Homeಕರ್ನಾಟಕಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್

ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್

- Advertisement -
- Advertisement -

ರಾಜ್ಯ ಕಾಂಗ್ರೆಸ್‌‌ ಸೋಮವಾರದಂದು ಬೆಂಗಳೂರಿನಾದ್ಯಂತ 300 ಸ್ಥಳಗಳಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ. ಜನವರಿ 22ರ ಭಾನುವಾರ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಶಾಸಕ ಎನ್.ಎ. ಹಾರೀಸ್, “ಪಕ್ಷದ ಹಿರಿಯ ಮುಖಂಡರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಮುಖಂಡರು ಸೋಮವಾರ ಟ್ರಿನಿಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ” ಎಂದು ಹೇಳಿದ್ದಾರೆ.

ರಾಜ್ಯದ ಬೊಮ್ಮಾಯಿ ಸರ್ಕಾರದ ವಿರುದ್ಧ ಹೊರಿಸಲಾಗಿರುವ ಭ್ರಷ್ಟಾಚಾರ ಆರೋಪದ ವಿರುದ್ಧ ಈ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಹೇಳಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಎನ್‌.ಎ. ಹಾರಿಸ್, “ಭ್ರಷ್ಟಾಚಾರ ಆರೋಪದ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧವಾಗಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವು ತಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರದ 200 ಸಿಗ್ನಲ್‌ಗಳು, 26 ಫ್ಲೈಓವರ್‌ಗಳು ಮತ್ತು 25 ಮೆಟ್ರೋ ನಿಲ್ದಾಣಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ನಡೆಯುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳ ವರದಿ ಹೇಳಿದೆ. ಸರ್ಕಾರಿ ಯೋಜನೆಗಳಲ್ಲಿ ಭಾಗಿಯಾಗಿರುವ ಗುತ್ತಿಗೆದಾರರಿಂದ ಬಿಜೆಪಿ ಸರ್ಕಾರ 40%ದಷ್ಟು ಕಮಿಷನ್ ಪಡೆಯುತ್ತದೆ ಎಂಬ ಆರೋಪ ಸೇರಿದಂತೆ ಕಾಂಗ್ರೆಸ್‌ ಸೇರಿದಂತೆ ಹಲವು ಆರೋಪಗಳನ್ನು ಮಾಡಿದೆ.

ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ಸಂಘದ ಉಪಾಧ್ಯಕ್ಷ ಆರ್.ಮಂಜುನಾಥ್ ಅವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋವನ್ನು ಕರ್ನಾಟಕ ಗುತ್ತಿಗೆದಾರರ ಸಂಘವು ಜನವರಿ 16 ರಂದು ಬಿಡುಗಡೆ ಮಾಡಿತ್ತು. ವಿವಿಧ ಕಟ್ಟಡ ಕಾಮಗಾರಿ ನಡೆಸಲು ಬಿಜೆಪಿ ಶಾಸಕರು ಕೇಳಿದ ಲಂಚದಲ್ಲಿ 25%ದಷ್ಟು ತಾನು ನೀಡಿದ್ದಾಗಿ ಮಂಜುನಾಥ್ ಹೇಳಿಕೊಂಡಿದ್ದಾರೆ.

ಹಲವು ಸಚಿವರು ತಮ್ಮೊಂದಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೊ ಸೇರಿದಂತೆ ದಾಖಲೆಗಳು ತಮ್ಮ ಬಳಿ ಇವೆ ಎಂದು ಅಸೋಸಿಯೇಷನ್ ಮುಖಂಡರು ಹೇಳಿದ್ದು, ಸರ್ಕಾರವು ತಮ್ಮ ಬಿಲ್‌ಗಳನ್ನು ಪಾವತಿ ಮಾಡದಿದ್ದರೆ ಅವುಗಳನ್ನು ಬಿಡುಗಡೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

0
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಆಗ್ರಹಿಸಿದ್ದು, ಇವಿಎಂಗಳನ್ನು ನೇರವಾಗಿ ಉಲ್ಲೇಖಿಸದೆ ಈ ಯಂತ್ರಗಳು ಮತ್ತು ಮತದಾನದ ಫಲಿತಾಂಶಗಳು ಜನರ ಮನಸ್ಸಿನಲ್ಲಿ ಅಪನಂಬಿಕೆಯ ಭಾವನೆಯನ್ನು ಮೂಡಿಸಿವೆ...