Homeಕರ್ನಾಟಕಕಾಂಗ್ರೆಸ್‌ನ 6ನೇ ಗ್ಯಾರೆಂಟಿ- 'PSI, ಬಿಟ್‌ಕಾಯಿನ್ ಹಗರಣ'ಗಳಿಗೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್‌ನ 6ನೇ ಗ್ಯಾರೆಂಟಿ- ‘PSI, ಬಿಟ್‌ಕಾಯಿನ್ ಹಗರಣ’ಗಳಿಗೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕೊಟ್ಟಂತಹ ಐದು ಗ್ಯಾರಂಟಿಗಳ ಘೋಷಣೆಯಿಂದ ಭರ್ಜರಿ ಗೆಲುವು ದಾಖಲಿಸಿದೆ. ”ಐದು ಗ್ಯಾರೆಂಟಿಗಳು ಪ್ರಮುಖವಾಗಿದದ್ದು, ಈಗ ಸರ್ಕಾರ ರಚನೆಯ ಬಳಿಕ ಪಿಎಸ್‌ಐ ಹಾಗೂ ಬಿಟ್‌ ಕಾಯಿನ್‌ ಹಗರಣಗಳಿಗೆ ತಾರ್ಕಿಕ ಅಂತ್ಯದೆಡೆಗೆ ತೆಗೆದುಕೊಂಡು ಹೋಗುವುದೇ ನಮ್ಮ ಆರನೇ ಗ್ಯಾರಂಟಿ” ಎಂದು ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ”ಬಿಜೆಪಿ ಸರ್ಕಾರದ ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ವೇಳೆ ಐದು ಗ್ಯಾರೆಂಟಿಗಳಿ ಶರತ್ತು ವಿಧಿಸಿರುವ ಬಗ್ಗೆಮಾಧ್ಯಮದವರು  ಪ್ರಶ್ನೆ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ”ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. ಯಾವುದೇ ಸರ್ಕಾರ ಯೋಜನೆಗಳನ್ನ ಜಾರಿಗೊಳಿಸಿದರೇ ಷರತ್ತುಗಳಿಲ್ಲದೆ ಜಾರಿಗೊಳಿಸಲು ಸಾಧ್ಯವಾ?” ಎಂದು ಪ್ರಶ್ನಿಸಿದ್ದಾರೆ.

”ಕೇಂದ್ರ ಸರ್ಕಾರದ ಯೋಜನೆಗಳಿರಲಿ ಅಥವಾ ರಾಜ್ಯ ಸರ್ಕಾರದ ಯೋಜನೆಗಳಿರಲಿ ಷರತ್ತುಗಳು ಅನ್ವಯಿಸಲಿವೆ. ಬಡವರಿಗೆ ಅನುಕೂಲ ಮಾಡಿಕೊಡಲು ಈ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟಟ್‌ನಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಆದೇಶ ಆಗಬಹುದು” ಎಂದು ಹೇಳಿದ್ದಾರೆ.

”ಚಿತ್ತಾಪುರದಿಂದ ಮೂರು ಬಾರಿ ಗೆದ್ದಿದ್ದೇನೆ. ನನ್ನನ್ನು ಸೋಲಿಸಲು ಅನೇಕ ರೀತಿಯಲ್ಲಿ ಬಿಜೆಪಿ ಪ್ರಯತ್ನ ಮಾಡಿತ್ತು. ಆದರೆ, ನನ್ನ ಕ್ಷೇತ್ರದ ಜನ ನನ್ನ ಕೈ ಬಿಡಲಿಲ್ಲ. ನನ್ನ ವಿರುದ್ಧ ಪ್ರಚಾರಕ್ಕೆಂದು ಬಿಜೆಪಿಯ ಘಟಾನುಘಟಿ ನಾಯಕರು ಬಂದಿದ್ದರು. ಆದರೂ ನನಗೇ ಗೆಲುವಾಗಿದ್ದು ಈಗ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಎಲ್ಲ ನಾಯಕರನ್ನು ಅಭಿನಂದಿಸುತ್ತೇನೆ” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಪ್ರಮುಖ ಕಾರಣವಾಗಿವೆ. ಕಳೆದ ಅವಧಿಯ ಬಿಜೆಪಿ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಜನರ ಮುಂದೆ ಇಟ್ಟು ಸರ್ಕಾರದ ಅವ್ಯವಹಾರವನ್ನು ಹೊರಗೆಳಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅವಕಾಶವನ್ನ ಮಾಡಿಕೊಡಬಾರದು ಎಂದು ಕಾಂಗೆಸ್‌ ಸರ್ಕಾರವು ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಗೆ ಈ ಐದು ಅಂಶಗಳು ಪ್ರಮುಖ ಕಾರಣ

ಪಿಎಸ್‌ಐ ಹಗರಣ

ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್‌ಐ ಹಗರಣ ಬೆಳಕಿಗೆ ಬಂದಿತು. 2021ರ ಅಕ್ಟೋಬರ್‌ನಲ್ಲಿ ನಡೆದ 545 ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಕೆಲ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಅಕ್ರಮವೆಸಗಲಾಗಿತ್ತು. ಕೇವಲ 21 ಪ್ರಶ್ನೆಗಳಿಗೆ ಉತ್ತರ ಬರೆದವರಿಗೆ 100 ಅಂಕ ನೀಡಲಾಗಿತ್ತು. ಖಾಲಿ ಬಿಟ್ಟ ಓಎಂಆರ್ ಶೀಟ್‌ಅನ್ನು ಪರೀಕ್ಷೆ ಮುಗಿದ ಬಳಿಕ ತುಂಬಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಕಲಬುರಗಿಯ ಬಿಜೆಪಿ ನಾಯಕಿಯಾಗಿದ್ದು ಅವರನ್ನು ಬಂಧಿಸಲಾಗಿತ್ತು. ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಗೌಡರೊಂದಿಗೆ ಇರುವ ಫೋಟೊಗಳು ವೈರಲ್ ಆಗಿದ್ದವು. ಆದರೆ ಇದರ ತನಿಖೆಯು ತಾರ್ಕಿಕ ಅಂತ್ಯ ಕಂಡಿಲ್ಲ.

ಬಿಟ್ ಕಾಯಿನ್ ಹಗರಣ

ಬೊಮ್ಮಾಯಿಯವರು ಮುಖ್ಯಮಂತ್ರಿ ಆದ ಮೂರೇ ತಿಂಗಳಿನಲ್ಲಿ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಅವರ ಹೆಸರು ಕೇಳಿಬಂದಿತ್ತು. ‘ಕಾಂಗ್ರೆಸ್‌ನವರು ಇದರಲ್ಲಿ ಇದ್ದಾರೆ ಎಚ್ಚರಿಕೆ’ ಎಂಬ ಹೇಳಿಕೆಗಳನ್ನು ಅವರು ನೀಡಿದರೇ ಹೊರತು ನಿಷ್ಪಕ್ಷಪಾತ ತನಿಖೆಗೆ ಮುಂದಾಗಲಿಲ್ಲ. ಆನಂತರ ಶ್ರೀಕಿ ಎಂಬ ಹ್ಯಾಕರ್‌ನನ್ನು ಬಂಧಿಸಲಾಯಿತು. ಡ್ರಗ್ಸ್ ಜಾಲ ಎಂದು ಕರೆಯಲಾಯಿತಾದರೂ, ಬಿಜೆಪಿಯವರೆ ಈ ಬಿಟ್ ಕಾಯಿನ್ ಹಗರಣ ಮಾಹಿತಿಯನ್ನು ಹೊರಹಾಕಿದ್ದರು. ಆದರೆ ಅದರ ತನಿಖೆ ಮಾತ್ರ ಸರಿಯಾದ ರೀತಿಯಲ್ಲಿ ನಡೆಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...