Homeಮುಖಪುಟಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

‘ನಾನು ಮಹಿಳೆ, ನಾನು ಹೋರಾಡಬಲ್ಲೆ’ ಎಂಬ ಚುನಾವಣಾ ಘೋಷವಾಕ್ಯವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

- Advertisement -
- Advertisement -

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಶತಾಯಗತಾಯ ಗೆದ್ದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಅದಕ್ಕಾಗಿ ನಡೆಯುತ್ತಿರುವ ಹಲವಾರು ರ್‍ಯಾಲಿಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಉತ್ತರ ಪ್ರದೇಶದ ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಅವರು 40% ಮಹಿಳೆಯರಿಗೆ ಟಿಕೆಟ್‌ ನೀಡುವುದಾಗಿ, 40% ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸೇರಿದಂತೆ ಹಲವು ಮಹಿಳಾ ಪರ ಭರವಸೆಗಳನ್ನು ನೀಡಿದ್ದಾರೆ. ಅಲ್ಲದೆ ‘ನಾನು ಮಹಿಳೆ, ನಾನು ಹೋರಾಡಬಲ್ಲೆ’ ಎಂಬ ಚುನಾವಣಾ ಘೋಷವಾಕ್ಯವನ್ನು ಬಿಡುಗಡೆ ಮಾಡಿರುವ ಅವರು ಇಡೀ ಉತ್ತರ ಪ್ರದೇಶ ಚುನಾವಣೆಯನ್ನು ಮಹಿಳಾ ಕೇಂದ್ರಿತವನ್ನಾಗಿ ಮಾಡಲು ಮುಂದಾಗಿದ್ದಾರೆ. ಇವೆಲ್ಲವೂ ಕಾಂಗ್ರೆಸ್‌ನಿಂದ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಬಹುದು ಎಂಬ ಚರ್ಚೆಗೆ ಇಂಬು ಕೊಟ್ಟಿವೆ.

ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡು ವಿಪಕ್ಷದಲ್ಲಿರುವ ಕಾಂಗ್ರೆಸ್‌‌ಗೆ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಮಣಿಸಲು ಸಾಧ್ಯವಾಗಲಿದೆಯೆ ಎಂಬುದಕ್ಕೆ ಉತ್ತರ ಪ್ರದೇಶ ಚುನಾವಣೆ ಸುಳಿವು ನೀಡಲಿದೆ. 2019 ರ ಸಾರ್ವತ್ರಿಕ ಚುನಾವಣೆಯ ಸೋಲಿನ ನಂತರ ಕಾಂಗ್ರೆಸ್‌‌ ಅಷ್ಟೇನೂ ಸಾಧಿಸಿಲ್ಲ. ಹಲವು ರಾಜ್ಯಗಳಲ್ಲಿ ಅಧಿಕಾರದ ಹತ್ತಿರಕ್ಕೆ ಬಂದರೂ ಬಿಜೆಪಿಯ ಆಪರೇಷನ್‌ ಕಮಲದೊಂದಿಗೆ ಸ್ಪರ್ಧಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ. ಪಕ್ಷವು ಈಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿದೆ. ಪಕ್ಷ ತನ್ನ ಹಳೆಯ ಶೈಲಿಯಲ್ಲಿಯೇ ಇದೆ ಎಂಬ ಟೀಕೆ ಈಗಲೂ ಚಾಲ್ತಿಯಲ್ಲಿದ್ದು, ಪಕ್ಷ ಗಾಂಧಿ ಕುಟುಂಬವನ್ನೇ ನಂಬಿಕೊಂಡಿದೆ ಎಂಬುವುದನ್ನು ‘ಇಲ್ಲ’ ಎಂದು ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ.

ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಶೇ.40 ರಷ್ಟು ಟಿಕೆಟ್‌ ಮಹಿಳೆಯರಿಗೆ: ಪ್ರಿಯಾಂಕಾ ಗಾಂಧಿ

ತನ್ನ ಜಾತ್ಯತೀತ ಪರಂಪರೆಯೊಂದಿಗೆ, ಎಲ್ಲರನ್ನೂ ಒಳಗೊಳ್ಳುವ ರಾಷ್ಟ್ರೀಯ ಪಕ್ಷವೆಂದು ಕಾಂಗ್ರೆಸ್‌ ಬಿಂಬಿಸಿಕೊಳ್ಳುತ್ತಿದೆ. ಉತ್ತರ ಪ್ರದೇಶದ ಸಂದರ್ಭದಲ್ಲಿ ಹೇಳುವುದಾದರೆ, 2019 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ನೇತೃತ್ವವು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ. ಜೊತೆಗೆ ಪ್ರಧಾನಿ ಮೋದಿಯ ಕಟ್ಟರ್‌‌ ಹಿಂದೂಗಳಿಗೆ ಪರ್ಯಾಯವಾಗಿ ಬೇರೆಯೇ ರೀತಿಯ ಕಾರ್ಯಸೂಚಿಯನ್ನು ಪ್ರಸ್ತುತ ಪಡಿಸುತ್ತದೆ.

 

ಮಹಿಳೆಯರ ವಿರುದ್ಧ ನಡೆಯುವ ಹಿಂಸಾಚಾರವು ಭಾರತದಾದ್ಯಂತ ಅದರಲ್ಲೂ ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಮತದಾರರನ್ನು ಎಚ್ಚರಿಸಲಾಗುತ್ತಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಅತಿ ಹೆಚ್ಚು ಲಿಂಗ ಅಪರಾಧಗಳನ್ನು ಎದುರಿಸುತ್ತಿರುವ ರಾಜ್ಯವಾಗಿದೆ ಉತ್ತರ ಪ್ರದೇಶ. ಹೀಗಾಗಿ ಪ್ರಿಯಾಂಕಾ ಗಾಂಧಿ ಮಹಿಳೆಯರ ಪರವಾಗಿ ಬದಲಾವಣೆಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

“ನಾನು ಮಹಿಳೆಯರಿಗಾಗಿ ಹೋರಾಡುತ್ತೇನೆ, ಕಾಂಗ್ರೆಸ್ ಪಕ್ಷವು ಅವರಿಗಾಗಿ ಹೋರಾಡುತ್ತದೆ ಎಂದು ನಾನು ಮಹಿಳೆಯರಿಗೆ ಹೇಳಲು ಬಯಸುತ್ತೇನೆ” ಎಂದು ಪ್ರಿಯಾಂಕಾ ಗಾಂಧಿ ಕಳೆದ ಭಾನುವಾರದಂದು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸ್ವಕ್ಷೇತ್ರದಲ್ಲಿ ಗೋರಖ್‌ಪುರದಲ್ಲಿ ಘೋಷಿಸಿದ್ದರು.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಮಹಿಳೆಯರ ವಿರುದ್ದದ ದೌರ್ಜನ್ಯ, ಕೊರೊನಾ ಸಾಂಕ್ರಮಿಕವನ್ನು ಕೆಟ್ಟದಾಗಿ ನಿರ್ವಹಣೆ ಮಾಡಿದ್ದಕ್ಕಾಗಿ ಭಾರಿ ಟೀಕೆಯನ್ನು ಎದುರಿಸುತ್ತಿದೆ. ಈ ಮಧ್ಯೆ ಪಶ್ಚಿಮ ಯುಪಿಯಲ್ಲಿ ಪ್ರಧಾನಿ ಮೋದಿಯವರು ಜಾರಿಗೆ ತಂದಿರು ಕೃಷಿ ಕಾನೂನಗಳ ವಿರುದ್ಧ ರೈತರು ಸಿಡಿದಿದ್ದಿದ್ದಾರೆ. ರೈತರ ಪ್ರತಿಭಟನೆಯ ಕಾವು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಭಾನುವಾರ ಗೋರಖ್‌ಪುರದಲ್ಲಿನ ರ್‍ಯಾಲಿಯಲ್ಲಿ ಸುಮಾರು 40,000 ಜನರು ಭಾಗವಹಿಸಿದ್ದರೆ ಅದರಲ್ಲಿ ಕಾಲು ಭಾಗದಷ್ಟು ಜನರು ಮಹಿಳೆಯರೇ ಭಾಗವಹಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಬೇರೆಲ್ಲಾ ರ್ಯಾಲಿಗಳಿಗಿಂತ ಹೆಚ್ಚು ಮಹಿಳೆಯರು ಭಾಗವಹಿಸಿದ ರ್ಯಾಲಿ ಎನ್ನಲಾಗುತ್ತಿದೆ. ಇದು ಯುಪಿಯ ಮಹಿಳೆಯರು ಕಾಂಗ್ರೆಸ್‌ ಪರವಾಗಿ ಒಲವು ತೋರುತ್ತಿದ್ದಾರೆ ಎಂಬ ಸೂಚನೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. “ಜನರು, ವಿಶೇಷವಾಗಿ ಮಹಿಳೆಯರು ಕಾಂಗ್ರೆಸ್ ಅನ್ನು ಭರವಸೆಯಿಂದ ನೋಡಲಾರಂಭಿಸಿದ್ದಾರೆ, ಪಕ್ಷವು ಮಹಿಳೆಯರೊಂದಿಗೆ ನಿಲ್ಲಲಿದ್ದು, ಅವರ ಧ್ವನಿಯಾಗುತ್ತದೆ” ಎಂದು ರ್‍ಯಾಲಿಯಲ್ಲಿ ಪಕ್ಷದ ಮತ್ತೊಬ್ಬ ನಾಯಕಿ ಸುನೀತಾ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಜನರಿಗೆ ತೊಂದರೆ ಕೊಡುವಲ್ಲಿ ಮೋದಿ ಸರ್ಕಾರ ದಾಖಲೆ ಸೃಷ್ಟಿಸಿದೆ: ಪ್ರಿಯಾಂಕಾ ಗಾಂಧಿ

ರಾಜ್ಯದ 403 ವಿಧಾನಸಭಾ ಕ್ಷೇತ್ರಗಳಲ್ಲಿ 40% ರಷ್ಟು ಮಹಿಳೆಯರನ್ನು ಕಣಕ್ಕಿಳಿಸುವ ಕಾಂಗ್ರೆಸ್‌ನ ವಾಗ್ದಾನವನ್ನು ಮತದಾರರು ಸ್ವಾಗತಿಸಿದ್ದಾರೆ ಎಂದು ಹೇಳಿದ್ದಾರೆ. ಅವರೇ ಹೇಳುವಂತೆ ಕಳೆದ ಕೆಲವು ದಿನಗಳಲ್ಲಿ 50 ಮಹಿಳೆಯರನ್ನು ಪಕ್ಷದ ಕಾರ್ಯಕರ್ತರಾಗಿ ಮಾಡಿದ್ದಾರೆ.

ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಸ್ಮಾರ್ಟ್‌ಫೋನ್‌ಗಳು, ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಉಚಿತ ಅಡುಗೆ-ಗ್ಯಾಸ್ ಸಿಲಿಂಡರ್‌ಗಳು ಮತ್ತು ಲಿಂಗ ಆಧಾರಿತ ಉದ್ಯೋಗ ಮೀಸಲಾತಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್‌ ಈಗಾಗಲೆ ಭರವಸೆ ನೀಡಿದೆ.

ಪಕ್ಷದೊಳಗಿನ ಸಮಸ್ಯೆಯೇನು?

ಈ ಎಲ್ಲದರ ನಡುವೆಯು ಉತ್ತರ ಪ್ರದೇಶದ ಕಾಂಗ್ರೆಸ್ ಆಂತರಿಕ ಸಮಸ್ಯೆಗಳ ಸರಣಿಯಿಂದ ಬಳಲುತ್ತಿದೆ. ಇದರ ಛಾಯೆ ರಾಷ್ಟ್ರೀಯ ಮಟ್ಟದಲ್ಲೂ ಕಾಣುತ್ತಿದೆ. ಸ್ಥಾನಕ್ಕಾಗಿ ಪೈಪೋಟಿ, ಅಸಮಾಧಾನ, ಹಿರಿಯ ಸದಸ್ಯರ ರಾಜೀನಾಮೆಯ ನಡುವೆಯೂ ಪ್ರಿಯಾಂಕಾ ಗಾಂಧಿ ತನ್ನ ಛಾಪನ್ನು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

“ರಾಜ್ಯ ನಾಯಕತ್ವವು ಕೇವಲ ಹೊಗಳುಭಟ್ಟರ ಮಾತುಗಳನ್ನು ಕೇಳುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಪಕ್ಷದಲ್ಲಿ ಅಂತಹವರ ಸಂಖ್ಯೆ ಹೆಚ್ಚಾಗಿದೆ” ಎಂದು ಇತ್ತೀಚೆಗೆ ಪಕ್ಷವನ್ನು ತೊರೆದ ಗೋರಖ್‌ಪುರದ ಮಾಜಿ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ರಾಣಾ ರಾಹುಲ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಈ ಎಲ್ಲದರ ಮಧ್ಯೆ ಪಕ್ಷದ ಮರುಸಂಘಟನೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರರಾದ ಸುಪ್ರಿಯಾ ಹೇಳಿದ್ದಾರೆ. “ಬದಲಾವಣೆಗಳು ಕಷ್ಟಕರವೇ ಆಗಿದ್ದರೂ, ಅವು ಒಳ್ಳೆಯದೇ ಆಗಿದೆ. ಇದು ದೀರ್ಘಾವಧಿಯಲ್ಲಿ ಕೆಲಸ ಮಾಡಲಿವೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಚುನಾವಣಾ ಏಜೆನ್ಸಿ ಸಿವೋಟರ್‌ನ ಇತ್ತೀಚಿನ ಸಮೀಕ್ಷೆಯು, 403 ಕ್ಷೇತ್ರಗಳಲ್ಲಿ ಬಿಜೆಪಿಯು 240 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದರೊಂದಿಗೆ ರಾಜ್ಯದ ಚುನಾವಣೆಯನ್ನು ಸುಲಭವಾಗಿ ಗೆಲ್ಲುತ್ತದೆ ಎಂದು ಅಂದಾಜಿಸಿದೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಕೇವಲ ಮೂರರಿಂದ ಏಳು ಕ್ಷೇತ್ರಗಳನ್ನು ಮಾತ್ರ ಪಡೆಯಲಿದ್ದು, ಪಕ್ಷ ನಾಲ್ಕನೇ ಸ್ಥಾನವನ್ನಷ್ಟೇ ಗಳಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ ಗಾಂಧಿ

ಕಳೆದ 2017 ರ ರಾಜ್ಯ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್ 114 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆದ್ದುಕೊಂಡಿದ್ದರೆ, ಬಿಜೆಪಿ 312ರಲ್ಲಿ ಗೆದ್ದಿತ್ತು.

ಭಾರತದಾದ್ಯಂತ ಮಹಿಳಾ ಮತದಾರರ ಪ್ರಮಾಣವು ಸ್ಥಿರವಾಗಿ ಹೆಚ್ಚುತ್ತಿದೆ ಮತ್ತು ಕೆಲವು ರಾಜ್ಯಗಳಲ್ಲಿ ಈಗ ಪುರುಷರಿಗಿಂತ ಮಹಿಳೆಯರೇ ಹೆಚ್ಚಾಗಿ ಮತ ಚಲಾಯಿಸುತ್ತಿದ್ದಾರೆ ಎಂದು ನವದೆಹಲಿಯ ಅಭಿವೃದ್ಧಿಶೀಲ ಸಮಾಜಗಳ ಅಧ್ಯಯನ ಕೇಂದ್ರದ ಪ್ರವೀಣ್ ರಾಯ್ ಹೇಳಿದ್ದಾರೆ.

“ಮಹಿಳೆಯರ ಮತಗಳು ಕಾಂಗ್ರೆಸ್‌ಗೆ ಹೆಚ್ಚು ಗೆಲುವಿನ ಕ್ಷೇತ್ರಗಳಾಗಿ ಪರಿವರ್ತನೆಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಊಹಿಸಲು ಸ್ವಲ್ಪ ಕಷ್ಟ. ಆದರೆ ಪಕ್ಷವು ರಾಜ್ಯದಲ್ಲಿ ಎದ್ದೇಳಲು ಮತ್ತು ಕೆಲವು ರಾಜಕೀಯ ವಲಯವನ್ನು ಸೃಷ್ಟಿಸಲು ಇದು ಸರಿಯಾದ ತಂತ್ರ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಪ್ರವೀಣ್‌ ರಾಯ್ ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಮಹಿಳೆಯರಿಗೆ ಮತ್ತೇ ಭರ್ಜರಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿ

ಇನ್‌ಪುಟ್‌: ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...