Homeಮುಖಪುಟಛತ್ತೀಸ್‌ಗಢ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ ₹ 15,000 ಆರ್ಥಿಕ ನೆರವು- ಸಿಎಂ ಬಘೇಲ್

ಛತ್ತೀಸ್‌ಗಢ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ ₹ 15,000 ಆರ್ಥಿಕ ನೆರವು- ಸಿಎಂ ಬಘೇಲ್

- Advertisement -
- Advertisement -

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ ₹ 15,000 ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

ಶುಕ್ರವಾರ ರಾಜ್ಯ ವಿಧಾನಸಭಾ ಚುನಾವಣೆಯ ಎರಡನೇ ಹಂತ ನಡೆಯುವ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಪ್ರತಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ 12 ಸಾವಿರ ರೂಪಾಯಿ ನೆರವು ನೀಡುವ ಭರವಸೆಯನ್ನು ಬಿಜೆಪಿ ನೀಡಿದ ಬೆನ್ನಲ್ಲೇ ಬಫೇಲ್ ಈ ಹೊಸ ಘೋಷಣೆ ಮಾಡಿದ್ದಾರೆ.

ನವೆಂಬರ್ 17 ರಂದು ನಡೆಯಲಿರುವ ಛತ್ತೀಸ್‌ಗಢದ ಎರಡನೇ ಹಂತದ ಚುನಾವಣೆಗೆ ಮುಂಚಿತವಾಗಿ ಪ್ರಕಟವಾದ ಈ ಘೋಷಣೆಯು, ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ ₹ 12,000 ನೀಡುವುದಾಗಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿದೆ.

”ಇಂದು, ದೀಪಾವಳಿಯ ಶುಭ ಸಂದರ್ಭದಲ್ಲಿ, ಮಾ ಲಕ್ಷ್ಮಿ ಜಿ ಮತ್ತು ಛತ್ತೀಸ್‌ಗಢ ಮಹತಾರಿಯ ಆಶೀರ್ವಾದದೊಂದಿಗೆ, ಮಹಿಳಾ ಸಬಲೀಕರಣಕ್ಕಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಬಘೇಲ್ ರಾಯ್‌ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

”ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ ₹ 15,000 ಸಹಾಯವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ‘ಛತ್ತೀಸ್‌ಗಢ ಗೃಹ ಲಕ್ಷ್ಮಿ ಯೋಜನೆ’ ಅಡಿಯಲ್ಲಿ ಒದಗಿಸಲಾಗುವುದು” ಎಂದು ಅವರು ಹೇಳಿದರು.

ಬಘೆಲ್ ಅವರು ರಾಜ್ಯದ ಜನರಿಗೆ ದೀಪಾವಳಿಯ ಶುಭಾಶಯಗಳನ್ನು ಕೋರಿದರು.

ರಾಜ್ಯದ ಒಟ್ಟು 90 ವಿಧಾನಸಭಾ ಸ್ಥಾನಗಳ ಪೈಕಿ 20 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನವೆಂಬರ್ 7 ರಂದು ನಡೆದಿದ್ದು, ಉಳಿದ 70 ಸ್ಥಾನಗಳಿಗೆ ನವೆಂಬರ್ 17 ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ED, CBI ರಾಜಕೀಯವನ್ನು ರಾಜಸ್ಥಾನದ ಜನರು ತಿರಸ್ಕರಿಸುತ್ತಾರೆ: ಜೈರಾಮ್ ರಮೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

0
ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ಭಾರತದಾದ್ಯಂತ ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ...