನು ಕೇಳಲು ಬಯಸುತ್ತೇನೆ. ನಾನು ಬದುಕಿರುವವರೆಗೂ ನಕಲಿ ಜಾತ್ಯತೀತತೆಯ ಹೆಸರಿನಲ್ಲಿ ಭಾರತದ ಗುರುತನ್ನು ಅಳಿಸಿ ಹಾಕುವ ಯಾವುದೇ ಪ್ರಯತ್ನವನ್ನು ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ 370ನೇ ವಿಧಿಯನ್ನು ಕಾಂಗ್ರೆಸ್ ಹಿಂಪಡೆಯದಂತೆ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ “ಬಾಬರಿ ಬೀಗ” ಹಾಕದಂತೆ ನೋಡಿಕೊಳ್ಳಬೇಕಿದ್ದರೆ ಬಿಜೆಪಿ ನೇತೃತ್ವದ ಎನ್‌ಡಿಎಗೆ 400 ಸ್ಥಾನಗಳ ಜನಾದೇಶವನ್ನು ನೀಡಬೇಕು ಎಂದು ಮೋದಿ ಹೇಳಿದ್ದಾರೆ.

ಇದೇ ವೇಳೆ ಸಂವಿಧಾನ ರಚನೆಯಲ್ಲಿ ಪಂಡಿತ್ ನೆಹರೂಗೆ ಹೋಲಿಸಿದರೆ ಅಂಬೇಡ್ಕರ್ ಪಾತ್ರ ಕಿರಿದು ಎಂದು ಹೇಳುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅವಮಾನಿಸುತ್ತಿದೆ, ವಾಸ್ತವವೆಂದರೆ, ಕಾಂಗ್ರೆಸ್ ಪರಿವಾರವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಆಳವಾಗಿ ದ್ವೇಷಿಸುತ್ತದೆ ಎಂದು ಮೋದಿ ವಾಗ್ಧಾಳಿಯನ್ನು ನಡೆಸಿದ್ದಾರೆ.

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು. ಮೋದಿಯ ಈ ದ್ವೇಷದ ಭಾಷಣದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದನ್ನು ಓದಿ: ದ್ವೇಷಪೂರಿತ ಭಾಷಣ: ಮೋದಿಯಿಂದ ವಿವರಣೆ ಕೇಳಲು ಚು.ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...